ಬೆಂಗಳೂರು: ಬೇಡಿಕೆ ಇಡೆರಿಕೆಗೆ ಒತ್ತಾಯಿಸಿ ಏ.7 ರಿಂದಲೇ ರಾಜ್ಯವ್ಯಾಪಿ ಎಲ್ಲ ನಿಗಮಗಳಲ್ಲಿ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ. ಮುಷ್ಕರ ಹಿನ್ನೆಲೆ ಸರ್ಕಾರಿ ಬಸ್ ಗಳು ರಸ್ತೆಗೆ ಇಳಿಯುತ್ತಿಲ್ಲ. ಸಾರಿಗೆ ನೌಕರರ ಮುಷ್ಕರ ಕಾರಣದಿಂದ ಖಾಸಗಿ ವಾಹನಗಳಿಗೆ ಪ್ರಯಾಣಿಕರು ಹೆಚ್ಚಿನ ಹಣ ನೀಡಿ ಪ್ರಯಾಣಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಇದರಿಂದ ನೊಂದ ವಿದ್ಯಾರ್ಥಿನಿ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಹಾಗೂ ಬಿಎಂಟಿಸಿ ಎಂಡಿಗೆ ಲೀಗಲ್ ನೋಟಿಸ್ ಕಳಿಸಿದ್ದಾರೆ.

ನಾವು ಬಿಎಂಟಿಸಿ ವಾರ್ಷಿಕ ಪಾಸ್ ಖರೀದಿಸಿದ್ದೇವೆ. ಆದರೆ ನಮ್ಮ ಬಳಿ ಪಾಸ್ ಇದ್ದರೂ ಹಣ ಕೊಟ್ಟು ಸಂಚಾರ ಮಾಡಬೇಕಾಗುತ್ತಿದೆ. 2 ದಿನದಿಂದ ಹೆಚ್ಚುವರಿ ಹಣ ನೀಡಿ ಬಸ್‌ನಲ್ಲಿ ಸಂಚರಿಸುತ್ತಿದ್ದೇವೆ. ಪಾಸ್ ಹೊಂದಿರುವರಿಗೆ ಬಸ್ ಸೌಲಭ್ಯ ಒದಗಿಸಿಲ್ಲ. ಇದು ಸೇವಾ ನ್ಯೂನತೆ, ಅನುಚಿತ ವ್ಯಾಪಾರ ಪದ್ಧತಿ. ಹೀಗಾಗಿ ₹10 ಲಕ್ಷ ಪರಿಹಾರ ನೀಡಬೇಕೆಂದು ವಿದ್ಯಾರ್ಥಿನಿ ಪಾವನ ಕೋಡಿಹಳ್ಳಿ ಚಂದ್ರಶೇಖರ್​ರಿಗೆ ಲೀಗಲ್ ನೋಟಿಸ್ ಕಳಿಸಿದ್ದಾರೆ.

ಕೆಂಗೇರಿ ಜೆಎಸ್​ಎಸ್ ಅಕಾಡೆಮಿ ಆಫ್ ಟೆಕ್ನಿಕಲ್ ಎಜುಕೇಷನ್ ಕಾಲೇಜಿನಲ್ಲಿ ಬಿಇ ಮೊದಲ ಸೆಮಿಸ್ಟರ್ ಓದುತ್ತಿರುವ ತುಮಕೂರಿನ ಪಾವನ ಎಂಬ ವಿದ್ಯಾರ್ಥಿನಿ ಲೀಗಲ್ ನೋಟಿಸ್ ಕಳಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಸರ್ಕಾರಿ ಸಾರಿಗೆ ಸಂಚಾರ ಬಂದ್ ಆಗಿದ್ದು ಇದರಿಂದ ಜನ ಸಾಮಾನ್ಯರು ಪರದಾಡುತ್ತಿದ್ದಾರೆ. ಖಾಸಗಿ ಬಸ್, ಆಟೋ, ಟ್ಯಾಕ್ಸಿಗಳ ಮೊರೆ ಹೋಗುತ್ತಿದ್ದಾರೆ. ಆದ್ರೆ ಮುಷ್ಕರದ ಲಾಭ ಪಡೆದು ಖಾಸಗಿ ಬಸ್​ಗಳು, ಆಟೋ ಚಾಲಕರು ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗುತ್ತಿದ್ದು ಇದರ ವಿರುದ್ಧ ಧ್ವನಿ ಎತ್ತಿ ವಿದ್ಯಾರ್ಥಿನಿಯೊಬ್ಬರು ನೋಟಿಸ್ ಕಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾ ವಾರಿಯರ್ಸ್ ಗೆ ಸಿಗದ ಸಂಬಳ!

ಕೊರೊನಾ ವಿರುದ್ಧ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹೋರಾಡುತ್ತಿದ್ದಾರೆ. ಆದರೆ, ಇವರ ಸಂಬಳಕ್ಕೆ ಕತ್ತರಿ ಹಾಕಿರುವುದು ಬೆಳಕಿಗೆ ಬಂದಿದೆ.

Все возможности мобильного беттинга через MostBet mobile

Все возможности мобильного беттинга через MostBet mobile Где получить промокод на Мостбет…

ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಿರುವ ಕಾಂಗ್ರೆಸ್ : ಬಿಜೆಪಿ ಟೀಕೆ

ಕಾಂಗ್ರೆಸ್ ಪಕ್ಷ ತಮ್ಮ ತಪ್ಪುಗಳನ್ನು ಸಮರ್ಥಿಸುವುದೇ ತನ್ನ ಸಿದ್ದಾಂತ ಎಂದುಕೊಂಡಿದೆ ಎಂದು ಬಿಜೆಪಿ ತಮ್ಮ ಟ್ವೀಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಟೀಕಿಸಿದೆ.

ದೇವಸ್ಥಾನ ಆರಂಭದ ಬಗ್ಗೆ ಮುಜರಾಯಿ ಸಚಿವರು ಹೇಳಿದ್ದೇನು..?

ಉಡುಪಿ: ನಾಳೆ ಮುಜರಾಯಿ ದೇವಸ್ಥಾನಗಳು ಓಪನ್ ಆಗಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಸೋಮವಾರದಿಂದ ದೇವಸ್ಥಾನ ತೆರೆಯಲು ನಿರ್ಧರಿಸಲಾಗಿತ್ತು. ನಮ್ಮ ಬೇಡಿಕೆಗೆ ಕೇಂದ್ರದ ಸಹಮತದ ನಿರೀಕ್ಷೆ ಇತ್ತು.