ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಷ್ ಅವರ 69ನೇ ಜನ್ಮದಿನ. ಪರಿಸ್ಥಿತಿ ಚೆನ್ನಾಗಿ ಇದ್ದಿದ್ದರೆ ಅಭಿಮಾನಿಗಳು ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸುತ್ತಿದ್ದರು. ಆದರೆ ಕೊವಿಡ್ ಹಾವಳಿ ಹೆಚ್ಚಿರುವುದರಿಂದ ಸೋಶಿಯಲ್ ಮೀಡಿಯಾ ಮೂಲಕವೇ ಶುಭ ಕೋರಲಾಗುತ್ತಿದೆ. ಅಂಬರೀಷ್ ಜೊತೆ ಆಪ್ತ ಒಡನಾಟ ಹೊಂದಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಕಿಚ್ಚ ಸುದೀಪ್ ಅವರು ಕೂಡ ಸಾಮಾಜಿಕ ಜಾಲತಾಣದ ಮೂಲಕ ರೆಬಲ್ ಸ್ಟಾರ್ ಬರ್ತಡೇಗೆ ವಿಶ್ ಮಾಡಿದ್ದಾರೆ.
ಅಂಬರೀಷ್ ಜೊತೆ ಕಾರಿನಲ್ಲಿ ಪ್ರಯಾಣ ಮಾಡುತ್ತಿರುವ ಫೋಟೋವನ್ನು ದರ್ಶನ್ ಹಂಚಿಕೊಂಡಿದ್ದು, ಎಂದಿಗೂ ಮಾಸದ ಅಂಬಿ ಅಪ್ಪಾಜಿಯ ಸವಿನೆನಪು. ಅವರ ಭಾಷಾಭಿಮಾನ, ಖಡಕ್ ಜೀವನ ಶೈಲಿ ಎಲ್ಲರಿಗೂ ಸ್ಫೂರ್ತಿಯಾಗಿರುತ್ತದೆ. ಮತ್ತೊಮ್ಮೆ ಕರುನಾಡಲ್ಲೇ ಹುಟ್ಟಿಬರಲಿ ನಮ್ಮ ನೆಚ್ಚಿನ ಮಂಡ್ಯದ ಗಂಡು’ ಎಂದು ಟ್ವೀಟ್ ಮಾಡಿದ್ದಾರೆ.
ಕಿಚ್ಚ ಸುದೀಪ್ ಕೂಡ ಅಂಬರೀಷ್ ಅವರು ಒಂದಷ್ಟು ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ನಿಮ್ಮನ್ನು ನಿಜಕ್ಕೂ ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ ಮಾಮ ಎಂದು ಶುಭ ಕೋರಿದ್ದಾರೆ.
ಅಂಬರೀಷ್ ಜನ್ಮದಿನದ ಪ್ರಯುಕ್ತ ಸಂಸದೆ ಸುಮಲತಾ ಅಂಬರೀಷ್ ಅವರು ಬೆಳಗ್ಗೆ ಕಂಠೀರವ ಸ್ಟುಡಿಯೋದಲ್ಲಿ ಇರುವ ಅಂಬರೀಷ್ ಸಮಾಧಿಗೆ ಕುಟುಂಬಸ್ಥರ ಜೊತೆ ತೆರಳೀ ಪೂಜೆ ಸಲ್ಲಿಸಿದ್ದಾರೆ.
ಅಂಬರೀಷ್ 69ನೇ ಜನ್ಮದಿನ: ರೆಬೆಲ್ ಸ್ಟಾರ್ ನೆನಪು ಹಂಚಿಕೊಂಡ ದರ್ಶನ್-ಸುದೀಪ್
