ಬೆಂಗಳೂರು: ಕೊರೊನಾ ಹಿನ್ನೆಲೆ ರಾಜ್ಯದಲ್ಲಿ ನಡೆಯಬೇಕಿದ್ದ ಜಿಲ್ಲಾ ಹಾಗು ತಾಲೂಕು ಪಂಚಾಯತಿ ಚುನಾವಣೆಗಳನ್ನು‌ ಮುಂದೂಡಲು ಗ್ರಾಮೀಣಾಭಿವೃದ್ಧಿ ಇಲಾಖೆ ಚಿಂತನೆ ನಡೆಸಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಅವರು ಈ ಕುರಿತು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಿದ್ಧವಿದೆ. ಆದರೆ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗುತ್ತಿರುವ ಹಿನ್ನೆಲೆ ಸದ್ಯಕ್ಕೆ ಚುನಾವಣೆ ಮುಂದೂಡಲು ಗ್ರಾಮೀಣಾಭಿವೃದ್ಧಿ ಇಲಾಖೆ ತೀರ್ಮಾನಿಸಿದೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ‌ ತೀರ್ಮಾನ ಕೈಗೊಳ್ಳಲಾಗುವುದು. ನಂತರ ಈ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸುತ್ತೇವೆ ಎಂದು ಹೇಳಿದರು.

ಅವಧಿ ಮುಕ್ತಾಯಗೊಳ್ಳುತ್ತಿರುವ ಜಿಪಂ, ತಾಪಂಗಳಿಗೆ ಆಡಳಿತಾಧಿಕಾರಿ ನೇಮಿಸುವ ‌ಕುರಿತು ಯೋಚನೆ ಮಾಡಿದ್ದೇವೆ ಎಂದರು.

Leave a Reply

Your email address will not be published. Required fields are marked *

You May Also Like

ಬೆಟ್ಟದ ಹೂವಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ

ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಇಂದು ಘೊಷಿಸಿದ್ದಾರೆ.ಇಂದು ಅರಮನೆ ಮೈದಾನದಲ್ಲಿ ನಡೆದ ಪುನೀತ್ ನಮನ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಅವರು ಈ ಘೊಷಣೆ ಮಾಡಿದ್ದಾರೆ

ಪಶ್ಚಿಮ ಬಂಗಾಳದಲ್ಲಿ ಜುಲೈ 31ರ ವರೆಗೆ ಲಾಕ್ ಡೌನ್!

ಕೋಲ್ಕತ್ತಾ : ದೇಶದಲ್ಲಿ ಕೊರೊನಾ ಮಹಾಮಾರಿಯ ಅಬ್ಬರ ಹೆಚ್ಚಾಗುತ್ತಿದೆ. ಇದರಿಂದಾಗಿ ಪಶ್ಚಿಮ ಬಂಗಾಳ ಸರ್ಕಾರ ಜುಲೈ…

ನಗರಸಭೆ ಚುನಾವಣೆ: ಕಾಂಗ್ರೆಸ್ ಪಕ್ಷದಿಂದ 35 ವಾರ್ಡಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮ

ಉತ್ತರಪ್ರಭಗದಗ: ಗದಗ-ಬೆಟಗೇರಿ ನಗರಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ 35 ವಾರ್ಡಗಳಿಗೆ  ಅಭ್ಯರ್ಥಿಗಳ ಹೆಸರು ಅಂತಿಮ 35 ವಾರ್ಡಗಳ…

ವಿಧಾನಪರಿಷತ್ ಚುನಾವಣೆಯಲ್ಲಿಯೂ ಜಯಭೇರಿ ಬಾರಿಸಿದ ಬಿಜೆಪಿ!

ಬೆಂಗಳೂರು : ಉಪ ಚುನಾವಣೆಯೊಂದಿಗೆ ವಿಧಾನಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ ಜಯಭೇರಿ ಬಾರಿಸಿದೆ.