ಬೆಂಗಳೂರು: ನಗರದಲ್ಲಿ ಬಾಂಗ್ಲಾದೇಶದ ಯುವತಿಯ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ. ಇನ್ನೂ ಕೆಲವರು ಕೇರಳದಲ್ಲಿದ್ದಾರೆಂಬ ಮಾಹಿತಿಯಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾಂಗ್ ರೇಪ್ ವಿಡಿಯೋ ವೈರಲ್ ಆಗಿತ್ತು, ಕೇಂದ್ರ ಸಚಿವರು ಈ ಬಗ್ಗೆ ಟ್ವೀಟ್ ಮಾಡಿದ್ದರು, ನಮ್ಮ ಪೊಲೀಸರು ಅದನ್ನು ಪತ್ತೆ ಹಚ್ಚಿ ಗ್ಯಾಂಗ್ ನ್ನು ಹಿಡಿದಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು ಸೇರಿ ಐದು ಜನ ಇದ್ದಾರೆ. ಪೂರ್ಣ ಪ್ರಮಾಣದ ತನಿಖೆಯ ಮೇಲೆ ಸತ್ಯಾಂಶ ಹೊರಬರುತ್ತದೆ ಎಂದರು.
ಗ್ಯಾಂಗ್ ರೇಪ್‌ ನಡೆದ ಲೊಕೇಷನ್ ಗೊತ್ತಿರಲಿಲ್ಲ, ವೈರಲ್ ಆದ ಮೂಲ ಹಿಡಿದು ತನಿಖೆ ನಡೆದಾಗ ಬೆಂಗಳೂರೆಂದು ಗೊತ್ತಾಗಿದೆ. ರಾಮಮೂರ್ತಿ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಪೊಲೀಸ್ ಕಮಿಷನರ್ ಅವರೇ ಈ ಪ್ರಕರಣದ ಜಾಲ ಪತ್ತೆ ಹಚ್ಚಲು ನೇತೃತ್ವ ವಹಿಸಿದ್ದರು. ಸದ್ಯ ಆರೋಪಿಗಳನ್ನು ಬಂಧಿಸಲಾಗಿದೆ ಎಂದರು.

Leave a Reply

Your email address will not be published. Required fields are marked *

You May Also Like

ಭಾರತದಲ್ಲಿ ಒಂದೇ ದಿನ ಸೋಂಕು ಕಾಣಿಸಿಕೊಂಡಿದ್ದು ಎಷ್ಟು ಜನರಿಗೆ ಗೊತ್ತಾ?

ಭಾರತದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ನಿರೀಕ್ಷೆ ಮೀರಿ ದಾಖಲಾಗುತ್ತಿದೆ. ಭಾನುವಾರ ಒಂದೇ ದಿನ ದೇಶದಲ್ಲಿ 4,296 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 111 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ಗದಗ ಜಿಲ್ಲೆ ಕೊರೋನಾ ಗ್ರಹಣ-2:ಈ ಕರಾಳ 24 ದಿನದ ಸರಾಸರಿ: ದಿನಕ್ಕೆ 11 ಪಾಸಿಟಿವ್, 3 ದಿನಕ್ಕೊಂದು ಸಾವು

ಮಂಗಳವಾರ ಗದಗ ಜಿಲ್ಲೆಯಲ್ಲಿ 9 ಹೊಸ ಕೋರೊನಾ ಪ್ರಕರಣಗಳು ದಾಖಲಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 331ಕ್ಕೆ ಏರಿದೆ. ಸಕ್ರಿಯ ಕೇಸ್ಗಳ ಸಂಖ್ಯೆ 143ಕ್ಕೆ ಏರಿದೆ. ಈ ಹಿಂದಿನ 23 ದಿನಗಳಲ್ಲಿ ಸೋಂಕು ಪ್ರಸರಣದ ತೀವ್ರತೆಯನ್ನು ಶೇಕಡಾವಾರು ಲೆಕ್ಕದಲ್ಲಿ ಸೋಮವಾರ ಪ್ರಕಟಿಸಿದ್ದೆವು.

ಉತ್ತರದಲ್ಲಿ ರಣ ಬಿಸಿಲು….ದಕ್ಷಿಣದಲ್ಲಿ ಭರ್ಜರಿ ಮಳೆ!

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ ರಣ ಬಿಸಿಲು ಮುಂದುವರೆದಿದೆ. ವಿಜಯಪುರ…

ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ: ಪ್ರಧಾನಿ ಮೋದಿ

ನವದೆಹಲಿ: ಭಾರತ – ಚೀನಾ ಗಡಿಯಲ್ಲಿ ಮುಸುಕಿನ ಗುದ್ದಾಟ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ…