ಧಾರವಾಡ: ಡಿಎಪಿ ರಸಗೊಬ್ಬರ ದರ ಇಳಿಕೆ ಮಾಡಿ ಸರ್ಕಾರ ಆದೇಶಿಸಿದೆ. ಸಂಗ್ರಹವಿರುವ ಡಿಎಪಿ ರಸಗೊಬ್ಬರ ಪ್ರತಿ ಚೀಲಕ್ಜೆ 1200 ರೂ. ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಕಾಪು ದಾಸ್ತಾನು ಅಡಿ ಕೆಎಸ್ಸಿಎಮ್ಎಫ್ ದಲ್ಲಿ ಸಂಗ್ರಹವಿದ್ದ 1960 ಟನ್ ಡಿಎಪಿ ಗೊಬ್ಬರ ಪ್ರತಿ ಚೀಲಕ್ಕೆ 1450 ರೂ.ಗಳ ದರ ನಿಗದಿಪಡಿಸಲಾಗಿತ್ತು. ಈ ಕುರಿತು ಧಾರವಾಡ ಜಿಲ್ಲಾಡಳಿತ ಪ್ರಸ್ತಾವನೆ ಸಲ್ಲಿಸಿ, ರೈತರ ಅನುಕೂಲಕ್ಕಾಗಿ ಈಗಾಗಲೇ ಕಾಪು ದಾಸ್ತಾನಿರುವ ಡಿಎಪಿ ಗೊಬ್ಬರ ದರವನ್ನು 1200 ರೂ. ಗೆ ಮರು ನಿಗದಿಗೊಳಿಸಲು ಪತ್ರ ಕಳಿಸಿತ್ತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ದರ ಇಳಿಕೆ ಕುರಿತಾಗಿ ಪ್ರಯತ್ನ ನಡೆಸಿದ್ದರು. ಈಗಾಗಲೇ ಕಾಪು ದಾಸ್ತಾನು ಇರುವ ಡಿಎಪಿ ಗೊಬ್ಬರಕ್ಕೆ 1200 ರೂ. ನಿಗದಿಗೊಳಿಸಿದ್ದು, ಹೊಸ ದರದಲ್ಲಿ ಗೊಬ್ಬರ ಮಾರಾಟ ಮಾಡಲು ರಾಜ್ಯ ಸರ್ಕಾರದಿಂದ ಅನುಮತಿ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಎಸ್.ಎಸ್.ಎಲ್.ಸಿ-ಪಿಯುಸಿ ಪರೀಕ್ಷೆ ವೇಳಾಪಟ್ಟಿ: ಪಾಲಕ, ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿ..

ರಾಜ್ಯದಲ್ಲಿ ಜೂನ್ 25 ರಿಂದ ಜುಲೈ 4 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಹಾಗೂ ಜೂನ್ 18 ಕ್ಕೆ ಪಿಯುಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಪಶ್ಚಿಮ ಬಂಗಾಳದ ಹೌರಾ ಘಟನೆಗೆ ಪವನ್ ಮೇಟಿ ಖಂಡನೆ

ಪಶ್ಚಿಮ ಬಂಗಾಳ ರಾಜ್ಯವು ಗೂಂಡಾ ರಾಜ್ಯವಾಗಿ ಪರಿವರ್ತನೆಯಾಗಬಹುದು ಎಂಬ ದೃಷ್ಟಿಯಿಂದ ಹೌರಾ ಜಿಲ್ಲೆಯಲ್ಲಿ ನಡೆದ ಘಟನೆಯನ್ನು ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ತೇಜಸ್ವಿ ಸೂರ್ಯ ಅಭಿಮಾನಿ ಬಳಗದ ತಾಲೂಕು ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಪವನ್ ಮೇಟಿ ಆಗ್ರಹಿಸಿದ್ದಾರೆ.

ಕುರಿಗಾಹಿಗಳ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ರಾಜ್ಯದಲ್ಲಿ ಕುರಿಗಾಹಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ತಾಲೂಕು ಕುರುಬರ ಸಂಘದ ವತಿಯಿಂದ ಗುರುವಾರ ಸ್ಥಳೀಯ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಗದಗ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 4 ಕ್ಕೆ ಏರಿಕೆ..!

ಗದಗ : ಜಿಲ್ಲೆಯಲ್ಲಿ ಕೊರೋನಾಗೆ ಇಂದು ಮತ್ತೊಂದು ಬಲಿಯಾಗಿದ್ದು ಈ ಮೂಲಕ ಸಾವಿನ ಸಂಖ್ಯೆ 4…