ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡಿದ ಶಿಕ್ಷಣ ಲಾಖೆ ಸಚಿವ ಸುರೇಶ್ ಕುಮಾರ ಅವರು ಜುಲೈ ತಿಂಗಳಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿದ್ದು, ಶಿಕ್ಷಣ ಇಲಾಖೆ ಈ ನಿರ್ಧಾರಕ್ಕೆ ಸರ್ಕಾರದಿಂದಲೇ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಸುರೇಶ್ ಕುಮಾರ್ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತು ಪ್ರಕಟಣೆ ಹೊರಡಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಕೊರೋನಾ ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದ ಬಳಿಕವೇ ಸರ್ಕಾರ ಪರೀಕ್ಷೆ ನಡೆಸಲಿದೆ. ಒಂದು ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದಿದ್ದರೆ ಪರೀಕ್ಷೆ ರದ್ದುಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಪರೀಕ್ಷಾ ವೇಳಾಪಟ್ಟಿಯನ್ನು ಪರೀಕ್ಷೆಗೆ 15 ದಿನ ಮೊದಲೇ ಪ್ರಕಟಿಸಲಾಗುವುದು. ಪರೀಕ್ಷಾ ಕೇಂದ್ರ ದುಪ್ಪಟ್ಟುಗೊಳಿಸಲಾಗುವುದು. ಒಂದು ಕೊಠಡಿಗೆ ಗರಿಷ್ಠ 12 ವಿದ್ಯಾರ್ಥಿಗಳು ಮಾತ್ರ. ಒಂದು ಡೆಸ್ಕ್ ಗೆ  ಒಬ್ಬ ವಿದ್ಯಾರ್ಥಿಗಳು ಕಳುತಿಕೊಳ್ಳಲು ವ್ಯವಸ್ಥೆ ಮಾಡಲಾಗುವುದು. ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ಶಿಕ್ಷಕರು ಹಾಗೂ ಸಿಬ್ಬಂದಿಯವರು ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗುವುದು. ಕೋವಿಡ್ ಮರ‍್ಗಸೂಚಿ ಅನುಸರಿಸುವುದು ಕಡ್ಡಾಯಗೊಳಿಸಲಾಗುವುದು ಎಂದು ವಿವರಿಸಿದರು.

ಎರಡು ದಿನ ಪರೀಕ್ಷೆಯಲ್ಲಿ ಪ್ರತಿ ವಿಷಯದ 40 ಅಂಕದ ಪ್ರಶ್ನೆಗಳಿಗೆ ಉತ್ತರಿಸಿ ವಿದ್ಯರ‍್ಥಿಗಳು ಪಡೆದ ಫಲಿತಾಂಶವನ್ನು ಪ್ರತಿ ವಿಷಯಕ್ಕೆ ಗರಿಷ್ಠ 80 ಅಂಕಗಳಿಗೆ ಪರಿರ‍್ತಿಸಿ ಪ್ರತಿ ರ‍್ಷದಂತೆ ಇಂರ‍್ನಲ್ ಅಂಕಗಳನ್ನೂ ಸೇರಿಸಿ ಗ್ರೇಡ್ ಆಧಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ಯಾವುದೇ ವಿದ್ಯರ‍್ಥಿಯನ್ನೂ ಅನುತ್ತರ‍್ಣಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ಪರೀಕ್ಷೆ ಆಯೋಜನೆ ಸಮಯ ಜುಲೈ 3ನೇ ವಾರ ಎಂಬುದು ಅಂತಿಮವಲ್ಲ. ಕೋವಿಡ್ ತಹಬದಿಗೆ ಬರದಿದ್ದರೆ ನಿರ್ಧಾರವನ್ನು ಪರಿಷ್ಕರಿಸಲಾಗುವುದು ಎಂದು ತಿಳಿಸಿದರು.

ಕೋವಿಡ್ ನಿಂದಾಗಿ ಎಸ್ಸೆಸ್ಸೆಲ್ಸಿ  ವಿದ್ಯಾರ್ಥಿಗಳ ಹಿಂದಿನ ಸಾಲಿನ (9ನೇ ತರಗತಿ) ಕಲಿಕಾ ಗುಣಮಟ್ಟದ ಮಾನದಂಡ ನಮ್ಮಲ್ಲಿ ಇಲ್ಲದಿರವ ಕಾರಣ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಸ್ತುತ ಸಾಲಿಗೆ ಸರಳೀಕರಿಸಿ ಒಂದು ದಿನ ಕೋರ್ ವಿಷಯಗಳು, ಮತ್ತೊಂದು ಭಾಷಾ ವಿಷಯಗಳ ಪರೀಕ್ಷೆ ನಡೆಸಲಾಗುತ್ತದೆ. ಕೇವಲ ಬಹು ಆಯ್ಕೆ ಪ್ರಶ್ನೆ ಆಧಾರಿತ ಪರೀಕ್ಷೆಯನ್ನು ನಡೆಸಲಾಗುವುದು.

ಕೋವಿಡ್ ಹಿನ್ನೆಲೆಯಲ್ಲಿ ಆರು ದಿನ ಪರೀಕ್ಷೆ ನಡೆಸಿದರೆ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬಂದು ಹೋಗುವುದು ಕಷ್ಟವಾಗುತ್ತದೆ. ಹಾಗಾಗಿ ಪ್ರತಿ ಮೂರು ವಿಷಯಕ್ಕೆ ಒಂದೊಂದು ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವುದು. ಒಟ್ಟು ಮೂರು ಕೋರ್ ವಿಷಯಗಳಿಗೆ 120 ಪ್ರಶ್ನೆಗಳುಳ್ಳ ಒಂದೇ ಪ್ರಶ್ನೆ ಪತ್ರಿಕೆ ನೀಡಲಾಗುವುದು. 3 ಭಾಷಾ ವಿಷಯಗಳಿಗೆ 120 ಪ್ರಶ್ನೆಗಳುಳ್ಳ ಒಂದೇ ಪ್ರಶ್ನೆಪತ್ರಿಕೆ ನೀಡಲಾಗುವುದು, ಪರೀಕ್ಷಾ ಸಮಯವನ್ನು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನಿಗದಿಪಡಿಸಿ, ಒಟ್ಟು 3 ಗಂಟೆ ಕಾಲಾವಕಾಶ ನೀಡಲಾಗುವುದು ಎಂದು ತಿಳಿಸಿದರು.

ಸರ್ಕಾರದ ನಿರ್ಧಾರದ ಕುರಿತು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ಕೊರೋನಾ ಸೋಂಕು ತಗುಲಿದ್ದೇ ಆದರೆ, ಸರ್ಕಾರವೇ ಜವಾಬ್ದಾರಿ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ. ತಾಂತ್ರಿಕ ಸಲಹಾ ಸಮಿತಿಯ ತಜ್ಞರು ಜುಲೈ ಮೂರನೇ ವಾರದಲ್ಲಿ ಪರೀಕ್ಷೆ ನಡೆಸುವುದು ಉತ್ತಮ ಎಂದು ಹೇಳಿದ್ದಾರೆ. ಪರೀಕ್ಷೆಗೂ 20 ದಿನ ಮೊದಲೇ ದಿನಾಂಕ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳ ಕಲಿಕಾ ಗುಣಮಮಟ್ಟ ಅಳೆಯಲು ನಮ್ಮ ಬಳಿ ಯಾವುದೇ ಮಾನದಂಡಗಳು ಇಲ್ಲದ ಕಾರಣ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಚಿಲಝರಿ ಗ್ರಾಮದಲ್ಲಿ ಸಾಮೂಹಿಕ ವಿವಾಹ

ಸಾಮೂಹಿಕ ವಿವಾಹಗಳು ಸಮಾಜದಲ್ಲಿ ಸೌಹಾರ್ದತೆ ಗಟ್ಟಿಗೊಳಿಸಿ ಮಾನವೀಯ ಮೌಲ್ಯಗಳು ವೃದ್ದಿಸುತ್ತವೆ ಈ ನಿಟ್ಟಿನಲ್ಲಿ ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಸಾಮೂಹಿಕ ವಿವಾಹಗಳಿಗೆ ಒತ್ತು ನೀಡಿ ಸ್ವಾಸ್ಥ್ಯೇಯ ಸಮಾಜ ನಿರ್ಮಾಣಕ್ಕೆ ಮುಂದಾಗಿ ಎಂದು ಅಕ್ಕನ ಬಳಗ ಅಧ್ಯಕ್ಷೆ ಸಂಯುಕ್ತಾ ಬಂಡಿ ಹೇಳಿದರು.

ಮಸ್ಕಿ: ನ.30 ರಂದು ಗ್ರಾಮ ಸ್ವರಾಜ್ಯ ಸಮಾವೇಶ

ಕ್ಷೇತ್ರದ ಬಿಜೆಪಿ ಪಕ್ಷದಿಂದ ನ.30ರಂದು ಪಟ್ಟಣದಲ್ಲಿ ಗ್ರಾಮ ಸ್ವರಾಜ್ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬರಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪಗೌಡ ನಕ್ಕಲದಿನ್ನಿ ಅವರು ಹೇಳಿದರು.