ಬೆಂಗಳೂರು: ಈಗಾಗಲೇ ರಾಜ್ಯದ ಬಹುತೇಕರು ಅದ್ಯಯನ ಅಥವಾ ಉದ್ಯೋಗಕ್ಕಾಗಿ ವಿದೇಶಗಳನ್ನೆ ನೆಚ್ಚಿಕೊಂಡಿದ್ದಾರೆ. ಈ ಉದ್ದೇಶದಿಂದ ವಿದೇಶಕ್ಕೆ ತೆರಳುವವರು, ಜೂನ್.1 ರಿಂದ ಕೋವಿಡ್ ಲಸಿಕೆ ಪಡೆಯಬಹುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಅವರು ಸೋಮವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರು ನಗರ ವಿಶ್ವವಿದ್ಯಾಲಯದ ಆಡಳಿತ ವಿಭಾಗದಲ್ಲಿ ಮಂಗಳವಾರ 3 ಗಂಟೆಗೆ ಈ ವರ್ಗದವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು.
ಇನ್ನು ವಿದೇಶಕ್ಕೆ ತೆರಳುವವರಿಗೆ ಕೋವಿಡ್ ಲಸಿಕೆ ಪಡೆದಿರುವ ಪ್ರಮಾಣ ಪತ್ರ ಕಡ್ಡಾಯವಾಗಿದೆ.
ಲಸಿಕೆ ಪಡೆಯಲು ಇಚ್ಛಿಸುವವರು ಆಧಾರ್ ಕಾರ್ಡ್, ಪಾಸ್ ಪೋರ್ಟ್ ಮತ್ತು ವಿದೇಶದಲ್ಲಿನ ತಮ್ಮ ಕೆಲಸ ಅಥವಾ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಹಾಜರುಪಡಿಸಬೇಕು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಇಂದು ಇಳಿಕೆ ಕಂಡ ಮಹಾಮಾರಿ!

ಬೆಂಗಳೂರು : ರಾಜ್ಯದಲ್ಲಿ ಇಂದು 6,297 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 66 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 8,500 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸರ್ಕಾರಿ ವಿವಿಗಳ ತಾತ್ಕಾಲಿಕ- ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಕುರಿತ ವಿಚಾರ ಸಂಕಿರಣ

ಕರ್ನಾಟಕದ ಸರ್ಕಾರೀ ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ತಾತ್ಕಾಲಿಕ, ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಮತ್ತು ವೇತನ ತಾರತಮ್ಯ ಸರಿಪಡಿಸಲು ಒತ್ತಾಯಿಸಿ ರಾಜ್ಯಮಟ್ಟದ ವಿಚಾರ ಸಂಕಿರಣ (ವೆಬಿನಾರ್) ಅನ್ನು 2020 ಆಗಸ್ಟ್ 19 ರಂದು ಬುಧವಾರ ಮಧ್ಯಾಹ್ನ 2.30 ಕ್ಕೆ (ಸಾಮಾಜಿಕ ಜಾಲತಾಣದ ಮೂಲಕ) ಆಯೋಜಿಸಲಾಗಿದೆ.

23 ರಂದು ಆಲಮಟ್ಟಿಗೆ ದೆಹಲಿಯ ಕಾನೂನು ತಂಡ ಭೇಟಿ; 21 ವರ್ಷಗಳ ಹಿಂದೆ ಕತ್ತರಿಸಿದ ಜಲಾಶಯದ ಕ್ರಸ್ಟ್‌ ಗೇಟ್ ಗಳ ಪರಿಶೀಲನೆ

ಉತ್ತರಪ್ರಭಆಲಮಟ್ಟಿ: ಸುಮಾರು 21 ವರ್ಷಗಳ ಹಿಂದೆ ಕತ್ತರಿಸಿ ಸಂರಕ್ಷಿಸಿ ಭದ್ರತೆಯಲ್ಲಿಟ್ಟಿರುವ ಆಲಮಟ್ಟಿ ಆಣೆಕಟ್ಟಿನ ಕ್ರಸ್ಟ್‌ ಗೇಟ್…

ಮುಂಡರಗಿ ತಾಲೂಕಿನ ಕೆಲ ಸರ್ಕಾರಿ ಆಸ್ಪತ್ರೆಗೂ ಕರೊನಾ ಭೀತಿ..!

ಜಿಲ್ಲೆಯ ಮುಂಡರಗಿ ತಾಲೂಕಾ ಆಸ್ಪತ್ರೆ ಸಿಬ್ಬಂದಿಗೆ ಕರೊನಾ ಪಾಸಿಟಿವ್ ಶಂಕೆ ವ್ಯಕ್ತವಾಗಿದೆ. ಶಂಕೆ ಹಿನ್ನಲೆಯಲ್ಲಿ ಮುಂಡರಗಿ ತಾಲೂಕಾ ಆಸ್ಪತ್ರೆ ಹಾಗೂ ಡಂಬಳ ಆರೋಗ್ಯ ಕೇಂದ್ರದಲ್ಲಿ ಸೈನಿಟೈಜರ್ ಮಾಡಲಾಗಿದೆ.