ಬೆಂಗಳೂರು: ಏಪ್ರಿಲ್ 28 ರಿಂದ ಮೇ 18 ರವರೆಗೆ ನಡೆಯಬೇಕಿರುವ 2021 ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯ ಎಲ್ಲಾ ಉಪ ನಿರ್ದೇಶಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಮಾರ್ಗಸೂಚಿ

1, ಪ್ರಾಯೋಗಿಕ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕಾಲೇಜುಗಳಲ್ಲಿಯೇ ನಡೆಸಲು ತೀರ್ಮಾನಿಸಿರುವುದರಿಂದ, ವಿದ್ಯಾರ್ಥಿಗಳಿಗೆ ಈ ಬಗ್ಗೆ ಮಾಹಿತಿ ತಲುಪಿಸಲು ಕ್ರಮ ಕೈಗೊಳ್ಳುವುದು.

2, ಯಾವುದೇ ವಿದ್ಯಾರ್ಥಿ ಪರೀಕ್ಷೆಯಿಂದ ವಂಚಿತರಾದರೆ ಇದಕ್ಕೆ ಪ್ರಾಂಶುಪಾಲರೇ ನೇರ ಹೊಣೆಗಾರರಾಗಿರುತ್ತಾರೆ.

3, ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಯಿಂದ ಕೋವಿಡ್ ರಿಪೋರ್ಟ್ ಪಡೆಯಬಾರದು. ಕಾಲೇಜಿಗೆ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳ ದೇಹದ ಉಷ್ಣತೆ ಪರೀಕ್ಷಿಸಿ ಒಳಗೆ ಪ್ರವೇಶ ನೀಡಬೇಕು.

4, ಪ್ರತಿ ದಿನ ಪರೀಕ್ಷೆ ಮುಗಿದ ನಂತರ ತಮಗೆ ನಿಯೋಜಿಸಿದ ಪರೀಕ್ಷಾ ಕೇಂದ್ರದಲ್ಲಿ ಆನ್ ಲೈನ್ ಮೂಲಕ ಅಂಕಗಳನ್ನು ನಮೂದಿಸಲು ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು.

Leave a Reply

Your email address will not be published. Required fields are marked *

You May Also Like

ಪ್ರಶ್ನೆಪತ್ರಿಕೆ ಲೀಕ್ ಪ್ರಕರಣದಲ್ಲಿ ಮತ್ತೊಬ್ಬ ಸೆರೆ

ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸುವ ಎಪ್‌ಡಿಎ ಹುದ್ದೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ನಿವಾಸಿ ವೆಂಕಟೇಶ್ ಬಂಧಿತ ಆರೋಪಿ. ಈತ ಈಗಾಗಲೇ ಬಂಧಿತನಾಗಿರುವ ಆರೋಪಿ ರಾಚಪ್ಪನ ಚಿಕ್ಕಪ್ಪನ ಮಗನಾಗಿದ್ದಾನೆ.

ನಾಳೆಯಿಂದ 14 ದಿನ ರಾಜ್ಯಾದ್ಯಂತ ಲಾಕ್

ನಾಳೆ ರಾತ್ರಿಯಿಂದಲೇ ರಾಜ್ಯಾದ್ಯಂತ 14 ದಿನಗಳವರೆಗೆ ಲಾಕ್ ಡೌನ್ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

Леон букмекерская контора Викиреальность

Обзор БК «Леон», отзывы клиентов оператора, как вывести выигрыш из БК «Леон»…