ಗದಗ: ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ಹೆಚ್ಚಾಗುತ್ತಿದ್ದು, ನಿಯಂತ್ರಣ ಕಾರ್ಯ ಅತ್ಯಾವಶ್ಯವಾಗಿದೆ. ವಿಪತ್ತು ನಿರ್ವಹಣೆ ಕಾಯ್ದೆ 2005 ರಲ್ಲಿನ ಸೆಕ್ಷನ್ 24ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಾದ್ಯಂತ ಸಾರ್ವಜನಿಕ ಸಮಾರಂಭ, ಆಚರಣೆಗಳು, ಮನರಂಜನೆ ಕಾರ್ಯಕ್ರಮಗಳಿಗೆ ಜನರ ಒಗ್ಗೂಡುವಿಕೆಗೆ ಕೆಳಕಂಡಂತೆ ನಿಯಂತ್ರಣ ಕ್ರಮಗಳನ್ನು ಸರ್ಕಾರ ಜಾರಿಗೊಳಿಸಿದೆ.

ಮದುವೆ ಸಮಾರಂಭಗಳಿಗೆ ತೆರೆದ ಪ್ರದೇಶಗಳಲ್ಲಿ 200 ಜನರು, ಕಲ್ಯಾಣ ಮಂಟಪ, ಸಭಾಂಗಣಗಳು, ಹಾಲ್‌ಗಳು ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 100 ಜನರು ಮೀರದಂತೆ ಅವಕಾಶ ಕಲ್ಪಿಸಲಾಗಿದೆ. ಜನ್ಮದಿನ ಹಾಗೂ ಇತರೆ ಆಚರಣೆಗಳಿಗೆ ತೆರೆದ ಪ್ರದೇಶಗಳಲ್ಲಿ 50 ಜನರು ಮೀರದಂತೆ ಹಾಗೂ ಸಭಾಂಗಣಗಳು, ಹಾಲ್ ಗಳು ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 25 ಜನರು ಮೀರದಂತೆ ಅವಕಾಶ ಕಲ್ಪಿಸಲಾಗಿದೆ. ನಿಧನ, ಶವ ಸಂಸ್ಕಾರಗಳಿಗೆ ತೆರದ ಪ್ರದೇಶಗಳಲ್ಲಿ 50 ಮೀರದಂತೆ ಹಾಗೂ ಸಭಾಂಗಣಗಳು, ಹಾಲ್‌ಗಳು ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 25 ಜನರು ಮೀರದಂತೆ, ಅಂತ್ಯಕ್ರಿಯೆಗೆ 25 ಜನರು ಮೀರದಂತೆ ಹಾಗೂ ಇತರೆ ಸಮಾರಂಭಗಳಿಗೆ ಹಾಲ್‌ನ ವಿಸ್ತಿರ್ಣಕ್ಕೆ ಅನುಗುಣವಾಗಿ 50 ಜನರು ಮೀರದಂತೆ ಅವಕಾಶ ಕಲ್ಪಿಸಲಾಗಿದೆ. ರಾಜಕೀಯ ಆಚರಣೆಗಳು, ಸಮಾರಂಭಗಳು ತೆರೆದ ಪ್ರದೇಶಗಳಲ್ಲಿ 200 ಜನರು ಮೀರದಂತೆ ಅವಕಾಶ ಕಲ್ಪಿಸಲಾಗಿದೆ.

ಜನರು ಕಡ್ಡಾಯವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಂಬಂಧಿತ ಇಲಾಖೆಗಳು ಹೊರಡಿಸಿರುವ ಪ್ರಮಾಣಿತ ಕಾರ್ಯ ವಿಧಾನವನ್ನು ಕಟ್ಟು ನಿಟ್ಟಾಗಿ ಪಾಲಿಸತಕ್ಕದ್ದು. ಸಭಾಂಗಣ, ಕಲ್ಯಾಣ ಮಂಟಪ, ಸಿನಿಮಾ ಮಂದಿರ, ಹಾಲ್‌ಗಳು ಮತ್ತು ಆಚರಣೆಗಾಗಿ ಜನ ಸೇರುವ ಇತ್ಯಾದಿ ಪ್ರದೇಶಗಳ ಉಸ್ತುವಾರಿ ಹೊಂದಿದವರು ಕಡ್ಡಾಯವಾಗಿ ಸ್ಯಾನಿಟೈಜೇಷನ್ ಕ್ರಮಗಳನ್ನು ಅನುಸರಿಸಬೇಕು. ಸರಕಾರದ ಆದೇಶಗಳನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಜರುಗಿಸಲಾಗುವದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿ ಎಂ.ಸುಂದರೇಶ್ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಶ್ರೀ ಜಗದ್ಗುರು ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದ ನಿಮಿತ್ಯ ತೇರಿನ ಗಾಲಿ ಪೂಜಾ ಕಾರ್ಯಕ್ರಮ

ಉತ್ತರಪ್ರಭ ಗದಗ:ಉತ್ತರ ಕರ್ನಾಟಕದಲ್ಲಿ ಐತಿಹಾಸಿಕ ಮತ್ತು ಪುರಾತನವಾದ ಶ್ರೀ ಜಗದ್ಗುರು ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದ…

ಬೈಕ್ ಖರೀದಿ : ಸಹಾಯಧನಕ್ಕೆ ಅರ್ಜಿ ಆಹ್ವಾನ

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ದಿ ನಿಗಮದಿಂದ ಬೈಕ್ ಖರೀದಿ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ.

ಕೊರೋನಾ ಸೋಂಕಿತರ ಚಿಕಿತ್ಸೆಗೆ ರಾಜ್ಯದಲ್ಲಿ ಆಗುತ್ತಿರುವ ಖರ್ಚುಎಷ್ಟು ಗೊತ್ತಾ?

ಕೊರೋನಾ ಸೋಂಕಿತರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇನ್ನು ಇಡೀ ದೇಶದ ಆರ್ಥಿಕ ಸ್ಥಿತಿ ಅಷ್ಟಕ್ಕಷ್ಟೆ. ಆದರೆ ಒಬ್ಬ ಕೊರೋನಾ ಸೋಂಕಿತರಿಗೆ ರಾಜ್ಯದಲ್ಲಿ ಆಗುತ್ತಿರುವ ಖರ್ಚು ಎಷ್ಟು ಎಂದು ನೋಡುವುದಾದರೆ ನಿಜಕ್ಕೂ ಆಶ್ಚರ್ಯ.

ಹಾನಗಲ್ ಬೈ ಎಲಕ್ಷನ್ ನಲ್ಲಿ ಕಾಂಗ್ರಸ್ ಗೆ ಜಯ

ಹಾನಗಲ್: ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ 7598 ಮತಗಳ ಅಂತರದಿಂದ ಗೆಲುವು.ಅಂತಿಮವಾಗಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ…