ಕೊಪ್ಪಳ: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಕೊಪ್ಪಳ ಜಿಲ್ಲೆಯನ್ನು ಮೇ.31 ಬೆಳಿಗ್ಗೆ 6 ಗಂಟೆಯಿಂದ ಜೂ.7 ರಾತ್ರಿ 12 ಗಂಟೆಯ ವರೆಗೆ ಸಂಪೂರ್ಣ ಲಾಕಡೌನ್ ಮುಂದುವರೆಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಯಾವುದೇ ಮದುವೆ, ಜಾತ್ರಾ, ಸಭೆ ಸಮಾರಂಭಗಳಿಗೆ ಸಂಪೂರ್ಣ ನಿಷೇಧಿಸಲಾಗಿದೆ. ಆರೋಗ್ಯ ಸೇವೆ, ಔಷಧಿ ಅಂಗಡಿ ಹಾಗೂ ಕೃಷಿ ಚಟುವಟಿಕೆ ಬಂಧಿಸಿದ ಅಂಗಡಿಗಳನ್ನು ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ. ಈ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿ ನಿಯಮಾವಳಿ ಉಲ್ಲಂಘನೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಮುಂದುವರೆಸಲು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಶರವೇಗದಲ್ಲಿ ಸೋಂಕು: ಇಂದು 72 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 72 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ 774…

ಮುಂಡರಗಿ: ಸೇತುವೆ ಕುಸಿತ ಸಂಚಾರ ವ್ಯತ್ಯಯ!

ತಾಲೂಕಿನ ಕೊರ್ಲಹಳ್ಳಿ ಬಳಿಯ ಸೇತುವೆ ಇಂದು ಬೆಳಗಿನ ಜಾವ ಕುಸಿತಗೊಂಡಿದ್ದು ಬೆಳಕಿಗೆ ಬಂದಿದೆ. ಅದೃಷ್ಟವಶಾತ್​ ಈ ಸಮಯದಲ್ಲಿ ಹೆಚ್ಚಿನ ಸಂಚಾರ ಇಲ್ಲದ ಹಿನ್ನೆಲೆಯಲ್ಲಿ ದುರ್ಘಟನೆ ಸಂಭವಿಸಿಲ್ಲ. ಆದರೆ ಘಟನೆಯಿಂದ ಬೆಳಿಗ್ಗೆ ಕಾರೊಂದು ಜಖಂಗೊಂಡಿದೆ ಎನ್ನಲಾಗಿದೆ.

ಕ ಸಾ ಪ ಜಿಲ್ಲಾಧ್ಯಕ್ಷರಾಗಿ ಶ್ರೀ ವಿವೇಕಾನಂದಗೌಡ ಆಯ್ಕೆ

ಗದಗ: ಇಂದು ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಬಹುನೀರಿಕ್ಷಿತ ಅಭ್ಯರ್ಥಿಯಾದ ಶ್ರೀ ವಿವೇಕಾನಂದಗೌಡ ಪಾಟೀಲ ಆಯ್ಕೆಯಾಗಿದ್ದಾರೆ. ಕಣದಲ್ಲಿದ್ದ ಅಭ್ಯರ್ಥಿಗಳಲ್ಲಿ ಮಾಜಿ ಅಧ್ಯಕ್ಷರಾಗಿದ್ದ ಡಾ. ಶರಣು ಗೋಗೆರಿಯವರನ್ನು ಸೋಲಿಸಿ ಗೆದ್ದಿರುವುದು ಸಾಹಿತ್ಯ ಆಸಕ್ತರಲ್ಲಿ ಸಂತಸವನ್ನುಂಟು ಮಾಡಿದೆ.

ವಿದ್ಯುತ್ ಸ್ಪರ್ಷ: ಯುವಕ ಸಾವು

ವಿದ್ಯುತ್ ಸ್ಪರ್ಷದಿಂದ ಯುವಕ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಕದಡಿ ಗ್ರಾಮದಲ್ಲಿ ನಡೆದಿದೆ. ಕದಡಿ ಗ್ರಾಮದ ಬಸನಗೌಡ ರಾಮನಗೌಡ ಸಣಗೌಡ್ರ (25) ಸಾವನ್ನಪ್ಪಿದ ದುರ್ದೈವಿ.