ಬೆಂಗಳೂರು: ಜಿಂದಾಲ್ ಕಂಪೆನಿಗೆ ರಾಜ್ಯ ಸರ್ಕಾರ ಸದ್ದಿಲ್ಲದೇ 3677 ಎಕರೆ ಭೂಮಿಯನ್ನು ಮಾರಾಟ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಸಂಬಂಧ ಸರಣಿ ಟ್ವಿಟ್ ಮಾಡಿರುವ ಅವರು, ಬಿಜೆಪಿ ಯುವ ಮೋರ್ಚಾದಿಂದ ವಿಧಾನಸೌಧ ಮುತ್ತಿಗೆ ಯತ್ನ ಹಾಗೂ ಮೈತ್ರಿ ಸರ್ಕಾರದ ಮೇಲೆ ಕಿಕ್‍ಬ್ಯಾಕ್ ಪಡೆದ ಆರೋಪ ಹೊರಿಸಲಾಗಿತ್ತು. ಆದರೆ, ಬಿಜೆಪಿ ಅದೇ ಜಿಂದಾಲ್ ಕಂಪೆನಿಗೆ ಅದೇ ಭೂಮಿಯನ್ನು ಸದ್ದಿಲ್ಲದೆ ಮಾರಾಟ ಮಾಡಿದೆ. ವಿರೋಧಕ್ಕಾಗಿಯೇ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದುಮುಚ್ಚಿ ಮಾಡುವುದು ಬಿಜೆಪಿಯ ಸಂಸ್ಕೃತಿ ಎಂದು ಟೀಕಿಸಿದ್ದಾರೆ.

        ಜಿಂದಾಲ್‍ಗೆ ಭೂಮಿ ನೀಡುವ ವಿಚಾರವಾಗಿ ಅಂದು ಮೈತ್ರಿ ಸರ್ಕಾರದ ಭಾಗವಾಗಿದ್ದುಕೊಂಡೇ ಟೀಕೆ ಮಾಡಿ ದಾಖಲೆ ಪತ್ರಗಳನ್ನು ಬಿಡುಗಡೆ ಮಾಡಿದ್ದ ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರು ಈಗೇನು ಮಾಡುತ್ತಿದ್ದಾರೆ. ಅವರ ದಾಖಲೆ ಪತ್ರಗಳೆಲ್ಲವೂ ಎಲ್ಲಿ ಅಡಗಿಕೊಂಡಿವೆ. ಈಗ ಅವುಗಳನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ಯಾರು ಅಢ್ಡ ಇದ್ದಾರೆ ಎಂಬ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

        ಜಿಂದಾಲ್ ಕಂಪೆನಿಗೆ 3677 ಎಕರೆ ಭೂಮಿ ಮಾರಾಟ ಮಾಡಲು ಬಿಜೆಪಿ ಸರ್ಕಾರದ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆದರೆ, ಎಕರೆವಾರು ಶುದ್ಧ ಕ್ರಯಕ್ಕೆ ನಿಗದಿ ಮಾಡಿದ ಮೊತ್ತವೆಷ್ಟು ಎಂಬ ಪ್ರಶ್ನೆಗೆ ಗೃಹ ಸಚಿವರೇ ಗೊತ್ತಿಲ್ಲ ಎಂಬ ಉತ್ತರ ನೀಡಿದ್ದಾರೆ. ಸ್ವತಃ ಗೃಹ ಸಚಿವರಿಗೇ ಮಾಹಿತಿ ಇಲ್ಲವೆಂದರೆ ಏನು ಅರ್ಥ. ಈ ವಿಚಾರವನ್ನು ನಂಬಲು ಸಾಧ್ಯವೆ ಎಂದು ವ್ಯಂಗ್ಯವಾಡಿದ್ದಾರೆ.

        ಬಿಜೆಪಿ ಸರ್ಕಾರ ಜಿಂದಾಲ್ ಮುಂದೆ ಏಕಾಏಕಿ ಮಂಡಿಯೂರಲು ಒಂದು ಕಾರಣವಿದೆ. ಅದೇನೆಂದು ಯಡಿಯೂರಪ್ಪ ಅವರಿಗೆ ಚೆನ್ನಾಗಿ ಗೊತ್ತಿದೆ. ಅದನ್ನು ಅವರೇ ಬಹಿರಂಗಪಡಿಸಲಿ. ಲೀಸ್ ಕಂ ಸೇಲ್ ಆಧಾರದ ಭೂಮಿಯನ್ನು ಅಂತಿಮವಾಗಿ ಕ್ರಯ ಮಾಡಿಕೊಡಲೇಬೇಕಾದ ಕಾನೂನಿರುವುದು ಬಿಜೆಪಿಗೆ ಈಗಲಾದರೂ ಅರಿವಿಗೆ ಬಂದಿದ್ದರೆ ಸಾಕು. ಇನ್ನಾದರೂ ಬಿಜೆಪಿ ಸಲ್ಲದ ಕಿತಾಪತಿ ಮಾಡದಿರಲಿ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಎಪಿಎಂಸಿ ಕಾಯ್ದೆ ಬದಲಾವಣೆ ಕಳ್ಳ ಸಂತೆಗೆ ಅನುಕೂಲ: ಶಾಸಕ ಎಚ್.ಕೆ.ಪಾಟೀಲ್

ಈಗಾಗಲೇ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಇದಕ್ಕೆ ವಿರೋಧ ಪಕ್ಷ ಹಾಗೂ ರೈತಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

ಆಸ್ಪತ್ರೆ ಮಾಲೀಕರ ಮನೆ ಮೇಲೆ ಐಟಿ ದಾಳಿ

ಇಂದು ಬೆಳ್ಳಂಬೆಳ್ಳಗ್ಗೆಯೇ ಮಂಗಳೂರಲ್ಲಿ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, ಮಂಗಳೂರಿನಲ್ಲಿ ಹೆಸರು ಮಾಡಿರುವ, ಎಜೆ ಶೆಟ್ಟಿ ಆಸ್ಪತ್ರೆ ಹಾಗೂ ಯೆನಪೋಯಾ ಆಸ್ಪತ್ರೆಯ ಮಾಲೀಕರ ಮನೆಯ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಕೋವಿಡ್ ಲಸಿಕೆ 2021ರಲ್ಲಿ ಲಭ್ಯ ದಿಢೀರ್ ನಿರೀಕ್ಷೆ ಬೇಡ: ಡಬ್ಲೂಎಚ್ಒ ತಜ್ಞ

ಕೋವಿಡ್ ಲಸಿಕೆ ತಯಾರಿಸುತ್ತಿರುವ ಎಲ್ಲ ಪ್ರಯೋಗಗಳು ಈಗ ಯಶಸ್ವಿ ಹಾದಿಯಲ್ಲಿವೆ. ಸುರಕ್ಷತೆ ಮತ್ತು ರೋಗ ನಿರೋಧಕತೆ ಸೃಷ್ಟಿಸುವ ದೃಷ್ಟಿಯಲ್ಲಿ ಈ ಪ್ರಯೋಗಗಳು ಫಲ ನೀಡುತ್ತಿವೆ.