ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮುಂಚೂಣಿ ವಾರಿಯರ್ಸ್ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಪರಿಗಣಿಸಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಂಗನವಾಡಿ ಕಾರ್ಯಕರ್ತೆಯರಿಗೆ ತಲಾ 2000 ರೂ. ನೆರವು ಘೋಷಿಸಿದ್ದು, ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ಅಭಿನಂದನೆಗಳನ್ನು  ಸಲ್ಲಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯದಲ್ಲಿ ಕೊರೊನಾ ನಿಯಂತ್ರಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ರೋಗಿಗಳ ಜೊತೆ ನಿರಂತರ ಸಂಪರ್ಕ ಇಟ್ಟುಕೊಂಡು ಕೊರೊನಾ ಸೋಂಕಿನ ಪ್ರಮಾಣ ಕಡಿಮೆ ಮಾಡುವಲ್ಲಿ ಶ್ರಮಿಸುತ್ತಿದ್ದಾರೆ ಎಂದಿದ್ದಾರೆ.

ಮಹಾಮಾರಿ ವಿರುದ್ಧ ಜೀವದ ಹಂಗು ತೊರೆದು ಗ್ರಾಮೀಣ ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಆತ್ಮಸ್ಥೈರ್ಯ ತುಂಬಲು ವಿಶೇಷ ಪ್ಯಾಕೇಜ್ ನೀಡುವಂತೆ ಕಳೆದ ವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವಿನಂತಿ ಮಾಡಿಕೊಳ್ಳಲಾಗಿತ್ತು ಎಂದಿದ್ದಾರೆ.

ನಮ್ಮ ಮನವಿಗೆ ಸ್ಪಂದಿಸಿ, ರಾಜ್ಯದ 64,423 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 59,169 ಅಂಗನವಾಡಿ ಸಹಾಯಕಿಯರಿಗೆ ತಲಾ 2000 ರೂ. ಗಳಂತೆ ಸಹಾಯಧನ ನೀಡಲು ಮುಖ್ಯಮಂತ್ರಿಳು ಘೋಷಣೆ ಮಾಡಿದ್ದಾರೆ. ಇದರಿಂದ ರಾಜ್ಯ ಸರ್ಕಾರಕ್ಕೆ 24.07 ಕೋಟಿ ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರನ್ನು ಪರಿಗಣಿಸಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿರುವ ರಾಜ್ಯದ ಮುಖ್ಯಮಂತ್ರಿಗಳಿಗೆ ವಿಶೇಷ ಅಭಿನಂದನೆ ಸಲ್ಲಿಸುವುದಾಗಿ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಇದೇ ವೇಳೆ, ಲಾಕ್ಡೌನ್ ಘೋಷಣೆಯಿಂದ ರಾಜ್ಯದಲ್ಲಿ ಹಾಲು ಬಳಕೆಯಾಗದೇ ನಷ್ಟವಾಗುತ್ತಿರುವುದನ್ನು ಮನಗಂಡ ಮುಖ್ಯಮಂತ್ರಿಗಳು ಹಾಲಿನ ಪುಡಿ ಸಿದ್ದಪಡಿಸಿ, ಪ್ರತಿ ಮಗುವಿಗೂ ಜೂನ್ ಹಾಗೂ ಜುಲೈ ತಿಂಗಳು ತಲಾ ಅರ್ಧ ಕೆ.ಜಿ. ಹಾಲಿನ ಪುಡಿ ನೀಡುವುದಾಗಿ  ಘೋಷಣೆ ಮಾಡಿರುವುದು ಸ್ವಾಗತಾರ್ಹ ಬೆಳವಣಿಗೆ. ಸರ್ಕಾರದ ಈ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಇಲಾಖೆ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಎಲ್ಲ ಮಕ್ಕಳಿಗೂ ಯಶಸ್ವಿಯಾಗಿ ತಲುಪಿಸುವ ಕೆಲಸ ಮಾಡಲಿದೆ ಎಂದಿದ್ದಾರೆ.

ಇನ್ನು ರಾಜ್ಯ ಸರ್ಕಾರ ತಮ್ಮ ಸೇವೆಯನ್ನು ಗುರುತಿಸಿ ವಿಶೇಷ ಪ್ಯಾಕೇಜ್ ನೀಡಿರುವುದರಿಂದ ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕೊರೊನಾ ನಿಯಂತ್ರಿಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿ, ಸರ್ಕಾರದ ಜೊತೆ ಕೈಜೋಡಿಸಬೇಕು ಎಂದು ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಉಪಲೋಕಾಯುಕ್ತರಾಗಿ ನೇಮಕ

ಉತ್ತರಪ್ರಭ ಸುದ್ದಿಬೆಂಗಳೂರ: ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ಹೈಕೋರ್ಟನ ಮಾಜಿ ನ್ಯಾಯಾಧೀಶರಾದ…

ಅವ್ವ ಪಾಸಿಟಿವ್, ಐಸಿಯುನಲ್ಲಿ ಕಂದ: ಗದಗ ಜಿಮ್ಸ್ ಸಿಬ್ಬಂದಿಯೇ ತಾಯಿ-ತಂದೆ..!

ಗದಗ: ಕೋವಿಡ್ ಸೋಂಕಿತ ಗರ್ಭಿಣಿಗೆ ಸಿಸೇರಿನ್ ಮೂಲಕ ಹೆರಿಗೆ ಮಾಡಿ, ತಾಯಿ-ಮಗು ಇಬ್ಬರ ಜೀವ ಕಾಪಾಡಿದ…

ಬೆಂಬಿಡದ ಮಳೆಗೆ ನಲುಗುತ್ತಿರುವ ಬೆಂಗಳೂರಿಗರು!

ಬೆಂಗಳೂರು : ನಿನ್ನೆ ಸಂಜೆಯಿಂದ ರಾತ್ರಿ ಪೂರ್ತಿ ಸುರಿದ ಮಳೆಯಿಂದಾಗಿ ನಗರದ ಹೊಸಕೆರೆ ಹಳ್ಳಿ ಸಂಪೂರ್ಣವಾಗಿ ಮುಳುಗಡೆಗೊಂಡಿದೆ. ಹೀಗಾಗಿ ಜನ – ಜೀವನ ಸಂಪೂರ್ಣವಾಗಿ ಹದಗೆಟ್ಟಿದೆ.

ನನ್ನ ಬಳಿ ಸಿಡಿ ಇವೆ ಅಂತ ನಾನು ಹೇಳಿಲ್ಲ: ರಾಜಶೇಖರ ಮುಲಾಲಿ

ರಮೇಶ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಷಡ್ಯಂತ್ರ ಅಂತಾ ಹೇಳಿದ್ದಾರೆ ಎಂದ ಅವರು, ನಾನು ಎಲ್ಲಿಯೂ ಸಹ ನನ್ನ ಬಳಿ ಸಿಡಿ ಇವೆ ಅಂತಾ ಹೇಳಿಲ್ಲ, ಯಾರ ಬಳಿಯಾದರೂ ನನ್ನ ಹೇಳಿಕೆಯ ದಾಖಲೆ ಇದ್ದರೆ ತೋರಿಸಿ ಎಂದು ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ ಹೇಳಿದರು.