ಬೆಂಗಳೂರು: ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಜಿ.ಪಂ, ತಾ.ಪಂ ಸದಸ್ಯರು ಮತ್ತು ಗ್ರಾ.ಪಂ. ಸದಸ್ಯರನ್ನು ಕೊವಿಡ್ ವಾರಿಯರ್ಸ್ ಎಂದು ಪರಿಗಣಿಸಿ ಆದ್ಯತೆ ಮೇರೆಗೆ ಮೊದಲ ಡೋಸ್ ಕೊವಿಡ್ ಲಸಿಕೆ ನೀಡುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಈ ಕುರಿತು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದರು.
ಕರ್ನಾಟಕದಲ್ಲಿ ಕೊವಿಡ್ ಪಾಸಿಟಿವಿಟಿ ದರ ಶೇ.10ಕ್ಕಿಂತ ಕಡಿಮೆ ಮಾಡಬೇಕು. ಮರಣ ಪ್ರಮಾಣ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು. ಕೆಲವು ಭಾಗಗಳಲ್ಲಿ ಪ್ರಕರಣ ಕಡಿಮೆ ಆಗುತ್ತಿದೆ ಎಂದು ಯಾವುದೇ ಕಾರಣಕ್ಕೂ ಕೈಕಟ್ಟಿ ಕೂರುವಂತಿಲ್ಲ.
ಗ್ರಾಮೀಣ ಪ್ರದೇಶದಲ್ಲಿ ಕೊವಿಡ್ ಪ್ರಕರಣಗಳ ಪ್ರಮಾಣ ಹೆಚ್ಚುತ್ತಿದೆ. ಈ ಕುರಿತು ಹೆಚ್ಚಿನ ಗಮನ ಹರಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು.
ಐದು ಜಿಲ್ಲಾಡಳಿತಗಳ ಜತೆ ನಡೆಸಿದ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಈ ನಿರ್ದೇಶನ ನೀಡಿದ್ದು, ಮರಣ ಪ್ರಮಾಣ ಶೇ.1.7ರಷ್ಟಿದ್ದು, ಇದನ್ನು ಗಮನಾರ್ಹವಾಗಿ ಕಡಿಮೆ ಮಾಡಬೇಕು. ರಾಜ್ಯದಲ್ಲಿ ಒಟ್ಟು ವರದಿಯಾಗುತ್ತಿರುವ ಪ್ರಕರಣಗಳಲ್ಲಿ ಬೆಂಗಳೂರು ನಗರ, ಮೈಸೂರು, ತುಮಕೂರು, ಹಾಸನ, ಬಳ್ಳಾರಿ ಜಿಲ್ಲೆಗಳಲ್ಲಿ ಒಟ್ಟು ಶೇಕಡಾ 60 ಪ್ರಕರಣಗಳಿವೆ. ಈ ಭಾಗಗಳಿಗೆ ಹೆಚ್ಚು ಒತ್ತು ನೀಡಬೇಕು ಎಂದು ಸೂಚಿಸಿದರು.

Leave a Reply

Your email address will not be published. Required fields are marked *

You May Also Like

ಕಲ್ಯಾಣ ಕರ್ನಾಟಕದಲ್ಲಿ ಪ್ರತ್ಯೇಕ ಧ್ವಜ ಹಾರಿಸಲು ಪ್ರಯತ್ನ – ಹಲವರ ಬಂಧನ!

ಕಲಬುರಗಿ : ಕಲ್ಯಾಣ ಕರ್ನಾಟಕಕ್ಕೆ ಆಗ್ರಹಿಸಿ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿದ್ದಾರೆ.

ಸಿರಿಧಾನ್ಯಗಳ ಅಭಿಯಾನ ಶನಿವಾರ ಉದ್ಘಾಟನೆ ಸಮಾರಂಭ

ರಾಯಚೂರು: ರಾಜ್ಯದಲ್ಲಿ ಸಿರಿಧಾನ್ಯ ಬೆಳೆಯುವುದನ್ನು ಉತ್ತೇಜಿಸಲು ರೈತಸಿರಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ…

ಗದಗನಲ್ಲಿ ಹೀಗಿದೆ ವಿಕೆಂಡ್ ಕರ್ಪ್ಯೂ..!

ವೀಕೆಂಡ್ ಕಫ್ಯೂ೯ ಹಿನ್ನೆಲೆಯಲ್ಲಿ ಗದುಗಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದ ವ್ಯಾಪಾರ, ವಹಿವಾಟು ಸಂಪೂರ್ಣ ಸ್ಥಬ್ದವಾಗಿದೆ.

ಬೆಂಬಿಡದ ಮಳೆಗೆ ನಲುಗುತ್ತಿರುವ ಬೆಂಗಳೂರಿಗರು!

ಬೆಂಗಳೂರು : ನಿನ್ನೆ ಸಂಜೆಯಿಂದ ರಾತ್ರಿ ಪೂರ್ತಿ ಸುರಿದ ಮಳೆಯಿಂದಾಗಿ ನಗರದ ಹೊಸಕೆರೆ ಹಳ್ಳಿ ಸಂಪೂರ್ಣವಾಗಿ ಮುಳುಗಡೆಗೊಂಡಿದೆ. ಹೀಗಾಗಿ ಜನ – ಜೀವನ ಸಂಪೂರ್ಣವಾಗಿ ಹದಗೆಟ್ಟಿದೆ.