ಹುಬ್ಬಳ್ಳಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಮುಂದೂಡುವುದರಿಂದ ಯಾವುದೇ ಪ್ರಯೋಜನವಿಲ್ಲ. ನಿಗದಿಯಾದ ಪರೀಕ್ಷೆಗಳನ್ನು ವೇಳಾಪಟ್ಟಿಯಂತೆ ನಡೆಸಿದರೆ ಮಕ್ಕಳ ಕಲಿಕೆ ಹಾಗೂ ಮುಂದಿನ ವ್ಯಾಸಂಗಕ್ಕೆ ಅನುಕೂಲವಾಗುತ್ತದೆ ಎಂದು ಒತ್ತಾಯಿಸಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?:
ಸಿಬಿಎಸ್‌ಇ ಪಠ್ಯಕ್ರಮ ಹಾಗೂ ಕೇಂದ್ರಿಯ ವಿದ್ಯಾಲಯಗಳಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಎಸ್‌ಎಸ್ಎಲ್‌ಸಿ ಮಕ್ಕಳಿಗೆ ಪರೀಕ್ಷೆ ಮಾಡುವ ಒತ್ತಡ ಏಕೆ ? ಎಂದು ಮಾಧ್ಯಮಗಳಲ್ಲಿ ಚರ್ಚೆ ನಡೆಯುತ್ತಿದೆ. ಇದು ಸರಿಯಾದ ಕ್ರಮವಲ್ಲ. ಪ್ರಮುಖ ಹಂತಗಳ ಪರೀಕ್ಷೆಗಳಿಗೆ ವ್ಯತ್ಯಯ ಉಂಟಾಗಬಾರದು. ಕರ್ನಾಟಕ ಮಾಧ್ಯಮಿಕ ಪರೀಕ್ಷಾ ಮಂಡಳಿಯು 10ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದೆ.

ಕಳೆದ ವರ್ಷದಂತೆ ಈ ವರ್ಷವೂ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಸುವುದು ಸೂಕ್ತ. ಪರೀಕ್ಷೆಗಳನ್ನು ಮುಂದೂಡಿದರೆ ಮಕ್ಕಳು ಕಲಿಕೆಯಿಂದ ದೂರ ಸರಿಯುತ್ತಾರೆ. ಕಲಿಕೆಯ ಬಗ್ಗೆ ಆಸಕ್ತಿಯನ್ನು ಕಳೆದುಕೊಳ್ಳುವಂತಾಗುತ್ತದೆ. ರಾಜ್ಯದಲ್ಲಿ ಎಸ್‌ಎಸ್ಎಲ್‌ಸಿ ಪರೀಕ್ಷೆ ಮುಂದಿನ ಎಲ್ಲಾ ಚಟುವಟಿಕೆಗಳಿಗೆ ಕೇಂದ್ರೀಕೃತವಾಗಿರುತ್ತದೆ. ಪರೀಕ್ಷೆಗಳನ್ನು ಕೋವಿಡ್-19ರ ಎಲ್ಲಾ ಸುರಕ್ಷತಾ ನಿಯಮಾವಳಿಗಳನ್ನು ಪಾಲಿಸಿ ನಡೆಸುವಂತಾಗಬೇಕು.

ಸರ್ಕಾರ ಈ ನಿಟ್ಟಿನಲ್ಲಿ ಮಕ್ಕಳನ್ನು ಸಂರಕ್ಷಿಸಲು ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಖಾಸಗಿ ಸಂಸ್ಥೆಗಳ ಆಡಳಿತ ಮಂಡಳಿಗಳಿಗೆ ಸುರಕ್ಷತಾ ಕ್ರಮ ಜಾರಿಗೊಳಿಸುವ ಬಗ್ಗೆ ಸೂಕ್ತ ತರಬೇತಿ ನೀಡಬೇಕು. ಈ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ಸಚಿವರು ನಿರ್ಧಾರ ತೆಗೆದುಕೊಂಡು ನಿಯಮಗಳ ಪ್ರಕಾರ ಪರೀಕ್ಷೆ ನಡೆಸಬೇಕು. ಮಕ್ಕಳ ಹಿತದೃಷ್ಟಿಯಿಂದ ಚಿಂತನೆ ಮಾಡುವುದು ನಮ್ಮ ನಿಮ್ಮೆಲ್ಲರ ಸಾಮಾಜಿಕ ಹೊಣೆ ಹಾಗೂ ಜವಾಬ್ದಾರಿಯಾಗಿರುತ್ತದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ನಕಾರಾತ್ಮಕ ಆಲೋಚನೆಗಳಿಗೆ ಮಣಿಯದೇ, ನಿಯಮಾನುಸಾರ ನಿಗದಿಯಂತೆ ಪರೀಕ್ಷೆ ನಡೆಸಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ 44 ಪ್ರಕರಣ: ಯಾವ ಊರಲ್ಲಿ ಎಷ್ಟು?

ಗದಗ : ಜಿಲ್ಲೆಯಲ್ಲಿ ಇಂದು 44 ಪ್ರಕರಣಗಳು ದಾಖಲಾಗುವ ಮೂಲಕ ಸೋಂಕು ಏರುಗತಿಯ ನೆಗೆತ ಕಾಣುತ್ತಿರುವುದು…

ಕೋವಿಡ್-19 ಗದಗ ಜಿಲ್ಲೆ : ಪ್ರತಿಬಂಧಿತ ಪ್ರದೇಶಗಳ ಘೋಷಣೆ

ಗದಗ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸೋಂಕು ಸಕಾರಾತ್ಮಕ ಕಂಡುಬ0ದ ಪ್ರದೇಶಗಳನ್ನು ಪ್ರತಿಬಂಧಿತÀ ಪ್ರದೇಶಗಳನ್ನಾಗಿ ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರು ಘೋಷಿಸಿದ್ದಾರೆ.

ಯುವ ಕಾಂಗ್ರೆಸ್ ಅಧ್ಯಕ್ಷ ಸರ್ಫರಾಜ್ ಅವರಿಗೆ ಅಭಿನಂದನೆ

ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಸರ್ಫರಾಜ್ ಸೂರಣಗಿಯವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್.ಗಡ್ಡದೇವರಮಠ ಅಭಿನಂದಿಸಿದರು.

ಮುತ್ತಪ್ಪ ರೈ ಗನ್ ಮ್ಯಾನ್ ಗಳನ್ನು ಬಂಧಿಸಿದ್ದೇಕೆ?

ಬೆಂಗಳೂರು: ಮಾಜಿ ಡಾನ್, ಉದ್ಯಮಿ ಮುತ್ತಪ್ಪ ರೈ ಅಂತ್ಯ ಸಂಸ್ಕಾರವು ಅವರ ನಿವಾಸ ಬಿಡದಿಯ ತೋಟದಲ್ಲಿ…