ಇಷ್ಟು ದಿನ ಕಣ್ಣೇ ಅದಿರಿಂದ ಹಾಡಿನ ಮೂಲಕ ಕರ್ನಾಟಕ ಜನತೆಯನ್ನು ತಮ್ಮತ್ತ ಸೆಳೆದುಕೊಂಡಿದ್ದ ಮಂಗ್ಲಿ ಈಗ ನಟನೆಯ ಮೂಲಕವೂ ಕನ್ನಡಿಗರಿಗೆ ಹತ್ತಿರ ಆಗಲು ಪ್ರಯತ್ನಿಸುತ್ತಿದ್ದಾರೆ. ಕನ್ನಡದ ಸಿನಿಮಾಗಳಲ್ಲಿ ನಟಿಸುವಂತೆ ಅವರಿಗೆ ಬೇಡಿಕೆ ಬರುತ್ತಿದೆ. ಆ ಪೈಕಿ ಒಂದು ಸಿನಿಮಾವನ್ನು ಅವರು ಒಪ್ಪಿಕೊಂಡಿದ್ದಾರೆ. ಅದು ಶಿವರಾಜ್​ಕುಮಾರ್​ ನಟನೆಯ ಚಿತ್ರ ಎಂಬುದು ವಿಶೇಷ.

ಸ್ಯಾಂಡಲ್​ವುಡ್​ನಲ್ಲಿ ಮಂಗ್ಲಿಗೆ ಇಂಥ ದೊಡ್ಡ ಅವಕಾಶ ಸಿಗುತ್ತಿರುವುದಕ್ಕೆ ಅವರ ಅಭಿಮಾನಿಗಳು ಖುಷಿ ಆಗಿದ್ದಾರೆ. ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್ ಬ್ಯುಸಿ ಆಗಿದ್ದಾರೆ. ಅವರ 124ನೇ ಸಿನಿಮಾಗೆ ತೆಲುಗಿನ ರಾಮ್​ ಧುಲಿಪುಡಿ ನಿರ್ದೇಶನ ಮಾಡಲಿದ್ದಾರೆ. ಬಾಲಶ್ರೀರಾಮ್ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ಶ್ರೀಕಾಂತ್ ಧುಲಿಪುಡಿ, ಸ್ವಾತಿ ವನಪಲ್ಲಿ ಹಾಗೂ ನಾರಾಲ ಶ್ರೀನಿವಾಸ ರೆಡ್ಡಿ ಬಂಡವಾಳ ಹೂಡುತ್ತಿದ್ದಾರೆ. ಇದೇ ಸಿನಿಮಾದಲ್ಲಿ ಗಾಯಕಿ ಮಂಗ್ಲಿ ಕೂಡ ನಟಿಸಲಿದ್ದಾರೆ.

ಈ ಸಿನಿಮಾದಲ್ಲಿ ಮಂಗ್ಲಿಗೆ ಹೊಂದುವಂತಹ ಪಾತ್ರ ಯಾವುದಿರಬಹುದು ಎನ್ನುವ ಕೌತುಕದ ಪ್ರಶ್ನೆ ಈಗ ಅಭಿಮಾನಿಗಳ ಮನದಲ್ಲಿ ಮೂಡಿದೆ. ಅದಕ್ಕೆ ಚಿತ್ರತಂಡ ಇನ್ನೂ ಉತ್ತರ ನೀಡಿಲ್ಲ. ಈ ಚಿತ್ರಕ್ಕೆ ಇನ್ನಷ್ಟೇ ಶೀರ್ಷಿಕೆ ಇಡಬೇಕಿದೆ. ನಾಜರ್, ಸಂಪತ್ ಹಾಗೂ ಸಾಧುಕೋಕಿಲ ಮುಂತಾದವರು ಕೂಡ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಲಿದ್ದಾರೆ.

ರವಿಕುಮಾರ್ ಸನಾ‌ ಅವರ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ನಿರ್ದೇಶನ, ದೀಪು ಎಸ್. ಕುಮಾರ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ, ರವಿ‌ ಸಂತೆಹಕ್ಲು ಕಲಾ ನಿರ್ದೇಶನ ಮಾಡಲಿದ್ದಾರೆ. ಜೂನ್ ಮೊದಲ ವಾರದಲ್ಲಿ ಈ ಚಿತ್ರಕ್ಕೆ ಶೂಟಿಂಗ್​ ಆರಂಭಿಸಲಾಗುವುದು.

Leave a Reply

Your email address will not be published. Required fields are marked *

You May Also Like

‘ಪುಷ್ಪ’ ಜಾತಿ ಬಿರುಗಾಳಿಯಲ್ಲಿ

ಹೈದರಾಬಾದ್: ರಾಜಕೀಯ ಮತ್ತು ಸಿನಿಮಾಗಳನ್ನು  ಅತಿ ಹೆಚ್ಚು ಪೋಸಿಸುವ  ರಾಜ್ಯಗಳಲ್ಲಿ ಆಂಧ್ರ ಪ್ರದೇಶಒಂದಾಗಿದೆ.  ಹಿಂದಿನಿಂದಲೂ ಈ…

ವರ್ಕ್ ಫ್ರಮ್ ಹೋಮ್ ಮಾಡಿದವರ ಪರಿಸ್ಥಿತಿಗೆ ಹೇಗಾಗಿದೆ ಗೊತ್ತಾ?

ನವದೆಹಲಿ : ಕೊರೊನಾ ವೈರಸ್ ನ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಹೇರಲಾಗಿದೆ. ಹೀಗಾಗಿ ಕಂಪನಿ…

ಹಿರಿಯ ಸಾಹಿತಿ, ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ನಿಧನ

ಬೆಂಗಳೂರ: ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ)…

ಹಾಸ್ಯನಟ ಮಿಮಿಕ್ರಿ ರಾಜಗೋಪಾಲ್ ಕಾಲವಶ

ಬೆಂಗಳೂರು: ಕನ್ನಡ, ತಮಿಳು ಮತ್ತಿತರ ಭಾಷೆಗಳ 650ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಾಸ್ಯ ನಟ ಮಿಮಿಕ್ರಿ…