ಲಖನೌ: ಕೋವಿಡ್-19 ವೇಳೆ ಕರ್ತವ್ಯ ನಿಷ್ಠೆ ಮೆರೆದು ಪ್ರಾಣ ಕಳೆದುಕೊಂಡ ಪತ್ರಕರ್ತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.
ಹಿಂದಿ ಪತ್ರಕರ್ತರ ದಿನಾಚರಣೆ ಅಂಗವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯಪ ಪೂರ್ವ ಹಾಗೂ ನಂತರ ದೇಶ ಕಟ್ಟುವಲ್ಲಿ ಹಿಂದಿ ಪತ್ರಕರ್ತರ ಪಾತ್ರ ಅಪಾರವಾಗಿದೆ ನಮ್ಮ ದೇಶವನ್ನು ಪ್ರಗತಿಯತ್ತ ಮುನ್ನಡೆಸುವ ಎಲ್ಲಾ ಪತ್ರಕರ್ತರಿಗೂ ನನ್ನ ನುಡಿ ನಮನಗಳನ್ನು ಅರ್ಪಿಸಿದರು. ಪತ್ರಕರ್ತರನ್ನು ಪ್ರೋತ್ಸಾಹಿಸಲು ಸರ್ಕಾರ ಸದಾ ಸಿದ್ಧವಾಗಿರುತ್ತದೆ. ಪತ್ರಕರ್ತರ ಕುಟುಂಬದವರು ಸಂಕಷ್ಟಕ್ಕೆ ಸಿಲುಕಿರುವುದರಿಂದ ಪ್ರಾಣ ಕಳೆದುಕೊಂಡ ಪತ್ರಕರ್ತರ ಕುಟುಂಬಕ್ಕೆ ಉತ್ತರಪ್ರದೇಶ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ ನೀಡಿ, ಪತ್ರಕರ್ತರ ಕುಟುಂಬಕ್ಕೆ ನೆರವು ನೀಡಲು ಮುಂದಾಗಿದ್ದೇವೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು.

Leave a Reply

Your email address will not be published. Required fields are marked *

You May Also Like

ಮಸ್ಕಿ: ತಾಲೂಕು ಆಡಳಿತ ಮೇಲೆ ಕ್ರಮ ಒತ್ತಾಯ

ಚನ್ನಬಸನ ಪತ್ತೆಗೆ ಹಿನ್ನಡೆಯಾಗಿರುವ ತಾಲೂಕ ಆಡಳಿತ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಇಲ್ಲಿನ ಪ್ರಗತಿಪರ ಸಂಘಟನೆ ಮುಖಂಡರು ಪ್ರತಿಭಟನೆ ನಡೆಸಿದರು.

ದೆಹಲಿಗೆ ಆಮ್ಲಜನಕ ಕಳುಹಿಸಲು ಸಿದ್ಧತೆ ನೆಡಸಿದ ಕೇರಳ

ರಾಷ್ಟ್ರ ರಾಜಧಾನಿಯಲ್ಲಿ ವೈದ್ಯಕೀಯ ಆಮ್ಲಜನಕದ ದಾಸ್ತಾನು ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಕೇರಳವು ದೆಹಲಿಗೆ ಸಹಾಯ ಹಸ್ತ ಚಾಚಿದೆ. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತು ಮಲಯಾಳಿ ಸಂಘಟನೆಗಳ ಮನವಿಗಳಿಗೆ ಸ್ಪಂದಿಸಿ ನೆರವು ನೀಡಲು ಕೇರಳ ಸರ್ಕಾರ ಸಿದ್ಧತೆ ನಡೆಸಿದೆ.

ರಾಜ್ಯದಲ್ಲಿ ಸುರಿಯುತ್ತಿರುವ ಭೀಕರ ಮಳೆ!!

ಬೆಂಗಳೂರು : ರಾಜ್ಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕ ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಬೆಂಬಿಡದೆ ಮಳೆ ಸುರಿಯುತ್ತಿದೆ.

ಹಡಗಿಗೆ ದೀಪಾಲಂಕಾರ: ಕೋವಿಡ್19 ವಾರಿಯರ್ಸ್ಗೆ ಗೌರವ

ಹಡಗುಗಳನ್ನು ದೀಪಗಳಿಂದ ಅಲಂಕರಿಸುವ ಮೂಲಕ ಕೊರೋನಾ ವಾರಿಯರ್ಸ್ ಗೆ ವಿಶಿಷ್ಟ ರೀತಿಯಿಂದ ಅಭಿನಂದನೆ ಸಲ್ಲಿಸಲಾಯಿತು.