ನವದೆಹಲಿ: ಈಗಾಗಲೇ ದೇಶದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕಾಗಿರುವ ಹಿನ್ನೆಲೆ ಸಿಬಿಎಸ್ಇ ದ್ವೀತಿಯ ಪಿಯು ಪರೀಕ್ಷೆಗಳನ್ನು ನಡೆಸಬೇಕೋ ಬೇಡವೋ ಎನ್ನುವ ಕುರಿತಾದ ಚರ್ಚೆಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.

ಮೇ.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಪರೀಕ್ಷೆ ನಡೆಸುವುದೇ, ಬೇಡವೇ ಎಂಬ ಬಗ್ಗೆ ತಕ್ಷಣವೇ ನಿರ್ಧಾರ ತೆಗೆದುಕೊಳ್ಳಬಹುದು ಎಂಬ ಆಧಾರದ ಮೇಲೆ ವಿಚಾರಣೆಯನ್ನು ಬರುವ ಸೋಮವಾರಕ್ಕೆ ಮುಂದೂಡಿದೆ.
ಸಿಬಿಎಸ್ಇ ಐಸಿಎಸ್ಇಯ 12ನೇ ತರಗತಿ ಪರೀಕ್ಷೆಗಳನ್ನು ಈ ವರ್ಷ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಪರೀಕ್ಷೆಗಳನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಎ ಎಂ ಖನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರ ನೇತೃತ್ವದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

Leave a Reply

Your email address will not be published. Required fields are marked *

You May Also Like

ಸಿಬಿಎಸ್ ಇ ಪರೀಕ್ಷೆ ಇಲ್ಲ – ಕೇಂದ್ರ ಸ್ಪಷ್ಟನೆ!

ನವದೆಹಲಿ : ಕೊರೊನಾ ಹಿನ್ನೆಲೆಯಲ್ಲಿ ಸಿಬಿಎಸ್ಇ 10ನೇ ತರಗತಿಯ ಪರೀಕ್ಷೆಯನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ಆದೇಶ…

ಪ್ರೌಢ ಶಾಲಾ ಸಹ ಶಿಕ್ಷಕರ ಸಂಘಕ್ಕೆ ಅವಿರೋಧ ಆಯ್ಕೆ;

ಉತ್ತರಪ್ರಭ ಕೊಪ್ಪಳ: ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳನ್ನು  ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ…

ಶಾಸಕ ಶರತ್ ಬಚ್ಚೇಗೌಡ ಕೈ ಸೇರಲು ಮುಹೂರ್ತ ಫಿಕ್ಸ್!

ಪಕ್ಷೇತರರಾಗಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಶಾಸಕ ಶರತ್ ಬಚ್ಚೇಗೌಡ, ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ದಿನಾಂಕ ಫಿಕ್ಸ್ ಆಗಿದೆ. ಇದೇ ತಿಂಗಳ 25ರಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ ಸಿದ್ನಾಳ ವಿಧಿವಶ

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಂಸದ ಎಸ್.ಬಿ.ಸಿದ್ನಾಳ್ (85) ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.