ಬೆಂಗಳೂರು: ಏಪ್ರಿಲ್ 28 ರಿಂದ ಮೇ 18 ರವರೆಗೆ ನಡೆಯಬೇಕಿರುವ 2021 ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯ ಎಲ್ಲಾ ಉಪ ನಿರ್ದೇಶಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಮಾರ್ಗಸೂಚಿ

1, ಪ್ರಾಯೋಗಿಕ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕಾಲೇಜುಗಳಲ್ಲಿಯೇ ನಡೆಸಲು ತೀರ್ಮಾನಿಸಿರುವುದರಿಂದ, ವಿದ್ಯಾರ್ಥಿಗಳಿಗೆ ಈ ಬಗ್ಗೆ ಮಾಹಿತಿ ತಲುಪಿಸಲು ಕ್ರಮ ಕೈಗೊಳ್ಳುವುದು.

2, ಯಾವುದೇ ವಿದ್ಯಾರ್ಥಿ ಪರೀಕ್ಷೆಯಿಂದ ವಂಚಿತರಾದರೆ ಇದಕ್ಕೆ ಪ್ರಾಂಶುಪಾಲರೇ ನೇರ ಹೊಣೆಗಾರರಾಗಿರುತ್ತಾರೆ.

3, ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಯಿಂದ ಕೋವಿಡ್ ರಿಪೋರ್ಟ್ ಪಡೆಯಬಾರದು. ಕಾಲೇಜಿಗೆ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳ ದೇಹದ ಉಷ್ಣತೆ ಪರೀಕ್ಷಿಸಿ ಒಳಗೆ ಪ್ರವೇಶ ನೀಡಬೇಕು.

4, ಪ್ರತಿ ದಿನ ಪರೀಕ್ಷೆ ಮುಗಿದ ನಂತರ ತಮಗೆ ನಿಯೋಜಿಸಿದ ಪರೀಕ್ಷಾ ಕೇಂದ್ರದಲ್ಲಿ ಆನ್ ಲೈನ್ ಮೂಲಕ ಅಂಕಗಳನ್ನು ನಮೂದಿಸಲು ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು.

Leave a Reply

Your email address will not be published. Required fields are marked *

You May Also Like

ನಾನು ಎಸ್ಕಾರ್ಟ್ ನಲ್ಲಿ ಓಡಾಡುವುದು ಕೆಲವರಿಗೆ ಬೇಸರ ತಂದಿರಬಹುದು: ಸಚಿವ ಡಾ. ನಾರಾಯಣಗೌಡ

ನಾನು ತಳಮಟ್ಟದಿಂದ ಬಂದವನು. ಯಾರ ಬಗ್ಗೆಯೂ ಲಘುವಾಗಿ ಮಾತಾಡಲ್ಲ. ನಾಗಮಂಗಲ ಶಾಸಕ ಸುರೇಶ್ ಗೌಡ ಅವರ ಬಗ್ಗೆ ನಾನು ಸಿಡಿ ವಿಚಾರ ಏನು ಹೇಳಿಲ್ಲ. ಅವರು ಏಕೆ ಹಾಗೆ ಮಾತಾಡಿದ್ರೊ ನನಗೆ ಗೊತ್ತಿಲ್ಲ.

ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

ಇಂದು ಗದಗನಲ್ಲಿ ನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.

ಪಡಿತರ ಚೀಟಿದಾರರಿಗೆ ರಾಗಿ, ಜೋಳ, ತೊಗರಿ, ಹೆಸರುಕಾಳು ವಿತರಣೆ

ಪಡಿತರ ಚೀಟಿದಾರರಿಗೆ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಇನ್ಮುಂದೆ ರಾಗಿ, ಜೋಳ, ತೊಗರಿ ಹಾಗೂ ಹೆಸರು ಕಾಳುಗಳನ್ನು ಖರೀದಿಸಿ ನ್ಯಾಯಬೆಲೆ ಅಂಗಡಿ ಮೂಲಕ ವಿತರಿಸಲು ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ವಿ. ಕತ್ತಿ ತಿಳಿಸಿದ್ದಾರೆ.

ಕಪ್ಪತ್ತಗುಡ್ಡಕ್ಕೆ ಮತ್ತೆ ಕರಿನೆರಳು..?

ಬೆಂಗಳೂರು: ಕೈಗಾರಿಕಾ ಖಾತೆ ಸಚಿವ ಜಗದೀಶ್ ಶೆಟ್ಟರ್ ಮತ್ತು ಅರಣ್ಯ ಖಾತೆ ಸಚಿವ ಆನಂದ್ ಸಿಂಗ್…