ಬೆಂಗಳೂರು: ಕೊರೋನಾ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿಗಳ ತಳ ಮಟ್ಟದ ಸಿಬ್ಬಂದಿಗಳು, ಶಿಕ್ಷಕರು, ಆರೋಗ್ಯ ಇಲಾಖೆ, ಪೊಲೀಸ್, ಕಂದಾಯ, ಸಾರಿಗೆ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗಳು, ಪಶುವೈದ್ಯರು ಮುಂತಾದವರು ನೇರವಾಗಿ ಜನರ ಜೊತೆ ಇದ್ದು ಕೆಲಸ ಮಾಡುತ್ತಿದ್ದಾರೆ. ಇವರುಗಳಿಗೆ ವಿಶೇಷ ರಕ್ಷಣೆ ನೀಡಬೇಕಾದದ್ದು ಸರ್ಕಾರದ ಜವಾಬ್ಧಾರಿ ಎಂದು ಮಾಜಿ ಸಿಎಂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಕುರಿತು ಸಿಎಂ ಬಿಎಸ್ವೈ ಅವರಿಗೆ ಪತ್ರ ಬರೆದು, ಕೊರೋನಾ ವಾರಿಯರ್ಸ್ ಗಳ ಬಾಕಿ ಉಳಿಸಿಕೊಂಡಿರುವ ವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.
ಸರ್ಕಾರ ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿರುವ ಮತ್ತು ಕರ್ತವ್ಯದ ವೇಳೆ ಮರಣ ಹೊಂದಿರುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ಕುಟುಂಬದವರಿಗೆ ಕೂಡಲೇ ಪರಿಹಾರ ನೀಡಬೇಕು. ಆದರೆ ಸರ್ಕಾರ ಇನ್ನೂ ಸಹ ಹಲವು ಇಲಾಖೆಗಳ ಸಿಬ್ಬಂದಿಗಳನ್ನು ಕೊರೋನ ವಾರಿಯರ್ಸ್ ಎಂದು ಘೋಷಣೆ ಮಾಡಿಲ್ಲ. ಈಗಾಗಲೇ ಕೊರೋನಾ ವಾರಿಯರ್ಸ್ ಎಂದು ಘೋಷಿಸಿರುವವರಿಗೆ ಕಳೆದ ಎರಡು ಮೂರು ತಿಂಗಳಿಂದ ಸಂಬಳವನ್ನೂ ನೀಡಿಲ್ಲ. ಜೊತೆಗೆ ಜನರ, ರೋಗಿಗಳ ಸಂಪರ್ಕದಲ್ಲಿರುವ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ, ಸರ್ಕಾರದ ತಳ ಮಟ್ಟದ ಸಿಬ್ಬಂದಿಗಳಿಗೆ ಕೊರೋನಾದಿಂದ ರಕ್ಷಣೆ ಪಡೆಯಲು ನೀಡಬೇಕಾದ ಮಾಸ್ಕ್, ಸ್ಯಾನಿಟೈಸರ್, ಕೈಗವಸು ಮುಂತಾದ ಮೂಲಭೂತವಾದ ಸಾಮಗ್ರಿಗಳನ್ನೂ ನೀಡಿಲ್ಲ. ಕೊರೋನಾ ವಾರಿಯರ್ಸ್ ಎಂದು ಘೋಷಣೆ ಮಾಡಲಾದವರಲ್ಲಿ ಕೆಲವರು ಮರಣ ಹೊಂದಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರಲ್ಲಿ ಸುಮಾರು ಜನ ಕೊರೋನಾಕ್ಕೆ ತುತ್ತಾಗಿ ಮರಣ ಹೊಂದಿದ್ದಾರೆ. ಆದರೆ ಅವರಲ್ಲಿ ಪರಿಹಾರ ಸಿಕ್ಕಿರುವುದು ಕೇವಲ ಮೂರು ಜನರ ಕುಟುಂಬಗಳಿಗೆ ಮಾತ್ರ. ಎಲ್ಲ ಇಲಾಖೆಗಳಲ್ಲೂ ಇದೇ ರೀತಿಯ ಪರಿಸ್ಥಿತಿ ಇದೆ. ಜೀವವನ್ನು ಪಣಕ್ಕೊಡ್ಡಿ ಕೆಲಸ ಮಾಡುತ್ತಿರುವ ಇವರೆಲ್ಲರನ್ನು ಸರ್ಕಾರ ನಡೆಸಿಕೊಳ್ಳುತ್ತಿರುವ ರೀತಿ ಅತ್ಯಂತ ಅಮಾನವೀಯವಾಗಿದೆ. ದೇಶದ ರಾಜ್ಯಗಳಲ್ಲೆ ಆರ್ಥಿಕ ಸ್ಥಿತಿಯಲ್ಲಿ ಮೊದಲೆರಡು ಸ್ಥಾನಗಳಲ್ಲೇ ಇರುವ ಕರ್ನಾಟಕದಲ್ಲಿ ಕನಿಷ್ಠ ಮಾಸ್ಕು, ಸ್ಯಾನಿಟೈಸರ್ ನೀಡುವಷ್ಟು ಹೃದಯವಂತಿಕೆ, ಕರ್ತವ್ಯ ಪ್ರಜ್ಞೆ, ಉದಾರತೆಗಳನ್ನು ಆಡಳಿತ ನಡೆಸುವ ಸರ್ಕಾರ ಕಳೆದುಕೊಂಡಿರುವುದು ಅತ್ಯಂತ ಬೇಜವಾಬ್ಧಾರಿಯುತವಾದ ಹಾಗೂ ಅವಮಾನಕರವಾದ ಸಂಗತಿ. ಆದ್ದರಿಂದ ಕೂಡಲೇ ಅವರ ಬೇಡಿಕೆಗಳನ್ನು ಪರಿಗಣಿಸಿ ಈಡೇರಿಸಬೇಕೆಂದು ಆಗ್ರಹಿಸುತ್ತೇನೆ. ಜನರ ಜೊತೆ ನೇರ ಸಂಪರ್ಕದಲ್ಲಿದ್ದುಕೊAಡು ಕೆಲಸ ಮಾಡುವ ಪಶು ವೈದ್ಯರು ಸೇರಿದಂತೆ ಇತರೆ ಎಲ್ಲರನ್ನು ಕೊರೋನ ವಾರಿಯರ್ಸ್ ಎಂದು ಅಧಿಸೂಚನೆ ಹೊರಡಿಸಿ ಅಗತ್ಯ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಿಂದಗಿ ಶಾಸಕ ಎಂ.ಸಿ. ಮನಗೂಳಿ ವಿಧಿವಶ

ಉಸಿರಾಟದ ತೊಂದರೆ ಹಿನ್ನಲೆಯಲ್ಲಿ ಬನ್ನೇರುಘಟ್ಟ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಮಲ್ಲಪ್ಪ ಚೆನ್ನವೀರಪ್ಪ ಮನಗೂಳಿ. (85) ತಡರಾತ್ರಿ ನಿಧನರಾಗಿದ್ದಾರೆ.

ಉತ್ತರಪ್ರಭ ಫಲಶೃತಿ: ಏನರಾ ಆಗ್ಲಿ ಧೂಳಿಗೆ ತೆರಿಗೆ ಕಟ್ಟೊ ಕಾಟ ತಪ್ಪಿದ್ರ ಸಾಕು..!

ಮನೆ, ಜಾಗೆ, ನೀರು, ಕಟ್ಟಡ ಹೀಗಿಲ್ಲ ತೆರಿಗೆ ಕಟ್ಟುವುದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಅಷ್ಟೆ ಏಕೆ ಸ್ವತಃ ಕಟ್ಟಿದ್ದೇವೆ. ಆದರೆ ಇದ್ಯಾವುದಿದು ಧೂಳಿಗೆ ಕರ ಕಟ್ಟುವುದು ಅಂದ್ಕೊಂಡ್ರಾ?

ಕುಡಿದ ಮತ್ತಿನಲ್ಲಿ ಮಹಿಳೆಯ ಜೀವಕ್ಕೆ ಕುತ್ತು ತಂದ ಪೊಲೀಸ್!

ನವದೆಹಲಿ : ಕುಡಿದ ಮತ್ತಿನಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ವೇಗವಾಗಿ ಕಾರು ಚಲಾಯಿಸಿ…

ಶಿಕ್ಷಕರಿಗೂ ಬೇಕು ವರ್ಕ್ ಪ್ರಮ್ ಹೋಮ್

ಬೆಂಗಳೂರು: ಈಗಾಗಲೇ ದಿನದಿಂದ ದಿನಕ್ಕೆ ದೇಶದಲ್ಲಷ್ಟೆ ಅಲ್ಲದೇ ರಾಜ್ಯದಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.…