ಬೆಂಗಳೂರು: ನಗರದಲ್ಲಿ ಬಾಂಗ್ಲಾದೇಶದ ಯುವತಿಯ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ. ಇನ್ನೂ ಕೆಲವರು ಕೇರಳದಲ್ಲಿದ್ದಾರೆಂಬ ಮಾಹಿತಿಯಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾಂಗ್ ರೇಪ್ ವಿಡಿಯೋ ವೈರಲ್ ಆಗಿತ್ತು, ಕೇಂದ್ರ ಸಚಿವರು ಈ ಬಗ್ಗೆ ಟ್ವೀಟ್ ಮಾಡಿದ್ದರು, ನಮ್ಮ ಪೊಲೀಸರು ಅದನ್ನು ಪತ್ತೆ ಹಚ್ಚಿ ಗ್ಯಾಂಗ್ ನ್ನು ಹಿಡಿದಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು ಸೇರಿ ಐದು ಜನ ಇದ್ದಾರೆ. ಪೂರ್ಣ ಪ್ರಮಾಣದ ತನಿಖೆಯ ಮೇಲೆ ಸತ್ಯಾಂಶ ಹೊರಬರುತ್ತದೆ ಎಂದರು.
ಗ್ಯಾಂಗ್ ರೇಪ್‌ ನಡೆದ ಲೊಕೇಷನ್ ಗೊತ್ತಿರಲಿಲ್ಲ, ವೈರಲ್ ಆದ ಮೂಲ ಹಿಡಿದು ತನಿಖೆ ನಡೆದಾಗ ಬೆಂಗಳೂರೆಂದು ಗೊತ್ತಾಗಿದೆ. ರಾಮಮೂರ್ತಿ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಪೊಲೀಸ್ ಕಮಿಷನರ್ ಅವರೇ ಈ ಪ್ರಕರಣದ ಜಾಲ ಪತ್ತೆ ಹಚ್ಚಲು ನೇತೃತ್ವ ವಹಿಸಿದ್ದರು. ಸದ್ಯ ಆರೋಪಿಗಳನ್ನು ಬಂಧಿಸಲಾಗಿದೆ ಎಂದರು.

Leave a Reply

Your email address will not be published. Required fields are marked *

You May Also Like

ಯಪ್ಪಾ..!, ಗಂಡ ತನ್ನ ಜೊತಿ ಜಗಳಾ ಆಡಂಗಿಲ್ಲಾ ಅಂತ ಡಿವೋರ್ಸ್ ಕೇಳ್ಯಾಳಂತ!

ಗಂಡ-ಹೆಂಡರ ಜಗಳ ಗಂಧ ತೀಡಿದಂಗ ಅಂತಾರ. ಅಷ್ಟ ಯಾಕ, ಗಂಡ-ಹೆಂಡರ ಜಗಳ ಉಂಡು ಮಲಗೋ ತನಕ ಅಂತಾನೂ ಅಂತಾರ. ಆದ್ರ ಗಂಡ ತನ್ನ ಜೊತಿಗೆ ಜಗಳಾನ ಆಡವಲ್ಲಾ, ತನಗ ಭಾಳ್ ಪ್ರೀತಿ ಮಾಡ್ತಾನಾ ಅಂತ ಹೆಣ್ಮಗಳ ಒಬ್ಬಾಕಿ ಕೋರ್ಟ್ ಕಟ್ಟಿ ಹತ್ತಿದ ಕತಿ ಇದು..

ಗದಗ ಜಿ.ಪಂ. ಪ್ರಭಾರ ಅಧ್ಯಕ್ಷರಾಗಿ ಮಲ್ಲವ್ವ ಬಿಚ್ಚೂರ

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಮಲ್ಲವ್ವ ಬಿಚ್ಚೂರು, ಇಂದು ಗದಗ ಜಿಲ್ಲಾ ಪಂಚಾಯತ್ ಪ್ರಭಾರ ಅಧ್ಯಕ್ಷರ ಅಧಿಕಾರ ಸ್ವೀಕರಿಸಿದರು.

ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ಅಲ್ಪಾವಧಿ ಕೃಷಿ ಸಾಲ

ಬೆಂಗಳೂರು: ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ…

ಎಪಿಎಂಸಿ ಚೆಕ್‌ಪೊಸ್ಟ್ ನಲ್ಲಿ ಹಣ ವಸೂಲಿ ದಂಧೆ?

ಎಪಿಎಂಸಿ ಚೆಕ್‌ಪೊಸ್ಟ್ನಲ್ಲಿ ವಾಹನ ತಪಾಸಣೆ ಹೆಸರಿನಲ್ಲಿ ಭಾರಿ ಪ್ರಮಾಣದಲ್ಲಿ ಹಣ ವಸೂಲಿ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.