ಮೇ.31ರ ವರೆಗ ವಾಹನ ತೆರಿಗೆ ಪಾವತಿ ಅವಧಿ ವಿಸ್ತರಣೆ

ಬೆಂಗಳೂರು: ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸುವ ಅವಧಿಯನ್ನು ಮೇ.31 ವರೆಗೆ ವಿಸ್ತರಿಸಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಕೋವಿಡ್ 2ನೇ ಅಲೆ ಹಿನ್ನೆಲೆಯಲ್ಲಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 4(1) ನಿಯಮಗಳನ್ನು ಸಡಿಲಗೊಳಿಸಿ ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಅನ್ವಯಿಸುವಂತೆ ಈಗಾಗಲೇ ಸರ್ಕಾರದ ಆದೇಶ ಹೊರಡಿಸಲಾಗಿತ್ತು‌. ಆದರೆ, ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ ತೆರಿಗೆ ಅವಧಿ ಮೇ.31 ವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Exit mobile version