ಗದಗ: ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸಂಘ ಇವರ ಸಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜನಜಾಗೃತಿ ರಥಕ್ಕೆ ಜಿಲ್ಲಾಡಳಿತ ಭವನದಲ್ಲಿಂದು ಚಾಲನೆ ನೀಡಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್.ಎಸ್ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ದಿವಾಣಿ ನ್ಯಾಯಾಧೀಶ ಎಸ್.ಜಿ.ಸಲಗರೆಯವರು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಜನ ಜಾಗೃತಿ ರಥಕ್ಕೆ ಹಸಿರು ಧ್ವಜ ತೋರಿಸುವ ಮೂಲಕ ಚಾಲನೆ ನೀಡಿದರು.

ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿಷೇದ ಕಾಯ್ದೆ ಪ್ರಕಾರ 14 ವರ್ಷದ ಮೇಲ್ಪಟ್ಟ ಹಾಗೂ 18 ವರ್ಷ ಒಳಗಿನ ಕಿಶೋರ ಕಾರ್ಮಿಕರನ್ನು ಅಪಾಯಕಾರಿ ಉದ್ಯಮದಲ್ಲಿ ಹಾಗೂ 14 ವರ್ಷದ ಒಳಗಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಅಂತಹ ಅಪಾಯಕಾರಿ ಕಾರ್ಯಗಳಲ್ಲಿ ನೇಮಿಸಿಕೊಂಡವರ ವಿರುದ್ಧ 20,000 ದಿಂದ 50,000 ವರೆಗೆ ದಂಡ ಹಾಗೂ 6 ತಿಂಗಳಿAದ 3 ವರ್ಷದ ವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ ಎಂದು ಕಾರ್ಮಿಕ ಅಧಿಕಾರಿ ಸುಧಾ ಗರಗ ಹೇಳಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ರಾಚಪ್ಪ ಹುಣಸಿಮರದ, ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಸಂದೇಶ ಪಾಟೀಲ, ಮಕ್ಕಳ ಸಹಾಯವಾಣಿ-1098 ತಂಡ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ಬಣ್ಣದ ಮನೆ ಆರ್ಟ ಅಡ್ಡಾದಲ್ಲಿ ಇಂದು “ಜಾನಪದ ಗಾನ ಭಜಾನಾ”

ಗದಗ. ನಗರದ ಬಣ್ಣದ ಮನೆ ಆರ್ಟ್ ಅಡ್ಡಾದ ಸಾಂಸ್ಕೃತಿಕ ಭವನದಲ್ಲಿ ಇಂದು ಸಂಜೆ 7-00ಘಂಟೆಗೆ ಗೀಯ…

ಶಿವಾನುಭದಲ್ಲಿಂದು ಜ. ಮಾತೆಮಹಾದೇವಿ ಸ್ಮರಣೆ

ಲಿಂಗಾಯತ ಪ್ರಗತಿಶೀಲ ಸಂಘ, ಆಶ್ರಯದಲ್ಲಿಂದು ಎಡೆಯೂರು ಜಗದ್ಗುರು ತೋಂಟದಾರ್ಯ ಮಠದಲ್ಲಿ ಜರುಗುವ ಶಿವಾನುಭವದಲ್ಲಿ ವಿಶ್ವದ ಪ್ರಥಮ ಮಹಿಳಾ ಜಗದ್ಗುರು ಡಾ. ಮಾತೆಮಹಾದೇವಿ ಅವರು 2ನೇ ಸ್ಮರಣೋತ್ಸವ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಬೀಜ, ಗೊಬ್ಬರ ಕಾಳ ಸಂತೆಯಲ್ಲಿ ಮಾರಾಟ ಮಾಡಿದರೆ ಕ್ರಮ : ಸಚಿವ ಸಿ.ಸಿ.ಪಾಟೀಲ್

ಈಗಾಗಲೇ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಉತ್ತಮ ಮುಂಗಾರಿನ ನಿರೀಕ್ಷೆ ಇದೆ. ಕಳ್ಳ ಸಂತೆಯಲ್ಲಿ ಬೀಜ ಗೊಬ್ಬರ ಮಾರಾಟ ಮಾಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.

ರಾಜ್ಯಪಾಲ ಆಗಮನ- ಆಲಮಟ್ಟಿ ಫೂಲ್ ಟೈಟ್ : ಎತ್ತ ನೋಡಿದರೂ ಪೋಲೀಸ್ ಸರ್ಪಗಾವಲು-ಬಿಗಿ ಭದ್ರತೆ

ಉತ್ತರಪ್ರಭಆಲಮಟ್ಟಿ: ರಾಜ್ಯಪಾಲ ಥಾವರ್ ಚೆಂದ ಗೆಹ್ಲೂಟ್ ಮಂಗಳವಾರ ಮುಸ್ಸಂಜೆ ಆಗಮನದ ಹಿನ್ನಲೆಯಲ್ಲಿ ಕೃಷ್ಣಾ ತೀರದ ಹಸಿರು…