ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಸತತ ಮಳೆಯಾಗುತ್ತಿದೆ. ಇನ್ನು ಐದು ದಿನಗಳ ಕಾಲ ಇದೇ ಹವಾಮಾನ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ ನಿರೀಕ್ಷಿಸಬಹುದು. ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆಯಲಿದೆ. ಇನ್ನು ಉತ್ತರ ಒಳನಾಡಿನ ಹಲವೆಡೆ ಒಣಹವೆ ಮುಂದುವರೆದಿದ್ದರೂ ಕೆಲವೆಡೆ ಮಳೆ ಸುರಿದಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ, ಮಿಕ್ಕಂತೆ ಒಣಹವೆ ಮುಂದುವರೆಯಲಿದೆ.

ರಾಜ್ಯದ ಮಲೆನಾಡು ಮತ್ತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ಉತ್ತರ ಒಳನಾಡು ಮತ್ತ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಮಳೆ ಸಂಭವಿಸುವ ಸಾಧ್ಯತೆಯಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 16.97 ಮಿ.ಮೀ ಮಳೆ ದಾಖಲಾಗಿದೆ.

ಬೆಂಗಳೂರಿನ ನಗರ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಮಿಂಚಿನೊಂದಿಗೆ ಗುಡುಗು ಸಹಿತ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಉಸ್ತುವಾರಿ ನರ‍್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.

ರ‍್ನಾಟಕ ನೈರ‍್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಕಳೆದ 24 ಗಂಟೆಗಳ ರ‍್ನಾಟಕದ ಮಳೆ ನಕ್ಷೆ ನೀಡಿದ್ದು, ಅತ್ಯಧಿಕ 109.5 ಮಿ.ಮೀ ಬೆಂಗಳೂರು ಪಶ್ಚಿಮ ವಲಯದಲ್ಲಿ ದಾಖಲಾಗಿದೆ.

ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಏಪ್ರಿಲ್ ಮೊದಲ ವಾರದಲ್ಲಿ ಅಧಿಕವಾಗಿದ್ದ ತಾಪಮಾನ ಕಳೆದ ವಾರ ಸ್ವಲ್ಪ ತಗ್ಗಿದೆ.

Leave a Reply

Your email address will not be published. Required fields are marked *

You May Also Like

ಬಾಗಲಕೋಟೆ ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು ಮತ್ತೆ 18 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 155ಕ್ಕೆ ಏರಿಕೆಯಾಗಿದೆ.

ರಾಜ್ಯವನ್ನು ನ್ಯೂಯಾರ್ಕ್, ಇಟಲಿ ದುಸ್ಥಿತಿಗೆ ತರಬೇಡಿ: ಎಚ್.ಕೆ. ಆಕ್ರೋಶ

ಬೆಂಗಳೂರು: ಕರ್ನಾಟಕವನ್ನು ಇಟಲಿ ಅಥವಾ ನ್ಯೂಯಾರ್ಕ್ ಮಾಡಬೇಡಿ. ರಾಜ್ಯದಲ್ಲಿ ಶಂಕಿತರು, ಸೋಂಕಿತರು ವಿಲವಿಲ ಒದ್ದಾಡುವಂತಾಗಿದೆ. ಉತ್ತಮ…

ಗ್ರಾಮ ಪಂಚಾಯತಿಯ ಯುವಕರ ಗಮನಕ್ಕೆ;

ಉತ್ತರಪ್ರಭ ಸುದ್ದಿಗದಗ: 2022-23 ನೇ ಸಾಲಿನಲ್ಲಿ ಪ್ರಪ್ರಥಮವಾಗಿ ಪ್ರತಿ ಗ್ರಾಮ ಪಂಚಾಯತಿಗೆ ಒಂದರ0ತೆ ಸ್ವಾಮಿ ವಿವೇಕಾನಂದ…

ಮಾಗಡಿ : ಗ್ರಾಪಂ ಮಾಜಿ ಸದಸ್ಯರ ಬಣವಿಗೆ ಬೆಂಕಿ..!

ತಾಲೂಕಿನ ಮಾಗಡಿ ಗ್ರಾಪಂ ವ್ಯಾಪ್ತಿಯ ಪರಸಾಪೂರ (ವಾರ್ಡ ನಂ:6) ಗ್ರಾಮದಲ್ಲಿ ಶೇಂಗಾ ಬಣವಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಮಾಜಿ ಗ್ರಾಪಂ ಸದಸ್ಯ ಬಸಪ್ಪ ಬೇರಗಣ್ಣವರ ಸದ್ಯ ನಡೆಯುತ್ತಿರುವ ಚುನಾವಣೆಗೆ ಅವರ ಮಗ‌ನನ್ನು ಕಣಕ್ಕೆ ಇಳಿಸಿದ್ದರು.