ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ : ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ

siddaramaih

ಹುಬ್ಬಳ್ಳಿ: ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ನಿರ್ವಹಣೆಗಾಗಿ ಏನೆಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿತ್ತೋ ಆ ಕೆಲಸ ಸರ್ಕಾರ ಮಾಡಲಿಲ್ಲ. ಈಗಲೂ ಮಾಡಿಕೊಂಡಿಲ್ಲ ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಅವರು ಈ ಕುರಿತು ಹುಬ್ಬಳ್ಳಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ, ಆಕ್ಸಿಜನ್ ಬೆಡ್, ಐಸಿಯು ಬೆಡ್ ಸಿಗ್ತಿಲ್ಲ. ಇದರಿಂದ ಸಾಕಷ್ಟು ಜನ ಸಾವನ್ನಪ್ಪುತ್ತಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಚಾಮರಾಜನಗರದ ಸಾವಿನ ಅಂಕಿ ಸಂಖ್ಯೆಯಲ್ಲಿ ಮೊದಲು ಸುಳ್ಳು ಹೇಳಿದ್ದಾರೆ.
ಸಂಬಂಧ ಪಟ್ಟ ಮಂತ್ರಿ ಏಕೆ ಸುಳ್ಳು ಹೇಳಿದ್ರು? ಎಲ್ಲಾ ಕಡೆ ಸಾವಿನ ಸಂಖ್ಯೆ ಮುಚ್ಚಿಡುತ್ತಿದ್ದಾರೆ ಎಂದು ಸರ್ಕಾರದ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿಯಲ್ಲಿ ಬೀದಿ ಕಾಳಗ ನಡೆಯುತ್ತಿದೆ. ಸಚಿವ ಯೋಗೀಶ್ವರ ಲೂಟಿ ಹೊಡೆಯುವ ಖಾತೆ ಕೇಳ್ತಾ ಇದ್ದಾರಂತೆ, ಇದನ್ನ ಬಿಜೆಪಿ ಶಾಸಕರೇ ಹೇಳ್ತಾ ಇದ್ದಾರೆ. ನಾಯಕತ್ವ ಬದಲಾವಣೆ ನಂತ್ರ ಸರ್ಕಾರ ಪತನವಾಗುವದಿಲ್ಲ. ಮುಖ್ಯಮಂತ್ರಿ ಆಗುವ ಸಮರ್ಥ ವ್ಯಕ್ತಿ ಬಿಜೆಪಿಯಲ್ಲಿ ಯಾರು ಇಲ್ಲ‌ ಎಂದರು.
ದೇಶದಲ್ಲಿಯೇ ರೇಪ್ ಕೇಸ್‌ನಲ್ಲಿ ಆರೋಪಿಯನ್ನು ಬಂಧಿಸದೇ ಇರೋ ಪ್ರಕರಣ ಅಂದ್ರೆ ಅದು ರಮೇಶ್ ಜಾರಕಿಹೊಳಿ ಪ್ರಕರಣ ಎಂದರೆ ತಪ್ಪಾಗಲಿಕ್ಕಿಲ್ಲ. ಒಬ್ಬ ರೋಪಿಯನ್ನು ಗೃಹ ಸಚಿವರು ಭೇಟಿಯಾಗ್ತಾರೆ ಅಂದ್ರೆ ಏನ್ ಅರ್ಥ? ಹೀಗಾಗಿ ಗೃಹ ಸಚಿವ ಬೊಮ್ಮಾಯಿ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

Exit mobile version