ನಾಳೆಯಿಂದ 14 ದಿನ ರಾಜ್ಯಾದ್ಯಂತ ಲಾಕ್

ಬೆಂಗಳೂರು : ನಾಳೆ ರಾತ್ರಿಯಿಂದಲೇ ರಾಜ್ಯಾದ್ಯಂತ 14 ದಿನಗಳವರೆಗೆ ಲಾಕ್ ಡೌನ್ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬೆಳಗ್ಗೆ 6 ರಿಂದ 10ರ ವರೆಗೆ ಮಾತ್ರವೇ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತದೆ. ನಂತರ ಸಂಪೂರ್ಣ ಬಂದ್ ಮಾಡಲಾಗುತ್ತಿದೆ. ಈ ಕೋವಿಡ್ ಸೋಂಕು ದೊಡ್ಡ ಪ್ರಮಾಣದಲ್ಲಿ ಹರಡುತ್ತಿದೆ. ಮಹಾರಾಷ್ಟ್ರ ಮೀರಿಸಿ, ಬೆಂಗಳೂರು ಸುತ್ತಾ ಮುತ್ತಾ ಹೆಚ್ಚು ಹರಡುತ್ತಿದೆ. ಹೀಗಾಗಿ ಸಚಿವ ಸಂಪುಟ ಸದಸ್ಯರು, ತಜ್ಞರ ಜೊತೆಗೆ ಚರ್ಚಿಸಿ, ಕೆಲವು ನಿರ್ಧಾರಕ್ಕೆ ಬಂದಿದ್ದೇವೆ ಎಂದರು.

ಸರ್ಕಾರಿ ಆಸ್ಪತ್ರೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕೊರೋನಾ ಲಸಿಕೆ ನೀಡಲಾಗುತ್ತದೆ. ಈ ಬಗ್ಗೆ ರೂಪುರೇಷೆಗಳನ್ನು ಆರೋಗ್ಯ ಇಲಾಖೆ ಪ್ರಕಟಿಸಲಿದೆ. ಈ ಕೋವಿಡ್ ತಡೆಯೋದಕ್ಕೆ ಬಿಗಿ ಕ್ರಮವಾಗಿ ನಾಳೆ ರಾತ್ರಿಯಿಂದ 14 ದಿನ ಬಿಗಿ ಕ್ರಮ ಜಾರಿಯಲ್ಲಿರುತ್ತದೆ. ಗಾರ್ಮೆಂಟ್ಸ್ ನೌಕರರನ್ನು ಬಿಟ್ಟು, ಕಟ್ಟಡ ಕಾಮಗಾರಿ, ಕೃಷಿ ಚಟುವಟಿಕೆಗೆ ಯಾವುದೇ ತೊಂದರೆಯಿಲ್ಲ. ವೈದ್ಯಕೀಯ, ಅಗತ್ಯ ಸೇವೆ ಎಂದಿನಂತೆ ಇರಲಿದೆ. ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6ರವೆರೆಗ ಕರ್ಪ್ಯೂ ಮುಂದುವರೆಯಲಿದೆ. ಎಲ್ಲಾ ಜಿಲ್ಲಾಧಿಕಾರಿಗಳು ಈ ಬಗ್ಗೆ ಸೂಕ್ತ ಬಂದೋಬಸ್ತ್ ಮಾಡಲಿದ್ದಾರೆ. ತಾಲೂಕು ಆಡಳಿತ ಕೂಡ ನಿಯಂತ್ರಣ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

Exit mobile version