ಬೆಂಗಳೂರು: ಜ್ವರ ಕಾನಿಸಿಕೊಂಡ ಹಿನ್ನಲೆಯಲ್ಲಿ ಈಚೆಗೆ ಮಣಿಪಾಲ ಆಸ್ಪತ್ರೆಗೆ ಧಾಖಲಾಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಿದ್ದಾರೆ.

ಆಸ್ಪತ್ರೆಯಿಂದ ಹೊರಟ ಸಿದ್ದರಾಮಯ್ಯ ಅವರನ್ನು ವೈದ್ಯರು ಹಾಗೂ ಸಿಬ್ಬಂದಿ ಬೀಳ್ಕೊಟ್ಟರು. ಕಳೆದ ಮಂಗಳವಾರ ಅವರಿಗೆ ಜ್ವರ ಕಾಣಿಸಿಕೊಂಡಿತ್ತು.

ಜ್ವರ ಕಾಣಿಸಿಕೊಂಡಿದ್ದರಿAದ ಈಚೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಪರೀಕ್ಷೆಯಲ್ಲಿ ಫಲಿತಾಂಶ ನೆಗೆಟಿವ್ ಬಂದಿತ್ತು. ಆದರೂ, ಮುನ್ನೆಚ್ಚರಿಕೆ ಕ್ರಮವಾಗಿ ಇನ್ನೂ ಎರಡು ದಿನ ಆಸ್ಪತ್ರೆಯಲ್ಲೇ ಉಳಿಯಲು ವೈದ್ಯರು ಸಲಹೆ ನೀಡಿದರು. ಆದ್ದರಿಂದ ಶನಿವಾರ ಡಿಸ್ಚಾರ್ಚ್ ಆಗಬೇಕಿದ್ದ ಸಿದ್ದರಾಮಯ್ಯ ಇಂದು ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.

ಆದರೂ ಸದ್ಯಕ್ಕೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೆ ಮತ್ತಷ್ಟು ದಿನ ಮನೆಯಲ್ಲೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಎಸ್.ಎಸ್‌.ಎಲ್.ಸಿ ಪರೀಕ್ಷೆ: ವಿದ್ಯಾರ್ಥಿಗಳು ಇಚ್ಛಿಸಿದ ಕೇಂದ್ರದಲ್ಲಿ ಪರೀಕ್ಷೆಗೆ ಅವಕಾಶ

ಬೆಂಗಳೂರು: ವಿದ್ಯಾರ್ಥಿಗಳು ತಾವು ಇಚ್ಛಿಸಿರುವ ಕೇಂದ್ರಗಳಲ್ಲಿಯೇ ಪರೀಕ್ಷೆಗಳನ್ನು ಬರೆಯಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ…

ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಗದಗ: ಕೋವಿಡ್-19ರ 2ನೇ ಅಲೆಯ ತೀವ್ರತೆಯ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತಿತರೆ ಚಟುವಟಿಕೆಗಳಿಗೆ ನಿರ್ಬಂಧಗಳನ್ನು ವಿಧಿಸಿರುವುದರಿಂದ ಆಟೋ ರಿಕ್ಷಾ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಷರತ್ತಿಗೊಳಪಟ್ಟು 3000 ರೂ.ಗಳ ಪರಿಹಾರ ಧನವನ್ನು ನೀಡಲು ಸರ್ಕಾರ ಆದೇಶಿಸಲಾಗಿದೆ.

ಅಧಿಕಾರ ಸ್ವೀಕರಿಸಿದ ಡಿಸಿ ಸುಂದರೇಶ್ ಬಾಬು ಪರಿಚಯ

ಗದಗ: ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸುಂದರೇಶಬಾಬು ಎಂ ಅವರನ್ನು ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿರುವ…

ರೈತ ವಿರೋಧಿ ಕಾಯ್ದೆ ಹಾಗೂ ಬೆಲೆ ಏರಿಕೆ ಖಂಡಿಸಿ ರ್ಯಾಲಿ ಪ್ರತಿಭಟನೆ.

ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರರ್ಕಾರ, ಸುಳ್ಳು ಆಶ್ವಾಸನೆ ನೀಡುವದರ ಮೂಲಕ ಅಧಿಕಾರವನ್ನು ಪಡೆದುಕೊಂಡ ಮೇಲೆ ಚುನಾವಣೆಯ ಸಂಧರ್ಭದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ.