ಮಾಜಿ ಸಚಿವ ಡಾ.ಮಮ್ತಾಜ್ ಇನ್ನಿಲ್ಲ

ಮಾಜಿ ಸಚಿವ ಡಾ.ಮಮ್ತಾಜ್ ಇನ್ನಿಲ್ಲ

ಬೆಂಗಳೂರು: ಮಾಜಿ ಸಚಿವ, ನಿವೃತ್ತ ಪ್ರೊಫೆಸರ್ ಮಮ್ತಾಜ್ ಅಲಿಖಾನ್ (94) ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಬೆಂಗಳೂರಿನ ಗಂಗಾನಗರ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಕೆ ಇಂದು ಮಧ್ಯಾಹ್ನ ನಗರದ ಅರಮನೆ ರಸ್ತೆಯಲ್ಲಿನ ಖುದ್ದೂಸ್ ಸಾಹೇಬ್ ಖಬರ್ ಸ್ಥಾನ್ ನಲ್ಲಿ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ.

2008ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸಂಪುಟದಲ್ಲಿ ಅಲ್ಪಸಖ್ಯಾತ ಕಲ್ಯಾಣ, ಹಜ್‌ವಕ್ತ್ ಖಾತೆ ಸಚಿವರಾಗಿ ಸೇವೆ ಸಲ್ಲಿಸಿದ್ದ ಖಾನ್ ಬೆಂಗಳೂರು ಕೃಷಿ ವಿವಿನಲಿ ಸಮಾಜಶಾಸ್ತ್ರ ಪ್ರೊಫೆಸರ್ ಆಗಿ ಸಹ ಕೆಲಸ ಮಾಡಿದ್ದಾರೆ.

ಮೃತ ಪುತ್ರನ ಹೆಸರಲ್ಲಿ ಆರ್.ಟಿ.ನಗರದಲ್ಲಿ ಮೂರು ದಶಕಗಳ ಕಾಲ ಶಾಲೆ ನಡೆಸುತ್ತಿದ್ದ ಖಾನ್ ತಮ್ಮ ಶಾಲೆಯಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ, ಮಧ್ಯಾಹ್ನದ ಬಿಸಿಯೂಟ ಸಹಿತ ಪಠ್ಯಪುಸ್ತಕ ಹಾಗೂ ಸಮವಸ್ತçಗಳನ್ನು ವಿತರಿಸುತ್ತಿದ್ದರು.

ಖಾನ ನಿಧನಕ್ಕೆ ಕಟಿಲ್ ಸಂತಪ :

ಮಾಜಿ ಸಚಿವ ಮಮ್ತಾಜ್ ಅಲಿಖಾನ ಅವರ ನಿಧನಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

ರಾಜ್ಯದ ಮಾಜಿ ಸಚಿವರಾಗಿದ್ದ ಡಾ.ಮುಮ್ತಾಜ್ ಅಲಿ ಖಾನ್ ಸಾಹೇಬ್ ಅವರು ನಿಧನರಾಗಿರುವ ವಿಚಾರ ತಿಳಿದು ಬೇಸರವಾಯಿತು. ಅವರ ಕುಟುಂಬದವರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಸಂತಾಪ:

ಮಾಜಿ ಸಚಿವ ಡಾ.ಮುಮ್ತಾಜ್ ಅಲಿಖಾನ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ, ಹಜ್, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದ ಅವರು, ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಗಮನಾರ್ಹ ಕೊಡುಗೆ ನೀಡಿದ್ದಾರೆ.

ಅವರ ನಿಧನದಿಂದ ಆತ್ಮೀಯ ಸ್ನೇಹಿತ ಹಾಗೂ ಸರಳ ಹಾಗೂ ಸಜ್ಜನ ಚಿಂತನಾಶೀಲ ರಾಜಕಾರಣಿಯೊಬ್ಬರನ್ನು ಕಳೆದುಕೊಂಡAತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಸಿಎಂ ಸಂತಾಪ ವ್ಯಕ್ತಪಡಿಸಿದ್ದಾರೆ.

Exit mobile version