ಕೋವಿಡ್ ನಿಂದ ಮೃತ ಪಟ್ಟ ಪತ್ರಕರ್ತರ ಕುಟುಂಬಕ್ಕೆ 10 ಲಕ್ಷ ಪರಿಹಾರ

Yogi adityanath

ಲಖನೌ: ಕೋವಿಡ್-19 ವೇಳೆ ಕರ್ತವ್ಯ ನಿಷ್ಠೆ ಮೆರೆದು ಪ್ರಾಣ ಕಳೆದುಕೊಂಡ ಪತ್ರಕರ್ತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.
ಹಿಂದಿ ಪತ್ರಕರ್ತರ ದಿನಾಚರಣೆ ಅಂಗವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯಪ ಪೂರ್ವ ಹಾಗೂ ನಂತರ ದೇಶ ಕಟ್ಟುವಲ್ಲಿ ಹಿಂದಿ ಪತ್ರಕರ್ತರ ಪಾತ್ರ ಅಪಾರವಾಗಿದೆ ನಮ್ಮ ದೇಶವನ್ನು ಪ್ರಗತಿಯತ್ತ ಮುನ್ನಡೆಸುವ ಎಲ್ಲಾ ಪತ್ರಕರ್ತರಿಗೂ ನನ್ನ ನುಡಿ ನಮನಗಳನ್ನು ಅರ್ಪಿಸಿದರು. ಪತ್ರಕರ್ತರನ್ನು ಪ್ರೋತ್ಸಾಹಿಸಲು ಸರ್ಕಾರ ಸದಾ ಸಿದ್ಧವಾಗಿರುತ್ತದೆ. ಪತ್ರಕರ್ತರ ಕುಟುಂಬದವರು ಸಂಕಷ್ಟಕ್ಕೆ ಸಿಲುಕಿರುವುದರಿಂದ ಪ್ರಾಣ ಕಳೆದುಕೊಂಡ ಪತ್ರಕರ್ತರ ಕುಟುಂಬಕ್ಕೆ ಉತ್ತರಪ್ರದೇಶ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ ನೀಡಿ, ಪತ್ರಕರ್ತರ ಕುಟುಂಬಕ್ಕೆ ನೆರವು ನೀಡಲು ಮುಂದಾಗಿದ್ದೇವೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು.

Exit mobile version