ಗದಗ: ಕೋವಿಡ್-19ರ 2ನೇ ಅಲೆಯ ತೀವ್ರತೆಯ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತಿತರೆ ಚಟುವಟಿಕೆಗಳಿಗೆ ನಿರ್ಬಂಧಗಳನ್ನು ವಿಧಿಸಿರುವುದರಿಂದ ಆಟೋ ರಿಕ್ಷಾ, ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರಿಗೆ ಷರತ್ತಿಗೊಳಪಟ್ಟು 3000 ರೂ.ಗಳ ಪರಿಹಾರ ಧನವನ್ನು ನೀಡಲು ಸರ್ಕಾರ ಆದೇಶಿಸಲಾಗಿದೆ.

Sign of a waiting taxi

ಪರಿಹಾರ ಧನಕ್ಕಾಗಿ ಅರ್ಹರು ಆನ್‌ಲೈನ್‌ನಲ್ಲಿ ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅರ್ಹ ಫಲಾನುಭಾವಿಗಳಿಗೆ ಪರಿಹಾರ ಧನವನ್ನು ಅವರ ಖಾತೆಗೆ ನೇರವಾಗಿ ಡಿ.ಬಿ.ಟಿ. ಮುಖಾಂತರ ವರ್ಗಾಯಿಸಲಾಗುವುದು. ಆಟೋ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರುಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಸಾರಿಗೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಅಂಗನವಾಡಿ ಅಕ್ಕಂದಿರ 3 ತಿಂಗಳ ಸಂಬಳಕ್ಕೂ ಲಾಕ್ಡೌನ್!: ಬೆಂಗಳೂರಿಂದ ಪಾಸ್ ವರ್ಡ್ ತಂದರೆ ಲಾಕ್ ಓಪನ್!

ಖಾಲಿ-ಪೀಲಿ ತಾಂತ್ರಿಕ ನೆಪ ಹೇಳುತ್ತಿರುವ ಅಧಿಕಾರಿಗಳು ತಮ್ಮ ಸೋಮಾರಿತನ, ನಿರ್ಲ್ಯಕ್ಷದ ಕಾರಣದಿಂದ ಮುಂಡರಗಿ ತಾಲೂಕಿನ ಅಂಗನವಾಡಿ ಅಕ್ಕಂದಿರ ಕುಟುಂಬಗಳನ್ನು ಸಂಕಷ್ಟಕ್ಕೆ ದೂಡಿದ್ದಾರೆ.

ಕೊರೊನಾ ನಿಯಂತ್ರಣ ಮಾರ್ಗಸೂಚಿ: ಗದಗ ಡಿಸಿ ಪ್ರಕಟಣೆ

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ಹೆಚ್ಚಾಗುತ್ತಿದ್ದು, ನಿಯಂತ್ರಣ ಕಾರ್ಯ ಅತ್ಯಾವಶ್ಯವಾಗಿದೆ. ವಿಪತ್ತು ನಿರ್ವಹಣೆ ಕಾಯ್ದೆ 2005 ರಲ್ಲಿನ ಸೆಕ್ಷನ್ 24ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಾದ್ಯಂತ ಸಾರ್ವಜನಿಕ ಸಮಾರಂಭ, ಆಚರಣೆಗಳು, ಮನರಂಜನೆ ಕಾರ್ಯಕ್ರಮಗಳಿಗೆ ಜನರ ಒಗ್ಗೂಡುವಿಕೆಗೆ ಕೆಳಕಂಡಂತೆ ನಿಯಂತ್ರಣ ಕ್ರಮಗಳನ್ನು ಸರ್ಕಾರ ಜಾರಿಗೊಳಿಸಿದೆ.

ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ – ಲಕ್ಷಾಂತರ ನಷ್ಟ!

ಬೆಂಗಳೂರು : ನಗರದಲ್ಲಿನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ರೂ. ಲಕ್ಷಾಂತರ ನಷ್ಟವಾಗಿದೆ.

ಗದಗ ಜಿಲ್ಲೆಯಲ್ಲಿ ಮತ್ತೆ ಮೂಡಿವೆ ಬಲ್ದೋಟ ಹೆಜ್ಜೆ.! : ಕಪ್ಪತ್ತಗುಡ್ಡಕ್ಕೆ ಕನ್ನಹಾಕಲು ನಡೆದಿದೆಯಾ ಯತ್ನ..?

ಇನ್ನೇನು ಕಪ್ಪತ್ತಗುಡ್ಡ ಸಂರಕ್ಷಿತ ಅರಣ್ಯ ಪ್ರದೇಶ ಜೊತೆಗೆ ವನ್ಯಧಾಮ ಆಯಿತಲ್ಲ ಬಲ್ದೋಟ ಕಾಟ ತಪ್ಪಿತು ಅಂತ ಗದಗ ಜಿಲ್ಲೆಯ ಪರಿಸರ ಪ್ರೇಮಿಗಳು ಹಾಗೂ ಜೀವಪರ ಮನಸುಗಳು ಕೊಂಚ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದರೆ ಇದೀಗ ಮತ್ತೆ ಜಿಲ್ಲೆಯಲ್ಲಿ ಬಲ್ದೋಟ ಹೆಜ್ಜೆ ಮೂಡಿವೆ.