ನವದೆಹಲಿ: ಈಗಾಗಲೇ ದೇಶದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕಾಗಿರುವ ಹಿನ್ನೆಲೆ ಸಿಬಿಎಸ್ಇ ದ್ವೀತಿಯ ಪಿಯು ಪರೀಕ್ಷೆಗಳನ್ನು ನಡೆಸಬೇಕೋ ಬೇಡವೋ ಎನ್ನುವ ಕುರಿತಾದ ಚರ್ಚೆಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.

ಮೇ.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಪರೀಕ್ಷೆ ನಡೆಸುವುದೇ, ಬೇಡವೇ ಎಂಬ ಬಗ್ಗೆ ತಕ್ಷಣವೇ ನಿರ್ಧಾರ ತೆಗೆದುಕೊಳ್ಳಬಹುದು ಎಂಬ ಆಧಾರದ ಮೇಲೆ ವಿಚಾರಣೆಯನ್ನು ಬರುವ ಸೋಮವಾರಕ್ಕೆ ಮುಂದೂಡಿದೆ.
ಸಿಬಿಎಸ್ಇ ಐಸಿಎಸ್ಇಯ 12ನೇ ತರಗತಿ ಪರೀಕ್ಷೆಗಳನ್ನು ಈ ವರ್ಷ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಪರೀಕ್ಷೆಗಳನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಎ ಎಂ ಖನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರ ನೇತೃತ್ವದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

Leave a Reply

Your email address will not be published. Required fields are marked *

You May Also Like

ಕೊರೋನಾ ಯೋಧರಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದು ಏಕೆ?

ಕೊರೋನಾ ಸೋಂಕಿಗೆ ಸಂಬಂಧಿಸಿದಂತೆ ಉತ್ತಮ ಚಿಕಿತ್ಸೆ ಹಾಗೂ ಮರಣ ಪ್ರಮಾಣ ತಗ್ಗಿಸುವಲ್ಲಿ ನಮ್ಮ ಬೆಂಗಳೂರು ನಗರ ಮುಂಚೂಣಿಯಲ್ಲಿದೆ. ಹೀಗಾಗಿ ಈ ಕಾರ್ಯದಲ್ಲಿ ಬಹಳಷ್ಟು ಕಾಳಜಿಯಿಂದ ಸೇವೆ ಸಲ್ಲಿಸಿದ ಕೊರೋನಾ ಯೋಧರ ಇಡೀ ತಂಡಕ್ಕೆ ನನ್ನ ಅಭಿನಂದನೆಗಳು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಸಿದ್ದರಾಮಯ್ಯ ಅವರಿಗೆ ದಮ್ ಇದ್ದಿದ್ರೆ ಚಾಮುಂಡೇಶ್ವರಿಯಲ್ಲಿ ಯಾಕೆ ಗೆಲ್ಲಲಿಲ್ಲ..?: ಸಚಿವ ಈಶ್ವರಪ್ಪ

ಮೈಸೂರು: ಮಾಜಿ ಸಿದ್ದರಾಮಯ್ಯ ಅವರಿಗೆ ದಮ್ ಇದ್ದಿದ್ರೆ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲಬೇಕಿತ್ತು. ಹಾಗಾದ್ರೆ…

ರೈತರು ಬೆಳೆ ಸಮೀಕ್ಷೆ: ಮೊಬೈಲ್ ಆಪ್ ಬಳಸುವ ವಿಧಾನ

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಅಗಸ್ಟ 11 ರಿಂದ ಗದಗ ಜಿಲ್ಲೆಯಾದ್ಯಂತ…

ಸರಳ ಗಣರಾಜ್ಯೋತ್ಸವ ಆಲಮಟ್ಟಿ ಪ್ರವಾಸಿ ತಾಣ ಉತ್ತೇಜನಕ್ಕೆ ಸಂಕಲ್ಪ- ಎಚ್.ಸುರೇಶ್

ಆಲಮಟ್ಟಿ: ಈ ಭಾಗದ ಪ್ರವಾಸಿ ತಾಣವಾಗಿ ಖ್ಯಾತಿ ಪಡೆಯುತ್ತಿರುವ ಆಲಮಟ್ಟಿಯನ್ನು ಇನ್ನಷ್ಟು ಪ್ರವಾಸಿಗರನ್ನು ಇತ್ತ ಆಕಷಿ೯ಸಿ…