ಮೈಸೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಹರಡುತ್ತಿದ್ದು, ಇದೀಗ ಕೆಲವರು ಅದನ್ನೆ ಬಂಡವಾಳವಾಗಿಟ್ಟುಕೊಂಡು ಸೋಂಕಿತರಿಗೆ ನೀಡುವ ರೆಮ್ ಡಿಸಿವರ್ ಚುಚ್ಚುಮದ್ದನ್ನು ನಕಲಿ ಮಾಡಿ ಮಾರಾಟ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಜೆಎಸ್‍ಎಸ್ ಆಸ್ಪತ್ರೆಯ ಸ್ಟಾಫ್‍ನರ್ಸ್ ಆಗಿದ್ದ ಗಿರೀಶ್ (34) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ನಗರದ ನಜರ್‍ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಈ ಪ್ರಕರಣದಲ್ಲಿ ಇದುವರೆಗೂ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಈ ಹಿಂದೆ ಪ್ರಶಾಂತ್, ಮಂಜುನಾಥ್, ಸುಜಯ್‍ನನ್ನು ಬಂಧಿಸಿದ್ದು, ಪೊಲೀಸರು ಇದೀಗ ಗಿರೀಶ್‍ನನ್ನು ಬಲೆಗೆ ಬೀಳಿಸಿಕೊಂಡು ತನಿಖೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ವಸತಿ ನಿಲಯಕ್ಕೆ ಅರ್ಜಿ: ಅವಧಿ ವಿಸ್ತರಣೆ

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗÀಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಲಾಕ್ ಡೌನ್ ವಿಸ್ತರಣೆ ಬಗ್ಗೆ ಗೃಹ ಸಚಿವರು ಹೇಳಿದ್ದೇನು?

ಬೆಂಗಳೂರು: ಇನ್ನು ಲಾಕ್ಡೌನ್ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಪರಿಸ್ಥಿತಿ ನೋಡಿಕೊಂಡು ಈ ಕುರಿತಾಗಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಮಧುಸ್ವಾಮಿ ವರ್ತನೆ ಸರಿಯಲ್ಲ: ಸಿಎಂ ಬಿಎಸ್ವೈ

ಬೆಂಗಳೂರು: ಕಾನೂನು ಸಚಿವ ಜೆ.ಸಿ ಮಧುಸ್ವಾಮಿ ರೈತ ಮಹಿಳೆಗೆ ಅವಾಚ್ಯವಾಗಿ ಮಾತಾಡಿದ್ದು ಸರಿಯಲ್ಲ. ಯಾರೇ ಆಗಲಿ…

1ನೇ ಮತ್ತು 20ನೇ ವಾರ್ಡ ಕಾಂಗ್ರೇಸ್ 31ನೇ ವಾರ್ಡ ಬಿಜೆಪಿ

ಗದಗ ಬೇಟಗೇರಿ:ನಗರ ಸಭೆ 1, 20, 31ನೇ ವಾರ್ಡನ ಮತ ಎಣಿಕೆ ಮುಕ್ತಾಯವಾಗಿದ್ದು , 1ನೇ…