ಗಜೇಂದ್ರಗಡ: ಮಹಾಮಾರಿ ಕೊರೊನಾ ಹೊಡೆದೊಡಿಸುವ ಉದ್ದೇಶದಿಂದ ಬೀದಿ ಬದಿ ವ್ಯಾಪಾರಸ್ಥರು ಕಡ್ಡಾಯವಾಗಿ ಲಸಿಕೆ ಪಡೆಯಲು ಮುಂದಾಗಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಪಟ್ಟಣದ ತಹಶಿಲ್ದಾರ ಕಚೇರಿ ಆವರಣದಲ್ಲಿ ಪುರಸಭೆ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರಿಗೆ ಲಸಿಕೆ ನೀಡುವಿಕೆಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್ ಎರಡನೇ ಅಲೆ ತೀವೃವಾಗಿ ಹಬ್ಬುತ್ತಿದೆ. ಇದನ್ನು ತಡೆಗಟ್ಟಲು ಲಸಿಕೆಯೊಂದೆ ಅಸ್ತ್ರವಾಗಿದೆ. ಹೀಗಾಗಿ ಮುಂಚೂಣಿ ಕಾರ್ಯಕರ್ತರಾಗಿರುವ ಬೀದಿ ಬದಿ ವ್ಯಾಪಾರಸ್ಥರಿಗೂ ಲಸಿಕೆ ನೀಡಲು ಸರ್ಕಾರ ಸೂಚಿಸಿದ ಹಿನ್ನಲೆಯಲ್ಲಿ ಲಸಿಕೆ ವಿತರಣೆ ಮಾಡಲಾಗುತ್ತಿದೆ. ಪಟ್ಟಣದಲ್ಲಿನ ಪ್ರತಿಯೊಬ್ಬ ಬೀದಿ ಬದಿ ವ್ಯಾಪಾರಸ್ಥರೂ ಸಹ ಲಸಿಕೆ ಹಾಕಿಸಿಕೊಳ್ಳಬೇಕು. ಇಲ್ಲದಿದ್ದರೆ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದರು.

ವೈದ್ಯಾಧಿಕಾರಿ ಡಾ. ರಮೇಶ ದೇವಗಿನಹಳ್ಳಿ ಮಾತನಾಡಿ, ಕೋವಿಡ್ ಲಸಿಕೆ ಪ್ರತಿಯೊಬ್ಬ ಭಾರತೀಯನ ಹಕ್ಕಾಗಿದೆ. ಹೀಗಾಗಿ ಎಲ್ಲರೂ ಕಡ್ಡಾಯವಾಗಿ ಪಡೆದುಕೊಳ್ಳುವ ಮೂಲಕ ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕಿದೆ ಎಂದರು.

ಇದೇ ಸಮದರ್ಭದಲ್ಲಿ 200ಕ್ಕೂ ಅಧಿಕ ಬೀದಿ ಬದಿ ವ್ಯಾಪಾರಸ್ಥರಿಗೆ ಲಸಿಕೆ ನೀಡಲಾಯಿತು. ಪಿಎಸ್‌ಐ ಗುರುಶಾಂತ್ ದಾಶ್ಯಾಳ, ಅಶೋಕ ವನ್ನಾಲ, ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಅಧ್ಯಕ್ಷ ಬಾಷೇಸಾಬ ಕರ್ನಾಚಿ, ರಾಘವೇಂದ್ರ ಮಂತಾ, ಶಿವಕುಮಾರ ಇಲ್ಲಾಳ, ಆನಂದ ಮಳಗಿ, ರಾಜು ಮಾಂಡ್ರೆ, ಹುಲ್ಲಪ್ಪ ತಳವಾರ ಸೇರಿದಂತೆ ಇನ್ನಿತರರು ಇದ್ದರು.

Leave a Reply

Your email address will not be published. Required fields are marked *

You May Also Like

ಎರಡನೇ ಹಂತದ ಕೋವಿಡ್ ಪರಿಹಾರ ಪ್ಯಾಕೇಜ್ ಘೋಷಣೆ ಯಾವಾಗ?: ಸಿಎಂ ಹೇಳಿದ್ದೇನು?

ಬೆಂಗಳೂರು: ಈಗಾಗಲೇ ಕೋವಿಡ್ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಎರಡನೇ ಹಂತದ ಪರಿಹಾರ ಪ್ಯಾಕೇಜ್ ಘೋಷಣೆ ಮಾಡುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮೊದಲ ಹಂತದ ಪ್ಯಾಕೇಜ್ ಕುರಿತು ಸಾಕಷ್ಟು ಮನವಿಗಳು ಹಾಗೂ ಬೇಡಿಕೆಗಳು ವ್ಯಕ್ತವಾದ ಹಿನ್ನೆಲೆ ಎಲ್ಲರಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಎರಡನೇ ಹಂತದ ಪ್ಯಾಕೇಜನ್ನು ಸಿಎಂ ಘೋಷಣೆ ಮಾಡಲಿದ್ದಾರೆ.

ಜೈಲಿನಲ್ಲಿ ಇದ್ದುಕೊಂಡೇ ಅಪಹರಣಕ್ಕೆ ಸಂಚು!

ಪರಪ್ಪನ ಅಗ್ರಹಾರದಿಂದಲೇ ಕಿಡ್ನಾಪ್ಗೆ ಸಂಚು ರೂಪಿಸಿ, ತನ್ನ ಚೇಲಾಗಳ ಮೂಲಕ ಅದನ್ನು ಕಾರ್ಯರೂಪಕ್ಕೆ ತಂದಿದ್ದಾನೆ ಬೋಂಡ ಮಂಜ.

ಕೂತುಹಲ ಕೆರಳಿಸಿದ ಸಿದ್ದರಾಮಯ್ಯ ದೆಹಲಿ ಬೇಟಿ

ಮಾಜಿ ಸಿಎಂ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ದಿಢೀರ್‌ ದೆಹಲಿ ಭೇಟಿಗೆ ಮುಂದಾಗಿದ್ದಾರೆ.

ಲಾಕ್ ಡೌನ್ ಮಾನದಂಡ ಸಡಿಲಿಕೆಯಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆಯಾ?

ಲಾಕ್‌ಡೌನ್ ಮಾನದಂಡಗಳನ್ನು ಸಡಿಲಿಸಿದ ನಂತರ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಏರಿಕೆಯಾಗಿದೆಯೇ ಎಂಬುವುದನ್ನು ಖಚಿತಪಡಿಸಿಕೊಳ್ಳಲು, ಆರೋಗ್ಯ ಇಲಾಖೆ ಎಲ್ಲ ನಾಗರಿಕರ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿದೆ.