ಧಾರವಾಡ: ಡಿಎಪಿ ರಸಗೊಬ್ಬರ ದರ ಇಳಿಕೆ ಮಾಡಿ ಸರ್ಕಾರ ಆದೇಶಿಸಿದೆ. ಸಂಗ್ರಹವಿರುವ ಡಿಎಪಿ ರಸಗೊಬ್ಬರ ಪ್ರತಿ ಚೀಲಕ್ಜೆ 1200 ರೂ. ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಕಾಪು ದಾಸ್ತಾನು ಅಡಿ ಕೆಎಸ್ಸಿಎಮ್ಎಫ್ ದಲ್ಲಿ ಸಂಗ್ರಹವಿದ್ದ 1960 ಟನ್ ಡಿಎಪಿ ಗೊಬ್ಬರ ಪ್ರತಿ ಚೀಲಕ್ಕೆ 1450 ರೂ.ಗಳ ದರ ನಿಗದಿಪಡಿಸಲಾಗಿತ್ತು. ಈ ಕುರಿತು ಧಾರವಾಡ ಜಿಲ್ಲಾಡಳಿತ ಪ್ರಸ್ತಾವನೆ ಸಲ್ಲಿಸಿ, ರೈತರ ಅನುಕೂಲಕ್ಕಾಗಿ ಈಗಾಗಲೇ ಕಾಪು ದಾಸ್ತಾನಿರುವ ಡಿಎಪಿ ಗೊಬ್ಬರ ದರವನ್ನು 1200 ರೂ. ಗೆ ಮರು ನಿಗದಿಗೊಳಿಸಲು ಪತ್ರ ಕಳಿಸಿತ್ತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ದರ ಇಳಿಕೆ ಕುರಿತಾಗಿ ಪ್ರಯತ್ನ ನಡೆಸಿದ್ದರು. ಈಗಾಗಲೇ ಕಾಪು ದಾಸ್ತಾನು ಇರುವ ಡಿಎಪಿ ಗೊಬ್ಬರಕ್ಕೆ 1200 ರೂ. ನಿಗದಿಗೊಳಿಸಿದ್ದು, ಹೊಸ ದರದಲ್ಲಿ ಗೊಬ್ಬರ ಮಾರಾಟ ಮಾಡಲು ರಾಜ್ಯ ಸರ್ಕಾರದಿಂದ ಅನುಮತಿ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 257 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 257 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 4320 ಕ್ಕೆ ಏರಿಕೆಯಾದಂತಾಗಿದೆ.

ಜಾನಪದ ಕಲಾವಿದ ಪಾಗದ ನಿಧನ

ಸಮೀಪದ ಕೂತಬಾಳ ಗ್ರಾಮದ ಬಸವ ಬಳಗ ಜಾನಪದ ಸಾಂಸ್ಕೃತಿಕ ಕಲಾತಂಡ ಅಧ್ಯಕ್ಷ ಹಾಗೂ ಸಗರ ಕಲಾ ಚಕ್ರವರ್ತಿ ಪ್ರಶಸ್ತಿ ಪುರಸ್ಕೃತ ಬಸವರಾಜ ಪಾಗದ ಶನಿವಾರ ಬೆಳಿಗ್ಗೆ ನಿಧನ ಹೊಂದಿದರು.

ಶಿವಾಜಿನಗರದಲ್ಲಿ ಮತ್ತೆ 14 ಜನರಲ್ಲಿ ಕಂಡು ಬಂದ ಸೋಂಕು!

ಬೆಂಗಳೂರು: ಇಲ್ಲಿಯ ಶಿವಾಜಿನಗರದಲ್ಲಿ ಮತ್ತೆ 14 ಜನರಲ್ಲಿ ಸೋಂಕು ಇರುವುದು ಬೆಳಕಿಗೆ ಬಂದಿದೆ. ಹೌಸ್ ಕೀಪಿಂಗ್…

ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಗದಗ: ಕೋವಿಡ್-19ರ 2ನೇ ಅಲೆಯ ತೀವ್ರತೆಯ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತಿತರೆ ಚಟುವಟಿಕೆಗಳಿಗೆ ನಿರ್ಬಂಧಗಳನ್ನು ವಿಧಿಸಿರುವುದರಿಂದ ಆಟೋ ರಿಕ್ಷಾ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಷರತ್ತಿಗೊಳಪಟ್ಟು 3000 ರೂ.ಗಳ ಪರಿಹಾರ ಧನವನ್ನು ನೀಡಲು ಸರ್ಕಾರ ಆದೇಶಿಸಲಾಗಿದೆ.