ನಾಸಿಕ್: ಮಹರಾಷ್ಟçದ ನಾಸಿಕ್‌ನಲ್ಲಿ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಮ್ಲಜನಕ ಟ್ಯಾಂಕ್ ಸೋರಿಕೆಯಿಂದ 11 ಜನ ಸಾವನ್ನಪ್ಪಿದ್ದಾರೆ.

 ಆಮ್ಲಜನಕ ಟ್ಯಾಂಕ್ ಸೋರಿಕೆಯ ನಡುವೆ ಸುಮಾರು 11 ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ. ನಾಸಿಕ್‌ನಲ್ಲಿ ವೆಂಟಿಲೇಟರ್ಗಳಲ್ಲಿದ್ದ ಕೋವಿಡ್-19 ರೋಗಿಗಳು ಆಮ್ಲಜನಕದ ಲಭ್ಯತೆಯ ಕೊರತೆಯಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ಹೇಳಿದರು.

 ಆಸ್ಪತ್ರೆಯ ಹೊರಗೆ ಆಮ್ಲಜನಕ ಟ್ಯಾಂಕ್ ಸೋರಿಕೆಯಾದ ಕಾರಣ ಆ ಪ್ರದೇಶದಾದ್ಯಂತ ಅನಿಲ ಸ್ಫೋಟಗೊಂಡಿತು. ಹಾಗೆಯೇ, ಸೋರಿಕೆಯನ್ನು ತಪ್ಪಿಸಲು ಅಗ್ನಿಶಾಮಕ ದಳದ ತಂಡದವರು ಧಾವಿಸಿದರು.

 ಜಾಕೀರ್ ಹುಸೇನ್ ಆಸ್ಪತ್ರೆಯನ್ನು ನಾಸಿಕ್ ಮುನ್ಸಿಪಲ್ ಕಾರ್ಪೋರೇಶನ್ ನಡೆಸುತ್ತಿದೆ. ವರದಿಗಳ ಪ್ರಕಾರ, ಆಸ್ಪತ್ರೆಗೆ ದಾಖಲಾದ ಸುಮಾರು 171 ಕೋವಿಡ್-19 ರೋಗಿಗಳು ಆಮ್ಲಜನಕದ ಬೆಂಬಲದಲ್ಲಿದ್ದರೆ 67 ಮಂದಿ ಗಂಭೀರವಾಗಿದ್ದಾರೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ವಾಲಿಬಾಲ್ ಪಂದ್ಯಾಟ : ಹಳಕಟ್ಟಿ ಶಾಲೆ ಬಾಲಕಿಯರ ತಂಡ ಸಾಧನೆ

ಆಲಮಟ್ಟಿ : ಸ್ಥಳೀಯ ಎಸ್.ವಿ.ವಿ.ಅಸೋಸಿಯೇಷನ್ ಶಿಕ್ಷಣ ಸಂಸ್ಥೆಯ ಆರ್.ಬಿ.ಪಿ.ಜಿ.ಹಳಕಟ್ಟಿ ಪ್ರೌಢಶಾಲೆಯ ಬಾಲಕಿಯರ ವಾಲಿಬಾಲ್ ತಂಡ  2022-23…

ಸುಳ್ಳು ಹೇಳಿದ್ದು ಭಾರತವೋ ಅಥವಾ ಡೊನಾಲ್ಡ್ ಟ್ರಂಪೋ?

ದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ಮಾತಾಡಿದ್ದೇನೆ. ಅವರು ಒಳ್ಳೆಯ ಮನಃಸ್ಥಿತಿಯಲ್ಲಿಲ್ಲ ಎಂದು ಅಮೆರಿಕ…

ಪ್ಲಾಸ್ಮಾ ಥೆರೆಪಿ ಭರವಸೆ ಹುಸಿಯಾಯಿತೇ?

ಕೊರೊನಾ ಚಿಕಿತ್ಸೆಗೆ ಪ್ಲಾಸ್ಲಾ ಥೆರೆಪಿ ರಾಮಬಾಣ ಎಂದೇ ಎಲ್ಲರೂ ಹೇಳುತ್ತಿದ್ದರು. ಆದರೆ, ಸದ್ಯ ಇದು ಹುಸಿಯಾಗಿದೆ ಎನ್ನಲಾಗುತ್ತಿದೆ.

50 ವರ್ಷ ಮೇಲ್ಪಟ್ಟವರಿಗೂ ಕೋವಿಡ್ ಲಸಿಕೆ: ಹರ್ಷವರ್ಧನ್

ಮಾರ್ಚ್ನಿಂದ 50 ವರ್ಷ ಮೇಲ್ಪಟ್ಟವರಿಗೂ ಕೋವಿಡ್-19 ಲಸಿಕೆ ನೀಡಲು ನಾವು ಸಮರ್ಥರಿದ್ದೇವೆ ಎಂದು ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.