ಬೆಂಗಳೂರು: ಜಿಂದಾಲ್ ಕಂಪೆನಿಗೆ ರಾಜ್ಯ ಸರ್ಕಾರ ಸದ್ದಿಲ್ಲದೇ 3677 ಎಕರೆ ಭೂಮಿಯನ್ನು ಮಾರಾಟ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಸಂಬಂಧ ಸರಣಿ ಟ್ವಿಟ್ ಮಾಡಿರುವ ಅವರು, ಬಿಜೆಪಿ ಯುವ ಮೋರ್ಚಾದಿಂದ ವಿಧಾನಸೌಧ ಮುತ್ತಿಗೆ ಯತ್ನ ಹಾಗೂ ಮೈತ್ರಿ ಸರ್ಕಾರದ ಮೇಲೆ ಕಿಕ್‍ಬ್ಯಾಕ್ ಪಡೆದ ಆರೋಪ ಹೊರಿಸಲಾಗಿತ್ತು. ಆದರೆ, ಬಿಜೆಪಿ ಅದೇ ಜಿಂದಾಲ್ ಕಂಪೆನಿಗೆ ಅದೇ ಭೂಮಿಯನ್ನು ಸದ್ದಿಲ್ಲದೆ ಮಾರಾಟ ಮಾಡಿದೆ. ವಿರೋಧಕ್ಕಾಗಿಯೇ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದುಮುಚ್ಚಿ ಮಾಡುವುದು ಬಿಜೆಪಿಯ ಸಂಸ್ಕೃತಿ ಎಂದು ಟೀಕಿಸಿದ್ದಾರೆ.

        ಜಿಂದಾಲ್‍ಗೆ ಭೂಮಿ ನೀಡುವ ವಿಚಾರವಾಗಿ ಅಂದು ಮೈತ್ರಿ ಸರ್ಕಾರದ ಭಾಗವಾಗಿದ್ದುಕೊಂಡೇ ಟೀಕೆ ಮಾಡಿ ದಾಖಲೆ ಪತ್ರಗಳನ್ನು ಬಿಡುಗಡೆ ಮಾಡಿದ್ದ ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರು ಈಗೇನು ಮಾಡುತ್ತಿದ್ದಾರೆ. ಅವರ ದಾಖಲೆ ಪತ್ರಗಳೆಲ್ಲವೂ ಎಲ್ಲಿ ಅಡಗಿಕೊಂಡಿವೆ. ಈಗ ಅವುಗಳನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ಯಾರು ಅಢ್ಡ ಇದ್ದಾರೆ ಎಂಬ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

        ಜಿಂದಾಲ್ ಕಂಪೆನಿಗೆ 3677 ಎಕರೆ ಭೂಮಿ ಮಾರಾಟ ಮಾಡಲು ಬಿಜೆಪಿ ಸರ್ಕಾರದ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆದರೆ, ಎಕರೆವಾರು ಶುದ್ಧ ಕ್ರಯಕ್ಕೆ ನಿಗದಿ ಮಾಡಿದ ಮೊತ್ತವೆಷ್ಟು ಎಂಬ ಪ್ರಶ್ನೆಗೆ ಗೃಹ ಸಚಿವರೇ ಗೊತ್ತಿಲ್ಲ ಎಂಬ ಉತ್ತರ ನೀಡಿದ್ದಾರೆ. ಸ್ವತಃ ಗೃಹ ಸಚಿವರಿಗೇ ಮಾಹಿತಿ ಇಲ್ಲವೆಂದರೆ ಏನು ಅರ್ಥ. ಈ ವಿಚಾರವನ್ನು ನಂಬಲು ಸಾಧ್ಯವೆ ಎಂದು ವ್ಯಂಗ್ಯವಾಡಿದ್ದಾರೆ.

        ಬಿಜೆಪಿ ಸರ್ಕಾರ ಜಿಂದಾಲ್ ಮುಂದೆ ಏಕಾಏಕಿ ಮಂಡಿಯೂರಲು ಒಂದು ಕಾರಣವಿದೆ. ಅದೇನೆಂದು ಯಡಿಯೂರಪ್ಪ ಅವರಿಗೆ ಚೆನ್ನಾಗಿ ಗೊತ್ತಿದೆ. ಅದನ್ನು ಅವರೇ ಬಹಿರಂಗಪಡಿಸಲಿ. ಲೀಸ್ ಕಂ ಸೇಲ್ ಆಧಾರದ ಭೂಮಿಯನ್ನು ಅಂತಿಮವಾಗಿ ಕ್ರಯ ಮಾಡಿಕೊಡಲೇಬೇಕಾದ ಕಾನೂನಿರುವುದು ಬಿಜೆಪಿಗೆ ಈಗಲಾದರೂ ಅರಿವಿಗೆ ಬಂದಿದ್ದರೆ ಸಾಕು. ಇನ್ನಾದರೂ ಬಿಜೆಪಿ ಸಲ್ಲದ ಕಿತಾಪತಿ ಮಾಡದಿರಲಿ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಗಸ್ಟ್ ಮೊದಲ ವಾರ ಎಸ್ಎಸ್ಎಲ್ಸಿ ಫಲಿತಾಂಶ

ಅಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ತಿಳಿಸಿದ್ದಾರೆ. ಸೋಮವಾರ ಬೆಂಗಳೂರಿನ ವಿವಿಧ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ಻ವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯಾದ್ಯಂತ 220 ಕೇಂದ್ರಗಳಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದ್ದು, ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಮುಗಿದಿದೆ ಎಂದರು.

ಸಾರಿಗೆ ನೌಕರರ ಗೊಂದಲಕ್ಕೆ ತೆರೆ ಎಳೆದ ಸಚಿವ ಸವದಿ

ಸಾರಿಗೆ ಇಲಾಖೆ ನೌಕರರನ್ನು ಕೆಲಸದಿಂದ ತೆಗೆದುಹಾಕುವುದಿಲ್ಲ. ಕೆಲವು ನೌಕರರನ್ನು ಕೆಲಸದಿಂದ ತೆಗೆದುಹಾಕಲಾಗುತ್ತದೆ ಎನ್ನುವ ವದಂತಿ ಹಬ್ಬಿದೆ. ಅಂತಹ ಯಾವುದೇ ಪ್ರಸ್ತಾಪ ಇಲ್ಲ.

ವಚನ ಸಾಹಿತ್ಯಕ್ಕೆ ಅಂಟಿದ ರಾಜಾಶ್ರಯ ಕಿತ್ತೆಸೆದ ಶರಣರು

ನಿಡಗುಂದಿ: ವಚನ ಸಾಹಿತ್ಯ ಸೃಷ್ಟಿಸುವಾಗ ಯಾರಿಗೂ ಮಣಿಯದೇ, ಯಾರ ಹಂಗಿನಲ್ಲಿರದೇ, ಅಂಜಿಕೆಯ ಭೀತಿ ಇಲ್ಲದೇ ರಾಜಾಶ್ರಯವನ್ನು…

ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ ಬಿಜೆಪಿ!

ಬೆಂಗಳೂರು : ಉಪ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಮಾತಿನ ಸಮರ ಜೋರಾಗಿದೆ.