ಬಿಸಿಯೂಟದ ಬದಲು ಅಹಾರ ನೀಡಿ : ಹೈಕೋರ್ಟ್ ಸೂಚನೆ

ಬೆಂಗಳೂರು : ಕೊರೊನಾ ಸೋಂಕು ಮಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟದ ಬದಲಿಗೆ ಅಹಾರ ಧಾನ್ಯ ವಿತರಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಕೋವಿಡ್ ನಿರ್ವಹಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಪಿಐಎಲ್ ಅರ್ಜಿಗಳ ವಿಚಾರಣೆ ನಡೆಸಿದ ಸಿಜೆ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.

ಕಳೆದ ಬಾರಿ ಕೊರೊನಾ ಸೋಂಕಿನಿಂದ ಶಾಲೆಗಳು ನಡೆಯದ ಕಾರಣದಿಂದ ಶಾಲಾ ಮಕ್ಕಳಿಗೆ ಬಿಸಿಯೂಟದ ಬದಲಿಗೆ ಮಕ್ಕಳಿಗೆ ಅಹಾರ ಧಾನ್ಯ ನೀಡಲಾಗಿತ್ತು ಅದೇ ರೀತಿ ಈ ಬಾರಿಯೂ ರಾಜ್ಯ ಸರ್ಕಾರ ಅಹಾರ ಧಾನ್ಯ ವಿತರಿಸಬೇಕು ಎಂದು ನಿರ್ದೇಶನ ನೀಡಿದೆ. ಶಾಲಾ ವಿದ್ಯಾರ್ಥಿಗಳಿಗೆ ಏಪ್ರಿಲ್ 14 ರಿಂದ ಈವರೆಗೆ ಆಹಾರ ಧಾನ್ಯಗಳನ್ನು ಒದಗಿಸಬೇಕು. ಈ ಕುರಿತಂತೆ ಕೈಗೊಂಡ ಕ್ರಮಗಳ ವರದಿಯನ್ನ ಮುಂದಿನ ವಿಚಾರಣೆ ವೇಳೆ ಸಲ್ಲಿಸಬೇಕು ಎಂದು ಸೂಚಿಸಿದೆ.

ನಂತರ ಈ ಲಾಕ್‌ಡೌನ್ ಸಮಯದಲ್ಲಿ ಸಮಾಜದ ದುರ್ಬಲ ವರ್ಗದವರಿಗಾಗಿ ಆಹಾರ ಕಿಟ್ ನೀಡುವ ಕುರಿತು ಮುಂದಿನ ಸೋಮವಾರದೊಳಗಾಗಿ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿದೆ.

Exit mobile version