ಲಕ್ಷ್ಮೇಶ್ವರ: ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಒದಗಿಸಬೇಕು ಎನ್ನುವ ಉದ್ದೇಶದಿಂದ ಹಳ್ಳಿಗಳಲ್ಲೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಆರಂಭಿಸಲಾಯಿತು. ಆದರೆ ಸ್ಥಳೀಯ ಮಟ್ಟದಲ್ಲಿ ನಿರ್ವಹಣೆ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಶುದ್ಧ ಕುಡಿಯುವ ನೀರಿನ ಘಟಕ ಇದ್ದೂ ಇಲ್ಲದಂತಾಗಿದೆ.
ತಾಲೂಕಿನ ಆದರಹಳ್ಳಿ ಗ್ರಾಮ ಪಂಚಾಯತಿಯ ಎರಡನೇ ವಾರ್ಡಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇದ್ದು ಇಲ್ಲದಂತಿದೆ. ಸುಮಾರು ನಾಲ್ಕು ವರ್ಷಗಳಿಂದ ಪ್ರಾರಂಭಗೊಂಡಿಲ್ಲ. ಜನರ ಉಪಯೋಗಕ್ಕೆ ಬಾರದ ಹಿನ್ನೆಲೆ ಸಾಕಷ್ಟು ಬಾರಿ ಸಂಬಂಧಿಸಿದವರಿಗೆ ಹೇಳಿದರೂ ಕೂಡ ಪ್ರಯೋಜನವಾಗಿಲ್ಲ ಎನ್ನುವುದು ಸ್ಥಳೀಯರ ಆರೋಪ.
ಸ್ಥಳೀಯ ಗ್ರಾಮ ಪಂಚಾಯತಿ ಜನರಿಗೆ ಮೂಲ ಸೌಕರ್ಯ ಒದಗಿಸಿ ಗ್ರಾಮದ ಜನರನ್ನು ಆರೋಗ್ಯವಂತರನ್ನಾಗಿಸುವುದಾಗಿದೆ. ಗ್ರಾಮೀಣ ಭಾಗದ ಜನರು ಕಡಿಮೆ ವೆಚ್ಚದಲ್ಲಿ ಶುದ್ಧ ಕುಡಿಯುವಂತಾಗಲಿ ಎನ್ನುವ ಕಾರಣಕ್ಕೆ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿದೆ. ಆದರೆ ಸ್ಥಳೀಯ ಆಡಳಿತ ಯಂತ್ರದ ನಿಷ್ಕಾಳಜಿಯಿಂದಾಗಿ ಹಾಗೂ ನಿರ್ವಹಣೆಯ ಕೊರತೆಯಿಂದಾಗಿ ಆದರಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಮಾತ್ರ ದೆ. ಆದರೆ ಶುದ್ಧ ನೀರು ಮಾತ್ರ ಮರೀಚಿಕೆಯಾಗಿದೆ.
ಕುಡಿಯುವ ನೀರಿಗಾಗಿ ಊರಿನ ಸಮೀಪದ ಹಳ್ಳದ ನೀರಿಗೆ ಮೊರೆ ಹೋಗಬೇಕಾದ ಪರಿಸ್ಥಿತಿ ಆದರಹಳ್ಳಿ ಗ್ರಾಮಸ್ಥರಿಗೆ ಬಂದೊದಗಿದೆಯಂತೆ. ಗ್ರಾಮದಲ್ಲಿ ಪ್ಲೋರೈಡ್ ನೀರಿನ ಬಳಕೆಯಿಂದ ಜನರು ವಿವಿಧ ರೀತಿಯ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಜನರ ಆರೋಗ್ಯ ದೃಷ್ಟಿಯಿಂದ ಸರಕಾರ ಸಾವಿರಾರು ಕೋಟಿ ಹಣ ಖರ್ಚು ಮಾಡಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ವಿನಿಯೋಗಿಸಲಾಗುತ್ತಿದೆ. ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸರ್ವ ಸದಸ್ಯರು ಇದಕ್ಕೆ ಇಚ್ಛಾಶಕ್ತಿಯನ್ನು ತೋರದಿರುವುದು ಮುಖ್ಯ ಕಾರಣವಾಗಿದೆ. ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಇಂತಹ ಯೋಜನೆಗಳು ವಿಫಲವಾಗುತ್ತಿವೆ ಎಂಬುದಕ್ಕೆ ಈ ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕವೇ ಸಾಕ್ಷಿ.

ಅಧಿಕಾರಿಗಳ ಲೆಕ್ಕದಲ್ಲಿ ಇಂತಹ ಘಟಕಗಳು ಪ್ರಾರಂಭವಾಗದೆ ಜನೋಪಯೋಗಿಯಾಗದೆ ಹಾಗೆ ಉಳಿದಿವೆ. ಆದರೆ ಒಳಗಿನ ವಾಸ್ತವ ಸ್ಥಿತಿಯೇ ಬೇರೆಯಾಗಿರುತ್ತದೆ ಎನ್ನುವುದು ಸ್ಥಳೀಯರ ಅಸಮಾಧಾನ. ನಾಲ್ಕು ವರ್ಷವಾದರೂ ಇನ್ನೂ ಪ್ರಾರಂಭಗೊಳ್ಳದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಗೊಂಡಿದ್ದರೂ ಯಾಕೆ ಪ್ರಾರಂಭಗೊಂಡಿಲ್ಲ? ಈ ಕುರಿತು ಅಧಿಕಾರಿಗಳನ್ನು ಹಾಗೂ ಅಧ್ಯಕ್ಷರು ಸರ್ವ ಸದಸ್ಯರುಗಳನ್ನು ಕೇಳಿದರೆ ಕೆಲ ತಾಂತ್ರಿಕ ತೊಂದರೆಗಳಿಂದಾಗಿ ವಿಳಂಭವಾಗಿದೆ ಆದಷ್ಟು ಬೇಗ ಪ್ರಾರಂಭಿಸಲಾಗುವುದು ಎಂಬ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಆದರಹಳ್ಳಿ ಗ್ರಾಮದ ಎರಡನೇ ವಾರ್ಡಿನ ಸಾರ್ವಜನಿಕರು ತಮ್ಮ ಸಮಸ್ಯೆಯನ್ನು ವಿವರಿಸಿದರು.

Leave a Reply

Your email address will not be published. Required fields are marked *

You May Also Like

ನರೇಗಲ್ಲ: ವಿದ್ಯುತ್ ನಿಲುಗಡೆ

110/11ಕೆವ್ಹಿ ನರೇಗಲ್ಲ, ವಿದ್ಯುತ್ ವಿತರಣಾ ಉಪ-ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ನವೆಂಬರ್ 10 ರಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 5.30 ಘಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಟೋಲ್ ಗಳಲ್ಲಿ ಶುಲ್ಕ ವಿನಾಯಿತಿಗೆ ಒತ್ತಾಯಿಸಿ ಮನವಿ

ಗದಗ: ರಾಜ್ಯ ಹೆದ್ದಾರಿ 45ರ ಪಾಪನಾಶಿ ಹಾಗೂ ಕೊರ್ಲಹಳ್ಳಿ ಬಳಿಯ ಟೋಲ್ ಪ್ಲಾಜಾಗಳಲ್ಲಿ ಸರಕು ಸಾಗಣೆ…

ಶಾಂತಿಯಿಂದ ಹೋಳಿ ಆಚರಿಸಿ

ಯಾರಿಗೂ ತೊಂದರೆಯಾಗದಂತೆ ಹೋಳಿ ಹಬ್ಬವನ್ನು ಆಚರಿಸಬೇಕು. ಹಬ್ಬದ ನೆಪದಲ್ಲಿ, ಸಾವರ್ಜನಿಕ ಸ್ಥಳಗಳಲ್ಲಿ ಅಶ್ಲೀಲ ಬರಹಗಳನ್ನು ಬರೆಯುವುದು, ಶಾಲಾ ಕಾಲೇಜುಗಳ ಗೋಡೆಗಳಿಗೆ ಬಣ್ಣ ಎರೆಚುವುದು ಕಂಡುಬಂದಲ್ಲಿ ಅಥವಾ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಿದರೆ ಅಂತಹವರ ವಿರುದ್ಧ ಕಠೀಣ ಕ್ರಮ ಕೈಗೊಳ್ಳಲಾಗುವುದು.

ಗದಗ ಜಿಲ್ಲೆಯಲ್ಲಿಂದು 24 ಕೊರೊನಾ ಪಾಸಿಟಿವ್!

ಗದಗ ಜಿಲ್ಲೆಯಲ್ಲಿಂದು ಮತ್ತೆ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜನರನ್ನು ಮತ್ತಷ್ಟು ಆತಂಕಕ್ಕೀಡು ಮಾಡಿದೆ.