ಗಜೇಂದ್ರಗಡ: ಮಹಾಮಾರಿ ಕೊರೊನಾ ಹೊಡೆದೊಡಿಸುವ ಉದ್ದೇಶದಿಂದ ಬೀದಿ ಬದಿ ವ್ಯಾಪಾರಸ್ಥರು ಕಡ್ಡಾಯವಾಗಿ ಲಸಿಕೆ ಪಡೆಯಲು ಮುಂದಾಗಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಪಟ್ಟಣದ ತಹಶಿಲ್ದಾರ ಕಚೇರಿ ಆವರಣದಲ್ಲಿ ಪುರಸಭೆ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರಿಗೆ ಲಸಿಕೆ ನೀಡುವಿಕೆಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್ ಎರಡನೇ ಅಲೆ ತೀವೃವಾಗಿ ಹಬ್ಬುತ್ತಿದೆ. ಇದನ್ನು ತಡೆಗಟ್ಟಲು ಲಸಿಕೆಯೊಂದೆ ಅಸ್ತ್ರವಾಗಿದೆ. ಹೀಗಾಗಿ ಮುಂಚೂಣಿ ಕಾರ್ಯಕರ್ತರಾಗಿರುವ ಬೀದಿ ಬದಿ ವ್ಯಾಪಾರಸ್ಥರಿಗೂ ಲಸಿಕೆ ನೀಡಲು ಸರ್ಕಾರ ಸೂಚಿಸಿದ ಹಿನ್ನಲೆಯಲ್ಲಿ ಲಸಿಕೆ ವಿತರಣೆ ಮಾಡಲಾಗುತ್ತಿದೆ. ಪಟ್ಟಣದಲ್ಲಿನ ಪ್ರತಿಯೊಬ್ಬ ಬೀದಿ ಬದಿ ವ್ಯಾಪಾರಸ್ಥರೂ ಸಹ ಲಸಿಕೆ ಹಾಕಿಸಿಕೊಳ್ಳಬೇಕು. ಇಲ್ಲದಿದ್ದರೆ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದರು.

ವೈದ್ಯಾಧಿಕಾರಿ ಡಾ. ರಮೇಶ ದೇವಗಿನಹಳ್ಳಿ ಮಾತನಾಡಿ, ಕೋವಿಡ್ ಲಸಿಕೆ ಪ್ರತಿಯೊಬ್ಬ ಭಾರತೀಯನ ಹಕ್ಕಾಗಿದೆ. ಹೀಗಾಗಿ ಎಲ್ಲರೂ ಕಡ್ಡಾಯವಾಗಿ ಪಡೆದುಕೊಳ್ಳುವ ಮೂಲಕ ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕಿದೆ ಎಂದರು.

ಇದೇ ಸಮದರ್ಭದಲ್ಲಿ 200ಕ್ಕೂ ಅಧಿಕ ಬೀದಿ ಬದಿ ವ್ಯಾಪಾರಸ್ಥರಿಗೆ ಲಸಿಕೆ ನೀಡಲಾಯಿತು. ಪಿಎಸ್‌ಐ ಗುರುಶಾಂತ್ ದಾಶ್ಯಾಳ, ಅಶೋಕ ವನ್ನಾಲ, ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಅಧ್ಯಕ್ಷ ಬಾಷೇಸಾಬ ಕರ್ನಾಚಿ, ರಾಘವೇಂದ್ರ ಮಂತಾ, ಶಿವಕುಮಾರ ಇಲ್ಲಾಳ, ಆನಂದ ಮಳಗಿ, ರಾಜು ಮಾಂಡ್ರೆ, ಹುಲ್ಲಪ್ಪ ತಳವಾರ ಸೇರಿದಂತೆ ಇನ್ನಿತರರು ಇದ್ದರು.

Leave a Reply

Your email address will not be published. Required fields are marked *

You May Also Like

ನಿವೃತ್ತ ಕರಣಿಕ ಶಾಂತೂ ತಡಸಿಗೆ ಹೃದಯಸ್ಪರ್ಶಿ ಸನ್ಮಾನ ಗುರುಗಳೇ ದೇವರು ಶಿಷ್ಯರೇ ಭಕ್ತರು-ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ

ಉತ್ತರಪ್ರಭ ಸುದ್ದಿಆಲಮಟ್ಟಿ: ಮಕ್ಕಳನ್ನು ಪರಿಪೂರ್ಣ ಶಿಲೆಗಳನ್ನಾಗಿ ರೂಪಿಸುವಲ್ಲಿ ಗುರುಗಳ ಹಾಗು ಗುರುಮಾತೆಯರ ಪಾತ್ರ ಬಹುಮುಖ್ಯ ಎಂದು…

ಒಡಿಶಾ ಸಿಎಂ ಜೊತೆ ಪ್ರಧಾನಿ ಸಭೆ: ಯಾಸ್ ಚಂಡಮಾರುತದಿಂದ ಹಾನಿ ಮಾಹಿತಿ

ಭುವನೇಶ್ವರ: ಶುಕ್ರವಾರ ಬೆಳಗ್ಗೆ ಭುವನೇಶ್ವರದ ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಲ್ಲಿನ ವಿಮಾನ ನಿಲ್ದಾಣದ ಕಾನ್ಫರೆನ್ಸ್ ಹಾಲ್ ನಲ್ಲಿ ಇಡಿಶಾ ಸಿಎಂ ನವೀನ್ ಪಟ್ನಾಯಕ್ ಜೊತೆ ಸಭೆ ನಡೆಸಿದ್ದಾರೆ.

ಕೇಂದ್ರ ಸರ್ಕಾರದ ದುರಾಡಳಿತದಿಂದ ನಿರುದ್ಯೋಗ ಸಮಸ್ಯೆ ಹೆಚ್ಚಳ: ಜಿ.ಎಸ್.ಪಾಟೀಲ್

೨೩ಜಿಜೆಡಿ೪: ಗಜೇಂದ್ರಗಡ ಪಟ್ಟಣದ ಸರ್ಕಾರಿ ಡಿಪ್ಲೋಮಾ ಕಾಲೇಜಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಆರ್.ಎಂ. ಕುಬೇರಪ್ಪನವರ ಪರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಎಸ್. ಪಾಟೀಲ ಮತಯಾಚಿಸಿ, ಮಾತನಾಡಿದರು.

ರೋಣ ಸಾಹಿತ್ಯ ಭವನದಲ್ಲಿ ಶ್ರೀ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆ

ರೋಣ: ಸಾಹಿತ್ಯ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ…