ಗದಗ: ಜಿಲ್ಲೆಯಾದ್ಯಂತ ಐದು ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿದಾಗ್ಯೂ ಜಿಲ್ಲೆಯಲ್ಲಿ ನಿಯಮ ಉಲ್ಲಂಘಿಸಿ ರಸ್ತೆಗಿಳಿದ 105 ವಾಹನಗಳನ್ನು ಸೀಜ್ ಮಾಡಿ, ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ 71 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಎಸ್ಪಿ ಯತೀಶ್ ಎನ್ ತಿಳಿಸಿದ್ದಾರೆ.
ಗುರುವಾರ ಒಂದೇ ದಿನ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಓಡಾಡುತ್ತಿದ್ದ 105 ವಾಹನಗಳನ್ನು ಸೀಜ್ ಮಾಡುವ ಮೂಲಕ ಅನಗತ್ಯವಾಗಿ ಓಡಾಡುವವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಗದಗ, ರೋಣ, ಲಕ್ಷ್ಮೇಶ್ವರ, ಶಿರಹಟ್ಟಿ, ಮುಂಡರಗಿ, ನರಗುಂದ, ಗಜೇಂದ್ರಗಡ ಸೇರಿದಂತೆ ಜಿಲ್ಲೆಯ ವಿವಿದೆಡೆ ಆಟೋ, ಬೈಕ್ ಸೇರಿದಂತೆ 105 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಕೊರೊನಾ ಎಡನೇ ಅಲೆ ವ್ಯಾಪಕವಾಗುತ್ತಿದ್ದು ಇದರ ನಿಯಂತ್ರಣ ಕೇವಲ ಸರ್ಕಾರ ಅಥವಾ ಅಧಿಕಾರಿಗಳಿಂದ ಮಾತ್ರ ಸಾಧ್ಯವಿಲ್ಲ. ಸಾರ್ವಜನಿಕರು ಕೂಡ ತಮ್ಮ ಬಗೆಗೆ ಕಾಳಜಿಯನ್ನಿಟ್ಟುಕೊಂಡು ಸರ್ಕಾರದ ಕಾರ್ಯಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಾನವೀಯತೆ ಮೆರೆದ ಸಿ,ಪಿ,ಐ, ವಿಕಾಸ ಲಮಾಣಿ

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಪಟ್ಟಣದ ಲಕ್ಷ್ಮೇಶ್ವರ ದಿಂದ ಗದಗ ಕಡೆ ಹೋಗುವ ರಸ್ತೆಯಲ್ಲಿ ಗೊಜನೂರ ಸಮೀಪ…

ಸಿದ್ದರಾಮಯ್ಯ ಪರದೇಶಿ ಗಿರಾಕಿ:ಬಿ ಶ್ರೀರಾಮಲು

ಉತ್ತರಪ್ರಭ ಸುದ್ದಿ, ಗದಗ: 2018 ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮ್ಮ…

ಸಾಲದ ಭಾದೆ: ರೈತ ಆತ್ಮಹತ್ಯೆ

ಉತ್ತರಪ್ರಭ ಸುದ್ದಿ ಶಿರಹಟ್ಟಿ: ಸಾಲದ ಹೊರೆ ತಾಳಲಾರದೆ ತಾಲೂಕಿನ ಮಾಚೇನಹಳ್ಳಿ ಗ್ರಾಮದ ರೈತನೊಬ್ಬ ನೇಣಿಗೆ ಶರಣಾದ…

ಕಟ್ಟಿಗೆ ಅಡ್ಡೆಗಳಿಂದ ಶಿರಹಟ್ಟಿ ಜನರಿಗೆ ಕೊರೊನಾ ಭಯ..!

ದಿನದಿಂದ ದಿನಕ್ಕೆ ನಿರೀಕ್ಷೆಗೂ ಮೀರಿ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ಮಾತ್ರ ಕಟ್ಟಿಗೆ ಅಡ್ಡೆಗಳು ಯಾವುದೇ ಅಡ್ಡಿ, ಆತಂಕಗಳಿಲ್ಲದೆ ನಡೆಯುತ್ತಿವೆ.