ಬೆಂಗಳೂರು: ಕೊರೊನಾ ಎರಡನೇ ಅಲೆ ಹಿನ್ನೆಲೆ ಶುಕ್ರವಾರ ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು. ಇನ್ನು ಈ ಸಭೆಯಲ್ಲಿ ನಡೆದ ಮಹತ್ವದ ಚರ್ಚಿತ ವಿಷಯಗಳ ಮುಖ್ಯಾಂಶೆಗಳು ಇಲ್ಲಿವೆ ನೋಡಿ.

ಸಭೆಯ ಮುಖ್ಯಾಂಶೆಗಳು

  1. ಕಾರ್ಪೋರೇಟ್ ವಲಯದ ಆಸ್ಪತ್ರೆಗಳು ತಮ್ಮ ಹತ್ತಿರದ ಹೋಟೆಲ್ಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಕಡಿಮೆ ರೋಗ ಲಕ್ಷಣಗಳುಳ್ಳ ರೋಗಿಗಳಿಗೆ ನೋಡಿಕೊಳ್ಳಲು ತಾತ್ಕಾಲಿಕ ಆಸ್ಪತ್ರೆಗಳನ್ನು ಆರಂಭಿಸಲು ಕ್ರಮ ವಹಿಸುವುದು.
  2. ಹೆಚ್ಚು ರೋಗ ಲಕ್ಷಣಗಳುಳ್ಳ ಅಗತ್ಯವಿರುವ ರೋಗಿಗಳನ್ನು ಮಾತ್ರ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲು ಕ್ರಮ ವಹಿಸುವುದು.
  3. ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50 ರಷ್ಟು ಹಾಸಿಗೆಗಳನ್ನು ಸರ್ಕಾರದಿಂದ ದಾಖಲಿಸುವ ರೋಗಿಗಳಿಗೆ ಕಾಯ್ದಿರಿಸಲು ಕೂಡಲೇ ಕ್ರಮ ಕೈಗೊಳ್ಳುವುದು.
  4. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 1000 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಕಾಯ್ದಿರಿಸುವುದು.
  5. ಸರ್ಕಾರಿ ಆಸ್ಪತ್ರೆಗಳಲ್ಲಿ 1000 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಕಾಯ್ದಿರಿಸುವುದು.
  6. ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ 5,000 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಕಾಯ್ದಿರಿಸುವುದು.
  7. ಅಗತ್ಯವಿರುವ ರೋಗಿಗಳಿಗೆ ಕೂಡಲೇ ಚಿಕಿತ್ಸೆ ನೀಡಲು ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಒಂದು ಐ.ಪಿ.ಎಸ್ ಮತ್ತು ಐ.ಎ.ಎಸ್ ಅಧಿಕಾರಿಗಳನ್ನು ಹಾಗೂ ಬಿ.ಡಬ್ಲ್ಯೂ.ಎಸ್.ಎಸ್.ಬಿ., ಬೆಸ್ಕಾಂ ಮತ್ತು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸುವುದು.
  8. ಕೊರೋನಾ ವೈರಸ್ನಿಂದ ತೀವ್ರತರವಾಗಿ ಬಳಲುತ್ತಿರುವ ರೋಗಿಗಳಿಗೆ ಮಾತ್ರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು. ಉಳಿದಂತೆ ಕೊರೋನಾ ಲಕ್ಷಣಗಳಿಲ್ಲದ ರೋಗಿಗಳಿಗೂ ತಾತ್ಕಾಲಿಕ ಚಿಕಿತ್ಸಾ ಕೇಂದ್ರಗಳಲ್ಲಿ ಚಿಕಿತ್ಸೆ ನೀಡುವುದು ಹಾಗೂ ಅಗತ್ಯವಿರುವಷ್ಟು ದಿನಗಳು ಮಾತ್ರ ರೋಗಿಗಳನ್ನು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿ ಗುಣಮುಖರಾದ ಕೂಡಲೇ ಆಸ್ಪತ್ರೆಯಿಂದ ಬಿಡುಗಡೆಗೊಳಿಸುವುದು.
  9. ರಾಜ್ಯದಲ್ಲಿ ಸದ್ಯಕ್ಕೆ Remdesivir ಕೊರತೆ ಇರುವುದಿಲ್ಲ. ಆದಾಗ್ಯೂ ಹೆಚ್ಚುವರಿ ಡೋಸ್ಗಳನ್ನು ಖರೀದಿ ಮಾಡಲು ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಅದನ್ನು ಅಂತಿಮಗೊಳಿಸಿ ಹೆಚ್ಚುವರಿ ಡೋಸ್ಗಳನ್ನು ಸಂಗ್ರಹಿಸಲು ಕ್ರಮ ಕೈಗೊಳ್ಳುವುದು.
  10. ಪ್ರಸಕ್ತ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇರುವುದಿಲ್ಲ. ಆದಾಗ್ಯೂ 5,000 ಆಕ್ಸಿಜನ್ ಸಿಲಿಂಡರ್ಗಳ ಬೇಡಿಕೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವುದು.
  11. ಪದೇ ಪದೇ ಆಕ್ಸಿಜನ್ ಸಿಲಿಂಡರ್ಗಳ ಬದಲಾವಣೆ ತಪ್ಪಿಸಲು ಜಂಬೋ ಸಿಲಿಂಡರ್ಗಳನ್ನು ಖರೀದಿಸಲು ಕೂಡಲೇ ಕ್ರಮ ಕೈಗೊಳ್ಳುವುದು.
  12. ಈಗಾಗಲೇ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಿದ್ದು, ಅದೇ ರೀತಿಯಾಗಿ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಟೆಂಡರ್ ಕರೆದಿದ್ದು, ಕೂಡಲೇ ಅದನ್ನು ಅಂತಿಮಗೊಳಿಸಿ ಘಟಕ ಸ್ಥಾಪಿಸಲು ತ್ವರಿತ ಕ್ರಮ ಕೈಗೊಳ್ಳುವುದು.
  13. ವೈದ್ಯರು, ನರ್ಸ್ಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಕೂಡಲೇ ಕ್ರಮ ಕೈಗೊಳ್ಳುವುದು.
  14. ರಾಜ್ಯಾದ್ಯಂತ ಕಾಟ್ಯಾಂಕ್ಟ್ ಟ್ರೇಸಿಂಗ್ ನ್ನು ತ್ವರಿತಗೊಳಿಸುವುದು.
  15. ಹೋಮ್ ಐಸೋಲೇಷನ್ ಇರುವ ರೋಗಿಗಳಿಗೆ ಮುದ್ರೆ ಹಾಕಲು ಕ್ರಮ ಕೈಗೊಳ್ಳುವುದು.
  16. ಪ್ರತಿದಿನ ನಡೆಸುವ ಕೋವಿಡ್ ಟೆಸ್ಟ್ ಪಲಿತಾಂಶವು (ಟೆಸ್ಟ ರಿಪೋರ್ಟ) 24 ಗಂಟೆಯೋಳಗಾಗಿ ತಪ್ಪದೇ ಲಭ್ಯವಾಗುವಂತೆ ಕ್ರಮವಹಿಸಲಾವುದು ಮತ್ತು ಟೆಸ್ಟಿಂಗ್ ಅವಧಿಯನ್ನು ಇನ್ನೂ ಕಡಿಮೆಗೊಳಿಸಲು ಕೂಡಲೇ ಅಗತ್ಯ ಕ್ರಮ ವಹಿಸುವುದು.
  17. ಕಂಟೈನ್ಮೆಂಟ್ ಝೋನ್ಗಳನ್ನು ಮತ್ತು ಮೈಕ್ರೋ ಕಂಟೈನ್ಮೆಂಟ್ ಝೋನ್ಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು.
  18. ಅನಗತ್ಯವಾಗಿ ಜನ ಗುಂಪು ಸೇರುವುದನ್ನು ತಡೆಗಟ್ಟಲು ಎಲ್ಲಾ ಕ್ರಮ ಕೈಗೊಳ್ಳುವುದು.
  19. ಬೇಡಿಕೆಗನುಗುಣವಾಗಿ ಉಚಿತವಾಗಿ 108 ಸೇರಿದಂತೆ ಅಗತ್ಯ ಆಂಬುಲೆನ್ಸ್ ಗಳನ್ನು ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಕೆಂದ್ರಗಳಲ್ಲೂ ಲಭ್ಯವಿರುವಂತೆ ನೋಡಿಕೊಳ್ಳುವುದು.
  20. ಬೆಂಗಳೂರು ನಗರದಲ್ಲಿ ಒಟ್ಟಾರೆಯಾಗಿ 400 ಆಂಬ್ಯೂಲೆನ್ಸ್ ಗಳನ್ನು ಕೋವಿಡ್ ರೋಗಿಗಳಿಗೋಸ್ಕರ ಉಚಿತವಾಗಿ ಸೇವೆ ಒದಗಿಸಲು ಮೀಸಲಿರಿಸುವುದು.
  21. ಬೆಂಗಳೂರು ನಗರದಲ್ಲಿ ಕೋವಿಡ್ನಿಂದಾಗಿ ಮೃತಪಟ್ಟ ಶವಗಳ ಸಾಗಿಸಲು 49 ಆಂಬ್ಯೂಲೆನ್ಸ್ಗಳನ್ನು ಉಚಿತವಾಗಿ ಸೇವೆ ಒದಗಿಸಲು ಮೀಸಲಿರಿಸುವುದು.
  22. ಚಿತಾಗಾರಗಳಲ್ಲಿ ಕೋವಿಡ್ನಿಂದಾಗಿ ಮೃತಪಟ್ಟ ಶವಗಳ ಅಂತ್ಯ ಕ್ರಿಯೆಯನ್ನು ಉಚಿತವಾಗಿ ನೆರವೇರಿಸುವುದು.
  23. ಬಿ.ಬಿ.ಎಂ.ಪಿಯು ತನ್ನ ಎಲ್ಲಾ ವಲಯಗಳ ಮತ್ತು ನಿಯಂತ್ರಣ ಕೊಠಡಿಗಳನ್ನು ಸಜ್ಜುಗೊಳಿಸಿ ಕೋವಿಡ್ ರೋಗಿಗಳ ಸಹಾಯಕ್ಕೆ ಸದಾ ಬದ್ಧರಾಗಿರುವಂತೆ ಕ್ರಮ ವಹಿಸುವುದು ಹಾಗೂ ಸಹಾಯವಾಣಿಗಳಿಗೆ ನುರಿತ ವ್ಯಕ್ತಿಗಳನ್ನು ನೇಮಿಸಿ ಸದೃಢಗೊಳಿಸುವುದು.

Leave a Reply

Your email address will not be published. Required fields are marked *

You May Also Like

ಕಲಾ ಕುಂಚದಲ್ಲರಳಿದ ನಿತ್ಯೋತ್ಸವ ಕವಿ

ಧಾರವಾಡದ ಕೆಲಗೇರಿಯ ಕಲಾವಿದ ಮಂಜುನಾಥ ಹಿರೇಮಠ ಅವರ ಕಲಾ ಕುಂಚದಲ್ಲಿ ಅರಳಿದ ನಿತ್ಯೋತ್ಸವ ಕವಿ ಕೆ.ಎಸ್.ನಿಸಾರ ಅಹ್ಮದ್. ನಿತ್ಯೋತ್ಸವ ಕವಿಯ ಚಿತ್ರವನ್ನು ಬಿಡಿಸುವ ಮೂಲಕ ಮಂಜುನಾಥ್ ನಿಸಾರ್ ಅಹ್ಮದ್ ಅವರಿಗೆ ಶೃದ್ಧಾಂಜಲಿ ಸಲ್ಲಿಸಿದರು.

ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಭೆ ಸಮಾರಂಭಗಳನ್ನು ಮುಂದೂಡಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಒಂದು ವಾರದ ಹಿಂದೆ ಧಾರವಾಡ ಎಸ್ ಡಿ ಎಮ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೊರೋನಾ…

ಹೊಳೆ ಇಟಗಿಯಲ್ಲಿ ರಸ್ತೆ ಹುಡುಕಿ ಕೊಡ್ತಿರಾ ಪ್ಲೀಸ್!

ನೀರಿನಿಂದ ತುಂಬಿಕೊಂಡ ಗುಂಡಿಗಳನ್ನು ನೋಡಿದರೆ ಅವು ಪಕ್ಕಾ ಮೀನಿನ ಗುಂಡಿಗಳಂತೆ ಕಾಣುತ್ತವೆ. ಆದ್ರೆ ಅವು ಗುಂಡಿಗಳಲ್ಲ. ಅರೇ ಇದೇನಿದು ಗುಂಡಿಗಳು ಅಂತಿರಾ, ಮತ್ತೆ ಗುಂಡಿಗಳಲ್ಲ ಅಂತಿರಾ ಅಂತ ಕನ್ಫ್ಯೂಸ್ ಆಗಬೇಡಿ ಇದು ಗ್ರಾಮವೊಂದ ರಸ್ತೆಯ ಕಥೆ.

ಶಿಗ್ಲಿಯಲ್ಲಿ ಇನ್ನೂ ಹೋಗಿಲ್ಲ ಕೊರೋನಾ, ಎಚ್ಚರಿಕೆಯಿಂದ ಇರೋಣಾ ಜಾಗೃತಿ

ಶಿಗ್ಲಿ ಗ್ರಾಮದಲ್ಲಿ ಇನ್ನೂ ಹೋಗಿಲ್ಲ ಕರೋನಾ ನಾವು ಎಚ್ಚರ ಇರೋಣ ಎಂಬ ನಾನ್ನುಡಿಯನ್ನು ಹೇಳುತ್ತಾ ಕೊರೊನಾ ಜಾಗೃತಿ ಕಾರ್ಯಕ್ರಮ.