ಗದಗ: ಐಪಿಎಲ್ ಬೆಟ್ಟಿಂಗ್ ಗೆ ಸಂಬಂಧಿಸಿದಂತೆ ಪೊಲೀಸರು 7 ಜನರನ್ನು ಬಂಧಿಸಿದ ಘಟನೆ ಗದಗ ನಗರದಲ್ಲಿ ನಡೆದಿದೆ.

ದೆಹಲಿ ಕ್ಯಾಪಿಟಲ್ಸ್ ಹೈದರಾಬಾದ್ ಸನ್ ರೈಡರ್ಸ್ ನಡುವೆ ನಡೆದ ಐಪಿಎಲ್ ಪಂದ್ಯಕ್ಕೆ ಸಂಬಂಧಿಸಿದಂತೆ ಬೆಟ್ಟಿಂಗ್ ನಡೆಯುತ್ತಿರುವ ಬಗ್ಗೆ ಮಾಹಿತಿ ಆಧಾರದ ಮೇಲೆ ಶಹರ ಠಾಣೆ ಪೊಲೀಸರು ದಾಳಿ ನಡೆಸಿ 7 ಜನರನ್ನು ಬಂಧಿಸಿದ್ದಾರೆ.

ಶ್ರೀನಿವಾಸ್ ಹಬಿಬ, ವಿನಾಯಕ ಬದಿ,ಪ್ರದೀಪ್ ಮೇಘರಾಜ್, ಸನಾವುಲ್ಲಾ ಸವಣೂರು,ಮಧು ಮೆರವಾಡೆ, ಪ್ರಸನ್ನ ಕಬಾಡಿ, ಅಮಿತ್ ಪೂಜಾರಿ ಬಂಧಿತ ಆರೋಪಿಗಳಾಗಿದ್ದಾರೆ. ಪಿಎಸ್ಐ ಪ್ರಕಾಶ್ ನೇತೃತ್ವದ ತಂಡ ಮುಂಡರಗಿ ರಸ್ತೆಯ ಅಂಬೇಡ್ಕರ್ ವೃತ್ತದ ಬಳಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನಕಲಿ ರೆಮ್ಡಿಸಿವರ್ ಮಾರಾಟ : ಓರ್ವ ಸಿಸಿಬಿ ಬಲೆಗೆ

ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಹರಡುತ್ತಿದ್ದು, ಇದೀಗ ಕೆಲವರು ಅದನ್ನೆ ಬಂಡವಾಳವಾಗಿಟ್ಟುಕೊಂಡು ಸೋಂಕಿತರಿಗೆ ನೀಡುವ ರೆಮ್ ಡಿಸಿವರ್ ಚುಚ್ಚುಮದ್ದನ್ನು ನಕಲಿ ಮಾಡಿ ಮಾರಾಟ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದಲ್ಲಿ ಇಂದು ಎಷ್ಟು ಜನರಿಗೆ ಸೋಂಕು ತಗುಲಿದೆ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಇಂದು 3 ಸಾವಿರದ ಗಡಿ ದಾಟಿದೆ. ನಿನ್ನೆಗೆ ಹೋಲಿಕೆ ಮಾಡಿದರೆ, ಇಂದು ಏರಿಕೆ ಕಂಡಿದೆ.

ರಾಜ್ಯದಲ್ಲಿ ಇಂದು 4 ಸಾವಿರ ಗಡಿಯೊಳಗೆ ಬಂದ ಮಹಾಮಾರಿ!

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇಂದು 4 ಸಾವಿರಕ್ಕಿಂತಲೂ ಕಡಿಮೆ ಜನರಲ್ಲಿ ಮಹಾಮಾರಿ ಕಾಣಿಸಿಕೊಂಡಿದೆ.

ಸಾರಿಗೆ ಸಂಸ್ಥೆ ಸಿಬ್ಬಂದಿಗೂ ವಕ್ಕರಿಸಿದ ಸೋಂಕು!

ಕಾರವಾರ: ಬಿಎಂಟಿಸಿ ನೌಕರರಲ್ಲಿ ಇತ್ತೀಚೆಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಸದ್ಯ ಸಾರಿಗೆ ಸಂಸ್ಥೆಯ ನೌಕರಸ್ಥರಿಗೂ ಇದರ…