ಗದಗ: ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ಹೆಚ್ಚಾಗುತ್ತಿದ್ದು, ನಿಯಂತ್ರಣ ಕಾರ್ಯ ಅತ್ಯಾವಶ್ಯವಾಗಿದೆ. ವಿಪತ್ತು ನಿರ್ವಹಣೆ ಕಾಯ್ದೆ 2005 ರಲ್ಲಿನ ಸೆಕ್ಷನ್ 24ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಾದ್ಯಂತ ಸಾರ್ವಜನಿಕ ಸಮಾರಂಭ, ಆಚರಣೆಗಳು, ಮನರಂಜನೆ ಕಾರ್ಯಕ್ರಮಗಳಿಗೆ ಜನರ ಒಗ್ಗೂಡುವಿಕೆಗೆ ಕೆಳಕಂಡಂತೆ ನಿಯಂತ್ರಣ ಕ್ರಮಗಳನ್ನು ಸರ್ಕಾರ ಜಾರಿಗೊಳಿಸಿದೆ.

ಮದುವೆ ಸಮಾರಂಭಗಳಿಗೆ ತೆರೆದ ಪ್ರದೇಶಗಳಲ್ಲಿ 200 ಜನರು, ಕಲ್ಯಾಣ ಮಂಟಪ, ಸಭಾಂಗಣಗಳು, ಹಾಲ್‌ಗಳು ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 100 ಜನರು ಮೀರದಂತೆ ಅವಕಾಶ ಕಲ್ಪಿಸಲಾಗಿದೆ. ಜನ್ಮದಿನ ಹಾಗೂ ಇತರೆ ಆಚರಣೆಗಳಿಗೆ ತೆರೆದ ಪ್ರದೇಶಗಳಲ್ಲಿ 50 ಜನರು ಮೀರದಂತೆ ಹಾಗೂ ಸಭಾಂಗಣಗಳು, ಹಾಲ್ ಗಳು ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 25 ಜನರು ಮೀರದಂತೆ ಅವಕಾಶ ಕಲ್ಪಿಸಲಾಗಿದೆ. ನಿಧನ, ಶವ ಸಂಸ್ಕಾರಗಳಿಗೆ ತೆರದ ಪ್ರದೇಶಗಳಲ್ಲಿ 50 ಮೀರದಂತೆ ಹಾಗೂ ಸಭಾಂಗಣಗಳು, ಹಾಲ್‌ಗಳು ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 25 ಜನರು ಮೀರದಂತೆ, ಅಂತ್ಯಕ್ರಿಯೆಗೆ 25 ಜನರು ಮೀರದಂತೆ ಹಾಗೂ ಇತರೆ ಸಮಾರಂಭಗಳಿಗೆ ಹಾಲ್‌ನ ವಿಸ್ತಿರ್ಣಕ್ಕೆ ಅನುಗುಣವಾಗಿ 50 ಜನರು ಮೀರದಂತೆ ಅವಕಾಶ ಕಲ್ಪಿಸಲಾಗಿದೆ. ರಾಜಕೀಯ ಆಚರಣೆಗಳು, ಸಮಾರಂಭಗಳು ತೆರೆದ ಪ್ರದೇಶಗಳಲ್ಲಿ 200 ಜನರು ಮೀರದಂತೆ ಅವಕಾಶ ಕಲ್ಪಿಸಲಾಗಿದೆ.

ಜನರು ಕಡ್ಡಾಯವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಂಬಂಧಿತ ಇಲಾಖೆಗಳು ಹೊರಡಿಸಿರುವ ಪ್ರಮಾಣಿತ ಕಾರ್ಯ ವಿಧಾನವನ್ನು ಕಟ್ಟು ನಿಟ್ಟಾಗಿ ಪಾಲಿಸತಕ್ಕದ್ದು. ಸಭಾಂಗಣ, ಕಲ್ಯಾಣ ಮಂಟಪ, ಸಿನಿಮಾ ಮಂದಿರ, ಹಾಲ್‌ಗಳು ಮತ್ತು ಆಚರಣೆಗಾಗಿ ಜನ ಸೇರುವ ಇತ್ಯಾದಿ ಪ್ರದೇಶಗಳ ಉಸ್ತುವಾರಿ ಹೊಂದಿದವರು ಕಡ್ಡಾಯವಾಗಿ ಸ್ಯಾನಿಟೈಜೇಷನ್ ಕ್ರಮಗಳನ್ನು ಅನುಸರಿಸಬೇಕು. ಸರಕಾರದ ಆದೇಶಗಳನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಜರುಗಿಸಲಾಗುವದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿ ಎಂ.ಸುಂದರೇಶ್ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನರೇಗಲ್ಲ: ಲಗೂನಾ ಬ್ರೀಡ್ಜ್ ಕೆಲ್ಸಾ ಮುಗಿಸ್ರಿ: ಕೊಂಕಣಾ ಸುತ್ತಿ ಮೈಲಾರಕ್ ಬರುವಂಗಾಗೈತಿ!

ನಿಗದಿತ ಸಮಯಕ್ಕೆ ಮೇಲ್ಸೆತುವೆ ಕಾಮಗಾರಿ ಮುಕ್ತಾಯವಾಗದ ಕಾರಣ ಗ್ರಾಮಸ್ಥರ ಸ್ಥಿತಿ ಕೊಂಕಣಾ ಸುತ್ತಿ ಮೈಲಾರಕ್ಕೆ ಹೋದ್ರು ಅನ್ನುವಂತಾಗಿದೆ.

ಇಂದು 6 ರಿಂದ 8 ನೇ ತರಗತಿ ಆರಂಭದ ಬಗ್ಗೆ ನಿರ್ಧಾರ

ಆರರಿಂದ ಎಂಟನೇ ತರಗತಿಗಳನ್ನು ಪೂರ್ಣಪ್ರಮಾಣದಲ್ಲಿ ಆರಂಭಿಸಲು ಸರ್ಕಾರ ಚಿಂತನೆ ನಡೆದಿದೆ. ಶಾಲೆ ಪುನಾರಂಭ ಕುರಿತಂತೆ ಇಂದು ಮಹತ್ವದ ಸಭೆ ನಡೆಯಲಿದೆ.

ಆಲಮಟ್ಟಿ ಹಳಕಟ್ಟಿ ಶಾಲೆಯಲ್ಲಿ ಅಮೃತ ಮಹೋತ್ಸವ ಸಂಭ್ರಮ ದೇಶಪ್ರೇಮ ಯುವಜನತೆಯಲ್ಲಿ ಚಿರಾಯುವಾಗಲಿ – ಜಿ.ಎಂ.ಕೋಟ್ಯಾಳ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಜಾತಿ, ಮಥ, ಪಂಥ, ಧರ್ಮಕ್ಕಿಂತ ದೇಶ ದೊಡ್ಡದು. ಆ ಅಭಿಮಾನ,ಗೌರವಯುಳ್ಳ ದೇಶ…

ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡುವಂತೆ ಆಗ್ರಹಿಸಿ ಮನವಿ.

ಉತ್ತರಪ್ರಭ ಸುದ್ದಿ ನರಗುಂದ: ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮಯಕ್ಕೆ ಸರಿಯಾದ ಚಿಕಿತ್ಸೆ ಮತ್ತು ಸಾಮಾನ್ಯ ವ್ಯವಸ್ಥೆಗಳು…