ಅಕ್ಕಿ ಕೊಡಿ ಎಂದಿದ್ದಕ್ಕೆ ಸತ್ತು ಹೋಗು ಎಂದ ಅಹಾರ ಸಚಿವ

ಬೆಂಗಳೂರು : ಪಡಿತರದಲ್ಲಿನ ಅಕ್ಕಿ ಕಡಿತಗೊಳಿಸಿರುವುದನ್ನು ಪ್ರಶ್ನಿಸಿದ್ದ ರೈತ ಸಂಘದ ಕಾರ್ಯಕರ್ತರೊಬ್ಬರಿಗೆ, ಆಹಾರ ಸಚಿವ ಉಮೇಶ್ ಕತ್ತಿ ಸತ್ತು ಹೋಗು ಎಂದು ಹೇಳಿ ಉಡಾಫೆತನ ವರ್ತಿಸಿದ್ದಾರೆ.

ಗದಗ ಜಿಲ್ಲೆಯ ರೈತರ ಸಂಘದ ಕಾರ್ಯಕರ್ತರಾದ ಈಶ್ವರ್ ಎಂಬವರು ಸಚಿವ ಉಮೇಶ್ ಕತ್ತಿಗೆ ಕರೆ ಮಾಡಿ ಪಡಿತರ ವ್ಯವಸ್ಥೆಯಲ್ಲಿ ಅಕ್ಕಿ ಕಡಿತ ಮಾಡಿದ್ದರ ಬಗ್ಗೆ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಸಚಿವರು ಉತ್ತರ ಕರ್ನಾಟಕದಲ್ಲಿ ಅಕ್ಕಿ ಜೊತೆಗೆ ಜೋಳ ಕೊಡುತ್ತೇವೆ. ಲಾಕ್‍ಡೌನ್ ಸಂದರ್ಭದಲ್ಲಿ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ಕೊಡುತ್ತದೆ. ಮೇ ತಿಂಗಳಿನಿAದ ಈ ಅಕ್ಕಿಯನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ರೈತ ನಾನೇನು ಅಲ್ಲಿವರೆಗೂ ಉಪವಾಸ ಇರುವುದಾ, ಸತ್ತೋಗುವುದಾ ಎಂದು ಪ್ರಶ್ನಿಸಿದ್ದಕ್ಕೆ ಉದ್ದಟತನದಿಂದ ಉತ್ತರಿಸಿದ ಸಚಿವರು, ಸತ್ತು ಹೋಗು ಒಳ್ಳೆಯದು ಎಂದು ಹೇಳಿದ್ದಾರೆ.

ಈ ಬಗ್ಗೆ ಸ್ಪಷ್ಟೀಕರಣ ನೀಡಿದ ಅವರು ನಾನು ಅಷ್ಟು ದೊಡ್ಡ ಮನುಷ್ಯ ಅಲ್ಲ. ಏಪ್ರಿಲ್ ತಿಂಗಳಲ್ಲಿ ಬಂದಿದೆ. ಮೇ ತಿಂಗಳಲ್ಲಿ ನೋಡೋಣ ಅಂತ ಹೇಳಿದ್ದೇನೆ. ಆರೂವರೆ ಕೋಟಿ ಜನರಿಗೆ ಉತ್ತರ ಕೊಡುತ್ತಾ ಎಲ್ಲಿ ಹೋಗಲಿ. ಸತ್ತು ಹೋಗಲಾ ಎಂದರೆ ನಾನೇನು ಉತ್ತರಿಸಲಿ ಎಂದು ತನ್ನ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ.

Exit mobile version