ಬೆಂಗಳೂರು: ದೇಶ ಕೊರೋನಾ ಸೋಂಕಿನಿಂದ ನಲಗುತ್ತಿದ್ದು, ದೇಶಕ್ಕೆ ಅಗತ್ಯ ನೆರವು ನೀಡುವುದಾಗಿ ಅಮೆರಿಕ ಸರ್ಕಾರ ಪ್ರಕಟಿಸಿದೆ ಎಂದು ಚೆನ್ನೈನಲ್ಲಿರುವ ಅಮೆರಿಕ ಕಾನ್ಸುಲೇಟ್ ಕಚೇರಿಯ ಕನ್ನಡಲ್ಲೂ ಸಂದೇಶ ಪ್ರಕಟಿಸಿದೆ.

ಅಮೆರಿಕದ ಭದ್ರತಾ ಸಲಹೆಗಾರ ಜೇಕ್‌ ಸಲ್ಲಿವಾನ್‌, ಭಾರತದಲ್ಲಿ ಕೋವಿಡ್‌ ಸಾಂಕ್ರಾಮಿಕ ತೀವ್ರವಾಗಿರುವ ಬಗ್ಗೆ ಅಮೆರಿಕ ಕಳಕಳಿ ಹೊಂದಿದೆ. ಸಾಂಕ್ರಾಮಿಕದ ವಿರುದ್ಧ ಹೋರಾಡುವಾಗ ಭಾರತದ ನಮ್ಮ ಸ್ನೇಹಿತರು ಮತ್ತು ಸಹಭಾಗಿಗಳಿಗೆ ಹೆಚ್ಚಿನ ಸಾಮಗ್ರಿಗಳು ಮತ್ತು ಅಗತ್ಯ ಬೆಂಬಲ ನೀಡಲು ಶ್ರಮಿಸುತ್ತಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ. ಅಮೆರಿಕ ಕಾನ್ಸುಲೇಟ್‌ ಕಚೇರಿಯು ಇದನ್ನು ಕನ್ನಡ, ತಮಿಳು ಹಾಗೂ ಮಲಯಾಳಂನಲ್ಲಿ ಪ್ರಕಟಿಸಿದೆ.

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್‌ ಸಹ ಭಾರತದ ಕೋವಿಡ್‌ ಸ್ಥಿತಿಯ ಬಗ್ಗೆ ಟ್ವೀಟಿಸಿದ್ದು, ಕೋವಿಡ್‌ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಭಾರತ ರ‍್ಕಾರದೊಂದಿಗೆ ಕೈಜೋಡಿಸಿ ನಿಕಟ ಬೆಂಬಲ ನೀಡುತ್ತಿದ್ದೇವೆ. ಭಾರತದ ನಾಗರಿಕರು ಮತ್ತು ಆರೋಗ್ಯ ಕ್ಷೇತ್ರದ ಹೋರಾಟಗಾರರಿಗೆ ಹೆಚ್ಚುವರಿ ಬೆಂಬಲವನ್ನು ಕ್ಷಿಪ್ರವಾಗಿ ನಿಯೋಜಿಸುತ್ತೇವೆ’ ಎಂದಿದ್ದಾರೆ.

Leave a Reply

Your email address will not be published. Required fields are marked *

You May Also Like

ವಿಪ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಆಸ್ತಿ ಎಷ್ಟು? : ಮಾಡಿದ ಸಾಲ ಎಷ್ಟು..?

ಬೆಂಗಳೂರು: ವಿಧಾನ ಪರಿಷತ್‍ ಚುನಾವಣೆಗೆ ಸ್ಪರ್ಧಿಸಿರುವ ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರು ರೂ. 1,224…

ವಿದ್ಯಾರ್ಥಿಗಲಿಗೆ ಈ ವರ್ಷ ಸೈಕಲ್ ಸಿಗೋದು ಡೌಟ್!

ರಾಜ್ಯದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಆರ್ಥಿಕ ಬಿಕ್ಕಟ್ಟಿನಿಂದಾಗಿ ರಾಜ್ಯ ಸರ್ಕಾರ ಈ ವರ್ಷ ಸೈಕಲ್ ಖರೀದಿಯನ್ನು ಕೈ ಬಿಡಲು ನಿರ್ಧರಿಸಿದೆ ಎನ್ನಲಾಗಿದೆ.

ಬೆಳಗಾವಿಯಲ್ಲಿ ಮರಾಠಿ ಭಾಷಾ ನಾಮಫಲಕಕ್ಕೆ ಕಪ್ಪು ಮಸಿ

: ಮಹರಾಷ್ಟ್ರದಲ್ಲಿ ಕನ್ನಡ ಭಾಷೆ ನಾಮಫಲಕಕ್ಕೆ ಮಸಿ ಬಳೆದು ಅವಮಾನ ಮಾಡಿದ್ದು ವಿರೋಧಿಸಿ ಕರವೇ (ಶಿವರೇಗೌಡ ಬಣ) ಜಿಲ್ಲಾಧ್ಯಕ್ಷ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಮರಾಠಿ ಭಾಷಾ ನಾಮ ಫಲಕಕ್ಕೆ ಮಸಿ ಬಳೆದು ವಿರೋಧ ವ್ಯಕ್ತಪಡಿಸಿದರು.

ಶೆಟ್ಟಿಕೇರಿ ಕೆರೆ: ಪಾರಂಪರಿಕ ತಾಣವನ್ನಾಗಿಸಲು ಅಗತ್ಯದ ಕ್ರಮ

ಜೀವ ವೈವಿಧ್ಯತೆಯ ಸಂರಕ್ಷಣೆ ಸಂವರ್ಧನೆಯ ಕಾಯ್ದೆಯ ಸಮರ್ಪಕ ಜಾರಿಗಾಗಿ ಜಿ.ಪಂ, ತಾ.ಪಂ ಮೂಲಕ ಸಮಿತಿಗಳನ್ನು ರಚಿಸಿದ್ದು ಈ ಸಮಿತಿಗಳ ಮೂಲಕ ಜಿಲ್ಲೆಯಲ್ಲಿನ ಜೀವ ವೈವಿಧ್ಯತೆಯನ್ನು ಬಲಪಡಿಸುವುದು ಅಗತ್ಯ ಎಂದು ರಾಜ್ಯ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ್ ತಿಳಿಸಿದರು.