ಲಕ್ಷ್ಮೇಶ್ವರ: ಪ್ರತಿಯೊಂದು ಗ್ರಾಮಗಳಲ್ಲಿ ತಾಂಡಾ ಅಭಿವೃದ್ಧಿ ನಿಗಮದಿಂದ ಸಿಸಿ ರಸ್ತೆ, ಸಮುದಾಯ ಭವನ ಸೇರಿದಂತೆ ಅನೇಕ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು ತಾಂಡಾದ ಜನರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಅವರು ತಾಲೂಕಿನ ಉಂಡೇನಹಳ್ಳಿ ಗ್ರಾಮದಲ್ಲಿ ತಾಂಡಾ ಅಭಿವೃದ್ಧಿ ನಿಗಮದಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಪ್ರತಿಯೊಂದು ಗ್ರಾಮಗಳು ಅಭಿವೃದ್ಧಿ ಹೊಂದಬೇಕು ಎನ್ನುವ ಉದ್ದೇಶದಿಂದ ತಾಂಡಾಗಳಲ್ಲಿ ಸಿಸಿ ರಸ್ತೆ ಕಾಮಗಾರಿ, ಚರಂಡಿ ನಿರ್ಮಾಣ, ಸಮುದಾಯ ಭವನಗಳನ್ನು ನಿರ್ಮಿಸಲಾಗುತ್ತಿದೆ. ಈ ಯೋಜನೆಯನ್ನು ತಾಂಡಾದ ಜನರು ಸದುಪಯೋಗ ಪಡಿಸಿಕೊಂಡು ತಾಂಡಾ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಪುಂಡಲೀಕ ಲಮಾಣಿ, ಕಿರಣ ಲಮಾಣಿ, ಸೋಮಣ್ಣ ಲಮಾಣಿ, ಸಂತೋಷ ಲಮಾಣಿ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *

You May Also Like

ಆಸ್ತಿ ಕಲಹ: ಪತ್ನಿ ಎದುರೆ ಪತಿಯ ಹತ್ಯೆ!

ಆಸ್ತಿ ವಿವಾದ ಕೊಲೆಯಲ್ಲಿ ಅಂತ್ಯವಾದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಮೇ. 15ರಂದು ಈ ಕೊಲೆ ನಡೆದಿದ್ದು, ಕೊಲೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಉಮೇಶ್ ಬಾಳಗಿ (39) ಕೊಲೆಯಾದ ವ್ಯಕ್ತಿ. ಚೆನ್ನಬಸಪ್ಪ ಬಾಳಗಿ ಮತ್ತು ಬಸಪ್ಪ ಬಾಳಗಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಡಿಕೆಶಿ ಹೇಳಿಕೆ ಹಾಸ್ಯಾಸ್ಪದವಾಗಿವೆ : ರಾಮದಾಸ್ ಟೀಕೆ

ಲಸಿಕೆಯ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಇಂದು ಲಸಿಕೆಗೋಸ್ಕರ ಬಿಕ್ಷೆ ಬೇಡುತ್ತಿದ್ದೇವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಶಾಸಕ ರಾಮದಾಸ್ ಡೀಕಿಸಿದ್ದಾರೆ.

ರಾಯಚೂರ ನ್ಯಾಯಾಧೀಶರ ವಜಾಗೊಳಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

ಮುಳಗುಂದ : ಗಣರಾಜ್ಯೋತ್ಸವ ದಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಸಾಂವಿಧಾನಿಕ ಹುದ್ದೆಗೆ ಅಪಮಾನ ಮಾಡಿದ…