ಗದಗ: ಜೂನ್ ನಿಂದ ಜುಲೈ ವರೆಗೆ ವಿದ್ಯುತ್ ಬಿಲ್‌ಗಳನ್ನು 3 ತಿಂಗಳ ನಂತರ ಹಂತ ಹಂತವಾಗಿ ಪಾವತಿಸಿಕೊಳ್ಳಬೇಕು ಎಂದು ಪ್ರಜಾ ಪರಿವರ್ತನಾ ವೇದಿಕೆಯ ರಾಜ್ಯಾಧ್ಯಕ್ಷ ಬಸಯ್ಯ ನಂದಿಕೋಲಮಠ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ರಾಜ್ಯದಲ್ಲಿ ಲಾಕ್‌ಡೌನ್ ಘೋಷಣೆ ಆಗಿರುವುದರಿಂದ ಅಂಗಡಿಗಳೆಲ್ಲವೂ ಸಂಪೂರ್ಣ ಬಾಗಿಲುಗಳು ಮುಚ್ಚಿವೆ. ಬಡವರು ಕೈಯಲ್ಲಿ ಕೆಲಸವಿಲ್ಲದೆ ಬದುಕಲು ಪರದಾಡುವಂತಾಗಿದೆ. ಇಂತಹ ಸಮಯದಲ್ಲಿ ಕರೆಂಟ್ ಬಿಲ್ ನೀಡುವುದರಿಂದ ಜನರಿಗೆ ತೀರ ಕಷ್ದಟಕರವಾಗುತ್ತದೆ. ಆದ್ದರಿಂದ, ವಿದ್ಯುತ್ ಬಿಲ್ ಕಟ್ಟಲು ಜನರಿಗೆ ಮೂರು ತಿಂಗಳ ನಂತರ ಹಂತ ಹಂತವಾಗಿ ಬಿಲ್ ಕಟ್ಟಿಕೊಳ್ಳಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ ನಿಧನ

ಮುಂಬೈ: ಬಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ ನಿಧನ ಹೊಂದಿದ್ದಾರೆ. ಕಿಡ್ನಿ ವೈಫಲ್ಯದಿಂದ…

ಟೀಕಾಕಾರರಿಗೆ ಉತ್ತರ ಸಿಕ್ಕಿದೆ ಎಂದು ಭಾವಿಸುತ್ತೇನೆ: ಕೆ.ಸುಧಾಕರ್

ನಮ್ಮ ಬಗ್ಗೆ ವ್ಯಂಗ್ಯದ ಮಾತುಗಳನ್ನು ಆಡಿದ್ದವರಿಗೆ ಕ್ರಿಯಾಶೀಲ ಕಾರ್ಯ ಚಟುವಟಿಕೆಗಳ ಮೂಲಕ ಪ್ರತ್ಯುತ್ತರ ನೀಡಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಎಂಟು ತಿಂಗಳ ರಾಜಕೀಯ ಗ್ರಹಣದ ಬಳಿಕ ಸಚಿವರಾದ ನಮ್ಮನ್ನು ಪ್ರತಿಪಕ್ಷದ ಕೆಲವರು ಲೇವಡಿ ಮಾಡಿದ್ದರು. ಇವರು ಏನು ಮಾಡುತ್ತಾರೋ ನಾವು ನೋಡುತ್ತೇವೆ ಎಂದು ಟೀಕೆಗಳ ಸುರಿಮಳೆ ಗೈದಿದ್ದರು. ಈಗ ಅವರಿಗೆಲ್ಲ ಉತ್ತರ ಸಿಕ್ಕಿರಬೇಕು ಎಂದು ಭಾವಿಸಿದ್ದೇನೆ ಎಂದರು.

ನಾಳೆಯಿಂದ ರೈಲು ಸಂಚಾರ ಆರಂಭ

ಲಾಕ್ ಡೌನ್ ಹಿನ್ನೆಲೆ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಆದರೆ ಇದೀಗ ನಾಳೆಯಿಂದ ರೈಲು ಸಂಚಾರ ಆರಂಭವಾಗಲಿದ್ದು, ರೈಲು ಸಂಚಾರಕ್ಕೆ ರೈಲ್ವೇ ಇಲಾಖೆ ಕೆಲವು ಷರತ್ತುಗಳನ್ನು ವಿಧಿಸಿde.

ಸ್ಕೈಪ್ ಮೂಲಕ ಅಂತಿಮ ಕ್ರಿಯೇ: ಮನ ಮಿಡಿಯುವ ಘಟನೆ ವಿವರಿಸಿದ ಶಿಕ್ಷಣ ಸಚಿವ

ಪ್ರಾಥಮಿಕ ಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕೊರೊನಾ ತಂದ ಸಂಕಷ್ಟದ ಎರಡು ಮನಮಿಸಿಯುವ ಘಟನೆಗಳನ್ನು ಹೇಳಿದ್ದಾರೆ.