ಬೆಂಗಳೂರು: ಈಗಾಗಲೇ ಕೋವಿಡ್ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಎರಡನೇ ಹಂತದ ಪರಿಹಾರ ಪ್ಯಾಕೇಜ್ ಘೋಷಣೆ ಮಾಡುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮೊದಲ ಹಂತದ ಪ್ಯಾಕೇಜ್ ಕುರಿತು ಸಾಕಷ್ಟು ಮನವಿಗಳು ಹಾಗೂ ಬೇಡಿಕೆಗಳು ವ್ಯಕ್ತವಾದ ಹಿನ್ನೆಲೆ ಎಲ್ಲರಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಎರಡನೇ ಹಂತದ ಪ್ಯಾಕೇಜನ್ನು ಸಿಎಂ ಘೋಷಣೆ ಮಾಡಲಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇನ್ನೆರಡು ದಿನಗಳಲ್ಲಿ 2ನೇ ಹಂತದ ಕೋವಿಡ್ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಈ ಕುರಿತು ಮಾತನಾಡಿದ ಅವರು, ಎರಡನೇ ಹಂತದ ಕೋವಿಡ್ ಪ್ಯಾಕೇಜ್ ಸಿದ್ಧವಾಗುತ್ತಿದೆ. ಎರಡು ದಿನಗಳಲ್ಲಿ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.
ಎರಡನೇ ಹಂತದ ಕೋವಿಡ್ ಪರಿಹಾರ ಪ್ಯಾಕೇಜ್ ಘೋಷಣೆ ಯಾವಾಗ?: ಸಿಎಂ ಹೇಳಿದ್ದೇನು?
