ಮುಳಗುಂದ: ಸ್ಥಳೀಯ ಪಟ್ಟಣ ಪಂಚಾಯ್ತಿಯ ಘನತ್ಯಾಜ್ಯ ವೈಜ್ಞಾನಿಕ ನಿರ್ವಹಣೆಗಾಗಿ ಅಳವಡಿಸಿದ್ದ ಎಚ್.ಟಿ.ಪಿ ತಾಡಪತ್ರಿ ಒಂದು ಭಾಗದಲ್ಲಿ ಕತ್ತರಿಸಿ ಕಳ್ಳತನ ಮಾಡಿದ ಘಟನೆ ಗುರುವಾರ ರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ವಿಷಯ ತಿಳಿದು ಸ್ಥಳಕ್ಕೆ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಎಂ.ಎಸ್.ಬೆಂತೂರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಈ ಬಗ್ಗೆ ಮುಳಗುಂದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
