3000 ಸಿನಿಮಾ ಕಾರ್ಮಿಕರಿಗೆ ಮಿಡಿದ ನಟ ಯಶ್ ಸಾಮಾಜಿಕ ಕಾಳಜಿ

ಬೆಂಗಳೂರು: ಈಗಾಗಲೇ ಲಾಕ್ ಡೌನ್ ಹಿನ್ನೆಲೆ ಸಿನಿಮಾ ಕಾರ್ಮಿಕರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇದರಿಂದ ನಟ ಯಶ್ ಕನ್ನಡ ಚಿತ್ರರಂಗದ 3000 ಕಾರ್ಮಿಕರಿಗೆ ತಲಾ 5000 ನೀಡುವುದಾಗಿ ಘೋಷಿಸಿದ್ದಾರೆ. ಈ ಕುರಿತು ಸೋಶಿಯಲ್ ಮಿಡಿಯಾದಲ್ಲಿ ಘೋಷಣೆ ಮಾಡಿರುವ ಯಶ್, ಯಶ್ ಅಭಿಮಾನಿಗಳಿಗೂ ಖುಷಿ ತಂದಿದೆ.
ಹಾಗಾಗಿ ಚಿತ್ರರಂಗದ 21 ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 3,000ಕ್ಕೂ ಹೆಚ್ಚಿರುವ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ 5 ಸಾವಿರ ಹಣವನ್ನ ತನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ. ಈ ಸಣ್ಣ ಸಹಾಯ ಈಗ ಎದುರಾಗಿರುವ ಎಲ್ಲ ಕಷ್ಟಗಳಿಗೂ ಪರಿಹಾರ ಎಂಬುವುದು ನನ್ನ ಭಾವನೆಯಲ್ಲ. ಬದಲಿಗೆ ಶಕ್ತಿ ಇರುವ ಹೃದಯವಂತರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಂಕಷ್ಟದಲ್ಲಿರುವ ಜನಸಮುದಾಯದ ಜೊತೆ ಹೆಗಲಿಗೆ ಹೆಗಲು ಕೊಟ್ಟು ನಿಂತು ಸಹಾಯ ಮಾಡಿದರೆ, ನಾನು ಮಾಡಿದ ಪ್ರಯತ್ನಕ್ಕೂ ಸಾರ್ಥಕತೆ ಬರುತ್ತದೆ ಎನ್ನುವುದು ನನ್ನ ಆಶಯ’ ಎಂದು ಸೋಶಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ತಲಾ 5000 ರಂತೆ 3000 ಕಾರ್ಮಿಕರಿಗೆ ಅಂದರೆ ಒಂದೂವರೆ ಕೋಟಿ ರೂಪಾಯಿ ಆಗಲಿದೆ.

Exit mobile version