ಬೆಂಗಳೂರು: ರಾಜ್ಯದ ಕೆಲ ಭಾಗಗಳಲ್ಲಿ ಕೋವಿಡ್-19 ಸೋಂಕು ಪ್ರಸರಣ ಇಳಿಕೆಯಾಗುತ್ತಿದ್ದು, ಜೂ.10 ರಂದು ಸಿಎಂ ಯಡಿಯೂರಪ್ಪ ಲಾಕ್‌ಡೌನ್ ಗೆ ಸಂಬಂಧಿಸಿದಂತೆ ಪರಿಷ್ಕೃತ ನಿಯಮಗಳನ್ನು ಪ್ರಕಟಿಸಿದ್ದಾರೆ.

ಕೋವಿಡ್-19 ತಡೆ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಬಂಧಗಳಲ್ಲಿ ಕೆಲವು ಮಾರ್ಪಾಡು ಸಡಿಲಿಕೆಗಳನ್ನು ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಪರಿಷ್ಕೃತ ನೀತಿಯ ಪ್ರಕಾರವಾಗಿ ರಾಜ್ಯದ 11 ಜಿಲ್ಲೆಗಳಲ್ಲಿ ಮತ್ತೆ ಪೂರ್ಣ ಪ್ರಮಾಣದ ಲಾಕ್ ಡೌನ್ ಮುಂದುವರೆಸಿದರೆ, ಉಳಿದ 19 ಜಿಲ್ಲೆಗಳಲ್ಲಿ ಸೆಮಿ ಲಾಕ್ ಡೌನ್ ನ್ನು ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿ ಸೋಂಕು ಪ್ರಮಾಣ ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ. ಅಂದರೆ ಈ ಜಿಲ್ಲೆಗಳಲ್ಲಿ ಲಾಕ್ ಡೌನ್ ಗೆ ಸಂಬಂಧಿಸಿದ ನಿಯಮಗಳು ಯಥಾಸ್ಥಿತಿ ಮುಂದುವರೆಯುತ್ತದೆ. ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಉಳಿದ ಜಿಲ್ಲೆಗಳಲ್ಲಿ ಪರಿಷ್ಕೃತ ನಿಯಮಗಳು ಜೂ.14 ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ ಜೂ.21ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಸಡಲಿಕೆಯಾದ ಜಿಲ್ಲೆಗಳಲ್ಲಿ ಎಲ್ಲಾ ಕಾರ್ಖಾನೆಗಳನ್ನು ಶೇ.50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಕೈಗಾರಿಕೆಗಳಿಗೆ ಮಾತ್ರ ಶೇ.30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ. ಎಲ್ಲಾ ಅಗತ್ಯ ಪದಾರ್ಥ ಖರೀದಿಸುವುದಕ್ಕೆ ಅನುವು ಮಾಡಿಕೊಡಲು ಅಂಗಡಿಗಳನ್ನು ಈಗಿರುವ ಸಮಯ ಬೆಳಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿರ್ಮಾಣ ಚಟುವಟಿಕೆ ಸಂಬAಧಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಪಾರ್ಕ್ ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ. ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ಕೋವಿಡ್ ಕರ್ಫ್ಯೂ ರಾತ್ರಿ 7 ರಿಂದ ಬೆಳಗ್ಗ 5ರ ವರೆಗೆ ಜಾರಿಯಲ್ಲಿರುತ್ತದೆ. ರಾಜ್ಯಾದ್ಯಂತ ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ರಿಂದ ಸೋಮವಾರ ಬೆಳಿಗ್ಗೆ 5ರ ವರೆಗೆ ಜಾರಿಯಲ್ಲಿರುತ್ತದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ರಾಜ್ಯಕ್ಕೆ ಎಷ್ಟನೇ ಸ್ಥಾನ ಗೊತ್ತಾ..?

ನಿನ್ನೆ ಮಧ್ಯಾಹ್ನದವರೆಗೂ ಕರ್ನಾಟಕ ರಾಜ್ಯವು 12ನೇ ಸ್ಥಾನದಲ್ಲಿತ್ತು, ಆದರೆ, ಪ್ರತಿ ದಿನ ರಾಜ್ಯದಲ್ಲಿ 200ಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿರುವುದರಿಂದಾಗಿ ಒಂದು ಸ್ಥಾನ ಮೇಲೆ ಏರಿದೆ.

ಸಂಗೀತಾಳಿಗೆ ಬೇಕಿದೆ ಸಹಾಯ: ಪಿಯಸಿಯಲ್ಲಿ ಶೇ.90 ಅಂಕ; ಬೆಂಬಿಡದ ಬಡತನದಿಂದ ಶಿಕ್ಷಣ ನಿಲ್ಲಿಸಲು ಮುಂದಾದ ವಿದ್ಯಾರ್ಥಿನಿ..!

ಪಿಯುಸಿ ಪರೀಕ್ಷೆಯಲ್ಲಿ ಶೇ.90 ಅಂಕ ಪಡೆದ ಪ್ರತಿಭಾವಂತೆಯ ಕಥೆ ಇದು. ಪಿಯುಸಿಯಲ್ಲಿನ ಹೆಚ್ಚು ಅಂಕದ ಉತ್ಸಾಹದಲ್ಲಿದ್ದ ವಿದ್ಯಾರ್ಥಿನಿಗೆ ಕುಟುಂಬದ ಆರ್ಥಿಕ ಸ್ಥಿತಿ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸುವ ಹಂತಕ್ಕೆ ತಂದಿದೆ. ಹೀಗಾಗಿ ಬದುಕಿನಲ್ಲಿ ಓದಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹತ್ತು ಹಲವು ಕನಸು ಕಟ್ಟಿಕೊಂಡಿದ್ದ ವಿದ್ಯಾರ್ಥಿನಿ ಸಂಗೀತಾಳಿಗೆ ಓದು ಮುಂದುವರೆಸುವುದು ಕಷ್ಟವಾಗಿದೆ.

ಲಕ್ಷ್ಮೇಶ್ವರ: ಸಿಬಿಐ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಲಕ್ಷ್ಮೇಶ್ವರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ನಿವಾಸ ಹಾಗೂ ಕಚೇರಿ ಮೇಲೆ ಸಿಬಿಐ ದಾಳಿ ಖಂಡಿಸಿ ಲಕ್ಷ್ಮೇಶ್ವರ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣ್ಣದ ಶಿಗ್ಲಿ ನಾಕಾದಲ್ಲಿ ಟೈರಗೆ ಬೆಂಕಿ ಹಂಚಿ ಪ್ರತಿಭಟನೆ ಮಾಡಿದರು.

ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆರ ಮನವಿ

ಮುಖ್ಯವಾಗಿ ಜಿಲ್ಲೆಯಲ್ಲಿನ ಆಯಾ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗು ಸಹಾಯಕಿಯರು ಎದುರಿಸುತ್ತಿರುವ ಸಮಸ್ಯೆಗಳ ಜೊತೆಗೆ ರಾಜ್ಯಮಟ್ಟದಲ್ಲಿನ ವಿವಿಧ ಬೇಡಿಕೆ ಇಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ಜಿಲ್ಲಾ ಸಮಿತಿಯಿಂದ ಸೋಮವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.